Homeಕರ್ನಾಟಕಸೋನಿಯಾ ಗಾಂಧಿ ಕರ್ನಾಟಕದಿಂದ ರಾಜ್ಯಸಭೆಗೆ? ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ಡಿಕೆ ಶಿವಕುಮಾರ್

ಸೋನಿಯಾ ಗಾಂಧಿ ಕರ್ನಾಟಕದಿಂದ ರಾಜ್ಯಸಭೆಗೆ? ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ಡಿಕೆ ಶಿವಕುಮಾರ್

- Advertisement -
- Advertisement -

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕರ್ನಾಟಕ ರಾಜ್ಯದಿಂದ ರಾಜ್ಯಸಭಾ ಸ್ಥಾನ ನೀಡುವ ಸಾಧ್ಯತೆ ಇದೆ ಎಂಬ ಕೆಲವು ಮಾಧ್ಯಮ ವರದಿ ಮಾಡಿದ್ದವು. ಈ ಸುದ್ದಿ ಸುಳ್ಳು ಮತ್ತು ಊಹಾಪೋಹ ಎಂದು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿ ಕೆ ಶಿವಕುಮಾರ್ ಹೇಳಿದ್ದಾರೆ ಮತ್ತು ಅಂತಹ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ ಇದ್ದು ಅವರಿಗೆ ಕರ್ನಾಟಕದಿಂದ ರಾಜ್ಯಸಭಾ ಸ್ಥಾನ ನೀಡಬಹುದು ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು. ಇದಲ್ಲದೆ  ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಕರ್ನಾಟಕ ಇಲ್ಲವೆ ಹಿಮಾಚಲ ಪ್ರದೇಶದಿಂದ ರಾಜ್ಯಸಭಾ ಚುನಾವಣೆಯಲ್ಲಿ ಕಣಕ್ಕೆ ಇಳಿಸುವ ಕುರಿತು ಹೈಕಮಾಂಡ್‌ ಮಟ್ಟದಲ್ಲಿ ಈಗಾಗಲೇ ಚರ್ಚೆಗಳು ನಡೆದಿವೆ ಎಂದು  ಕೂಡ ಸುದ್ದಿಯಾಗಿದ್ದವು.

ಈ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌, ಅಂತಹ ಎಲ್ಲಾ ಮಾಹಿತಿಗಳು ಸುಳ್ಳು, ಅಂತಹ ಯಾವುದೇ ಚರ್ಚೆಗಳು ನಡೆದಿಲ್ಲ. ಮಾದ್ಯಮಗಳು ಇಂತಹ ಊಹಾಪೋಹಗಳನ್ನು ಸೃಷ್ಟಿಸಿದೆ.  ಅಂತಹ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದೇ ವೇಳೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮಾನ್ ಧ್ವಜದ ವಿವಾದದ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಡಿಸಲು ಇಂತಹ ಕೃತ್ಯಗಳನ್ನು ಮಾಡಲಾಗುತ್ತಿದೆ. ಮುಗ್ಧ ಗ್ರಾಮಸ್ಥರನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ, ಹಳೆ ಮೈಸೂರು ಭಾಗದಲ್ಲಿ ಎಲ್ಲಾ ಜಾತಿ, ಧರ್ಮದ ಜನರು ಶಾಂತಿ ಮತ್ತು ಸಹೋದರತೆಯಿಂದ ಬದುಕುತ್ತಿದ್ದಾರೆ, ಈಗ ಅವರು ಹೊಸ ಪ್ರಯೋಗ ಮಾಡಲು ಪ್ರಯತ್ನಿಸುತ್ತಿದ್ದಾರೆ. ರಾಷ್ಟ್ರಧ್ವಜ ಮತ್ತು ಕನ್ನಡ ಧ್ವಜಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ರಾಷ್ಟ್ರಧ್ವಜ ಮತ್ತು ಸಂವಿಧಾನವನ್ನು ರಕ್ಷಿಸಲು ಮತ್ತು ಗೌರವಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಈಗ ಮನೆ ಮನೆಗೂ ಹನುಮಾನ್ ಧ್ವಜ ಹಂಚಲು ಬಿಜೆಪಿ ಮುಂದಾಗಿದೆ,  ‘ಬಿಜೆಪಿ ‘ಹರ್ ಘರ್ ತಿರಂಗ’ ಅಭಿಯಾನ ನಡೆಸಿತ್ತು, ಈಗ ಅದು ಏನಾಯ್ತು? ಈಗ ತಿರಂಗ ಬಿಟ್ಟು ಹೋಗಿದ್ದು ಯಾಕೆ?  ಎಂದು ಡಿಕೆ ಶಿವಕುಮಾರ್‌ ಅವರು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ಅವರು ತಮ್ಮ ಪಕ್ಷವನ್ನು ಬಿಜೆಪಿಯೊಂದಿಗೆ ಬಹುತೇಕ ವಿಲೀನಗೊಳಿಸಿದಂತಿದೆ. ಏನು ಬೇಕಾದರೂ ಮಾಡಿ, ಅದು ಅವರ ಪಕ್ಷದ ವಿಷಯ, ಅವರು ಯಾವುದೇ ಬಣ್ಣದ ಯಾವುದೇ ಶಾಲು ಧರಿಸಬಹುದು. ಮಂಡ್ಯದಲ್ಲಿ ಬಿಜೆಪಿಗೆ ನೆಲೆ ಇಲ್ಲ, ಹೀಗಾಗಿ ಜೆಡಿಎಸ್‌ನ ಬಲವನ್ನು ಅಲ್ಲಿ ಬಳಸಿಕೊಳ್ಳುತ್ತಿದ್ದಾರೆ, ಕೊನೆಗೆ ಯಾರು ಯಾರನ್ನು ನುಂಗುತ್ತಾರೋ ನೋಡೋಣ ಎಂದು ಹೇಳಿದ್ದಾರೆ.

ಇದನ್ನು ಓದಿ: ಇವಿಎಂ ತಯಾರಿಸುವ BEL ಬೋರ್ಡ್‌ಗೆ ಬಿಜೆಪಿ ನಾಯಕರ ನಾಮನಿರ್ದೇಶನ!

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ, ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ

0
'ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್ ಹರಿಸಲಿದೆ' ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗ...