Homeಕರ್ನಾಟಕಎಫ್‌ಸಿಐ ಗೋದಾಮಿನಲ್ಲಿ ಕೊಳೆಯುತ್ತಿರುವ 18 ಮಿಲಿಯನ್ ಟನ್ ಅಕ್ಕಿ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಕಿಡಿ

ಎಫ್‌ಸಿಐ ಗೋದಾಮಿನಲ್ಲಿ ಕೊಳೆಯುತ್ತಿರುವ 18 ಮಿಲಿಯನ್ ಟನ್ ಅಕ್ಕಿ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಕಿಡಿ

- Advertisement -
- Advertisement -

ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಗೋದಾಮುಗಳಲ್ಲಿ 18 ಮಿಲಿಯನ್ ಟನ್‌ಗಿಂತಲೂ ಹೆಚ್ಚು ಅಕ್ಕಿ ಕೊಳೆಯುತ್ತಿದ್ದು, ಅದನ್ನು ವಿಲೇವಾರಿ ಮಾಡಲು ಕೇಂದ್ರ ಸರ್ಕಾರ ಪರದಾಡುತ್ತಿದೆ ಎಂದು ವರದಿಗಳು ಹೇಳಿವೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆವೈ) ಅಡಿಯಲ್ಲಿ ಬಡವರಿಗೆ ಉಚಿತವಾಗಿ ವಿತರಿಸುವ ಅಕ್ಕಿಯ ವಿಶೇಷಣಗಳನ್ನು ಪರಿಷ್ಕರಿಸುವ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ, ಎಫ್‌ಸಿಐ ಗೋದಾಮುಗಳಲ್ಲಿನ ಅಕ್ಕಿಯ ವಿಲೇವಾರಿಗೆ ಸರ್ಕಾರ ಪರ್ಯಾಯ ಮಾರ್ಗಗಳನ್ನು ಹುಡುಕುತ್ತಿದೆ. ಸಿಫ್ಟರ್‌ಗಳು, ಗ್ರೇಡರ್‌ಗಳು ಮತ್ತು ಇತರ ಯಂತ್ರೋಪಕರಣಗಳ ಕೊರತೆಯಿಂದ ಗರೀಬ್ ಕಲ್ಯಾಣ್ ಯೋಜನೆಯ ಅಕ್ಕಿ ಪರಿಷ್ಕರಿಸುವ ಪ್ರಸ್ತಾವನೆಯು ತುಂಬಾ ದುಬಾರಿ ಮತ್ತು ಶ್ರಮದಾಯಕವೆಂದು ಕಂಡು ಬಂದಿದೆ ಎಂದು ಇಬ್ಬರು ಅಧಿಕಾರಿಗಳು ಉಲ್ಲೇಖಿಸಿ livemint.com ವರದಿ ಮಾಡಿದೆ.

ಪಿಎಂಜಿಕೆವೈ ಅಡಿಯಲ್ಲಿ ಅಕ್ಕಿ ಹಂಚಿಕೆಯನ್ನು ಹೆಚ್ಚಿಸುವುದು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ನೌಕರರಿಗೆ ಉಚಿತ ಆಹಾರವನ್ನು ನೀಡುವುದು ಮತ್ತು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ಇಎಂಎಸ್‌ಎಸ್‌) ಅಡಿಯಲ್ಲಿ ಅಕ್ಕಿ ಬೆಲೆಯನ್ನು ಕಡಿಮೆ ಮಾಡುವುದು ಪ್ರಸ್ತುತ ಎಫ್‌ಸಿಐ ಮೇಜಿನ ಮೇಲೆ ಇರುವ ಪ್ರಸ್ತಾವಣೆಗಳಾಗಿವೆ. ಇವುಗಳನ್ನು ಕಾರ್ಯಗತಗೊಳಿಸುವುದು ಅಸಾಧ್ಯ ಎಂಬುವುದು ಸರ್ಕಾರಕ್ಕೆ ಮನದಟ್ಟಾಗಿದೆ.

ಎಫ್‌ಸಿಐ ಗೋದಾಮುಗಳಲ್ಲಿ 18 ಮಿಲಿಯನ್ ಟನ್‌ಗಿಂತಲೂ ಹೆಚ್ಚು ಅಕ್ಕಿ ಸುಮ್ಮನೆ ಕೊಳೆಯುತ್ತಿದೆ ಎಂಬ ವರದಿ ನೋಡಿದ ರಾಜ್ಯ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಹಲವು ಪ್ರಶ್ನೆಗಳನ್ನು ಎತ್ತಿದೆ.

“ಬಡವರ ಹೊಟ್ಟೆಗೆ ವಂಚಿಸುವುದಕ್ಕಿಂತ ದೊಡ್ಡ ಕ್ರೌರ್ಯ ಇನ್ನೊಂದಿಲ್ಲ. 18 ಮಿಲಿಯನ್ ಟನ್ ಅಕ್ಕಿ ಹುಳು ಹಿಡಿದರೂ ಪರವಾಗಿಲ್ಲ, ಬಡವರ ಹೊಟ್ಟೆಗೆ ಅನ್ನವಾಗಬಾರದು ಎನ್ನುವ ಕೇಂದ್ರ ಸರ್ಕಾರದ ಧೂರ್ತತನಕ್ಕೆ ಜನತೆ ಪಾಠ ಕಲಿಸಲಿದ್ದಾರೆ. ಅನ್ನಭಾಗ್ಯ ಯೋಜನೆಗಾಗಿ ರಾಜ್ಯ ಸರ್ಕಾರ ಕೆಜಿಗೆ 34 ರೂಪಾಯಿಯಂತೆ ಖರೀದಿಗೆ ಕೇಳಿದರೂ ಕೊಡಲೊಪ್ಪದ ಕೇಂದ್ರ ಸರ್ಕಾರ, ಈಗ ಗೋದಾಮುಗಳಲ್ಲಿ ದಾಸ್ತಾನಿರುವ ಅಕ್ಕಿಯನ್ನು ಖಾಲಿ ಮಾಡಲು ಪರದಾಡುತ್ತಿದೆ” ಎಂದು ಕಾಂಗ್ರೆಸ್‌ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದೆ.

“ಅಕ್ಕಿ ರಾಜಕೀಯ ಮಾಡಿದ ಕೇಂದ್ರ ಸರ್ಕಾರಕ್ಕೆ ಕೆಲವು ಪ್ರಶ್ನೆಗಳು” ಎಂದು ಕೆಳಗಿನ ಪ್ರಶ್ನೆಗಳನ್ನು ಕೇಳಿದೆ.

1. 24 ರೂಪಾಯಿಯ ಭಾರತ್ ಅಕ್ಕಿ ಕೇವಲ ಚುನಾವಣಾ ಗಿಮಿಕ್ ಆಗಿ ಉಳಿಯಿತೇ?

2. ಖಾಸಗಿ ಕಂಪೆನಿಗಳೂ ಸಹ ಕೇಂದ್ರ ಆಹಾರ ನಿಗಮದ ಅಕ್ಕಿಯನ್ನು ಖರೀದಿಸಲು ಮುಂದಾಗಲಿಲ್ಲವೇ?

3. ಖಾಲಿ ಮಾಡಲಾಗದಷ್ಟು ಅಕ್ಕಿ ಇದ್ದರೂ ಕನ್ನಡಿಗರಿಗೆ ವಂಚಿಸಿದ್ದೇಕೆ?

4. ನಮ್ಮ ಸರ್ಕಾರ ಕೆಜಿಗೆ ₹34 ಕೊಟ್ಟು ಖರೀದಿಸಿದ್ದಿದ್ದರೆ ಆಹಾರ ನಿಗಮಕ್ಕೆ ಲಾಭವಾಗುತ್ತಿತ್ತು, ಆ ಲಾಭವನ್ನು ತಪ್ಪಿಸಿ ನಷ್ಟಕ್ಕೆ ತಳ್ಳಿದ್ದೇಕೆ?

“ಕನ್ನಡಿಗರಿಗೆ ಅಕ್ಕಿ ನೀಡದೆ ದ್ರೋಹ ಮಾಡಿದಿರಲ್ಲ, ಕನ್ನಡಿಗರು ನಿಮಗೆ ಯಾವ ಜನ್ಮದ ಶತ್ರುಗಳು?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ 10 ಕೆ.ಜಿ ಅಕ್ಕಿ ವಿತರಿಸಲು ಮುಂದಾಗಿತ್ತು. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಎಫ್‌ಸಿಐ ಗೋದಾಮಿನಿಂದ ಅಕ್ಕಿ ಪೂರೈಸುವಂತೆ ಕೋರಿತ್ತು. ಆದರೆ, ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕೆ ಅಕ್ಕಿ ನೀಡಿಲ್ಲ ಎಂಬ ಆರೋಪವಿದೆ. ಕೊನೆಗೆ ಎಲ್ಲೂ ಸಾಕಷ್ಟು ಅಕ್ಕಿ ಸಿಗದಿದ್ದಾಗ ರಾಜ್ಯ ಸರ್ಕಾರ 5 ಕೆ.ಜಿ ಅಕ್ಕಿ ಮತ್ತು ಇನ್ನುಳಿದ 5 ಕೆ.ಜಿ ಅಕ್ಕಿಯ ಹಣವನ್ನು ಪಡಿತರ ಚೀಟಿದಾರರ ಖಾತೆಗೆ ಹಾಕಲು ನಿರ್ಧರಿಸಿತ್ತು. ಅದರಂತೆ, ಈಗ ಯೋಜನೆ ಮುಂದುವರೆಯುತ್ತಿದೆ.

ಇದನ್ನೂ ಓದಿ : ನರೇಂದ್ರ ಮೋದಿ ಅಧಿಕಾರಕ್ಕೆ ಮರಳುವುದಿಲ್ಲ ಎಂಬುದೆ ಒಂದು ಗ್ಯಾರಂಟಿ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...