ಮಾಜಿ ಉಪಮುಖ್ಯಮಂತ್ರಿ ಹಾಗೂ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಜಿ.ಪರಮೇಶ್ವರ್ ಒಡೆತನದ ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳ ಮೇಲೆ ಆದಾಯ ತೆರಿಗೆ ಇಲಾಖೆ ಇಂದು ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿದೆ.
ತುಮಕೂರು ನಗರದ ಕುಣಿಗಲ್ ರಸ್ತೆಯಲ್ಲಿರುವ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜು, ಹೆಗ್ಗೆಯಲ್ಲಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜು ಮತ್ತು ಸಿದ್ದಾರ್ಥ ನಗರದಲ್ಲಿರುವ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಆಡಳಿತ ಕಚೇರಿಗಳ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಟಿ. ಬೇಗೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು ಮೇಲೆಯೇ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ 7.30ರ ಸಮಯದಲ್ಲಿ ಏಕಕಾಲಕ್ಕೆ ನಾಲ್ಕು ಕಡೆ ಕಾಲೇಜುಗಳ ಮೇಲೆ ದಾಳಿ ನಡೆದಿದೆ.
ಬೆಂಗಳೂರಿನಲ್ಲಿರುವ ಸದಾಶಿವನಗರದ ಪರಮೇಶ್ವರ್ ಮನೆಯ ಮೇಲೆಯೂ ದಾಳಿ ನಡೆದಿರುವುದಾಗಿ ವರದಿಯಾಗಿದೆ. ಟಿ.ಬೇಗೂರು ಮತ್ತು ಹೆಗ್ಗೆರೆಯ ಸಿದ್ದಾರ್ಥ ಮೆಡಿಕಲ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿದ್ದರು. ಹೀಗಾಗಿ ಐಟಿ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ.
ರಾಜ್ಯದವರಲ್ಲದೇ ಹೊರ ರಾಜ್ಯಗಳು ಮತ್ತು ಹೊರ ದೇಶಗಳ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟುಗಳನ್ನು ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲಾಗುತ್ತಿತ್ತು. ಮಧ್ಯವರ್ತಿಗಳು ಹೊರ ರಾಜ್ಯದ ವಿದ್ಯಾರ್ಥಿಗಳನ್ನು ಮೆಡಿಕಲ್ ಕಾಲೇಜಿಗೆ ಪ್ರವೇಶ ಕೊಡಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.



ಪಾಪ, ಇವರಿಗೂ ಶುರುವಾಯ್ತು ಮನುವಾದಿಗಳ ಕಾಟ.