Homeಕರ್ನಾಟಕಆರ್‌ಎಸ್‌ಎಸ್‌ ಸಾಮಾಜಿಕ ನ್ಯಾಯದ ವಿರೋಧಿ, ಅದು ಮನುಸ್ಮೃತಿಯನ್ನು ನಂಬುತ್ತದೆ: ಮಲ್ಲಿಕಾರ್ಜುನ ಖರ್ಗೆ

ಆರ್‌ಎಸ್‌ಎಸ್‌ ಸಾಮಾಜಿಕ ನ್ಯಾಯದ ವಿರೋಧಿ, ಅದು ಮನುಸ್ಮೃತಿಯನ್ನು ನಂಬುತ್ತದೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

’ಆರ್‌ಎಸ್‌ಎಸ್‌ ಸಾಮಾಜಿಕ ನ್ಯಾಯದ ವಿರೋಧಿ, ಅದು ಮನುಸ್ಮೃತಿಯನ್ನು ನಂಬುತ್ತದೆ. ನಮ್ಮ ಹೋರಾಟ ಆರ್‌ಎಸ್‌ಎಸ್‌ ವಿರುದ್ಧ’ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ’ಉತ್ತರ ಪ್ರದೇಶದ ಲಖಿಂಪುರದಲ್ಲಿ ರೈತರ ಮೇಲೆ ನಡೆದಿರುವ ದೌರ್ಜನ್ಯ ದೇಶದಲ್ಲಿ ಅಲ್ಲೋಲ ಕಲ್ಲೋಲ ಉಂಟುಮಾಡಿದೆ. ದೇಶದ ಅನ್ನದಾತರ ಮೇಲೆ ಉತ್ತರ ಪ್ರದೇಶ, ಹರಿಯಾಣ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳು ದೌರ್ಜನ್ಯ ನಡೆಸುತ್ತಿವೆ” ಎಂದು ಆರೋಪಿಸಿದ್ದಾರೆ.

ಮುಂದುವರಿದು “ನಮ್ಮ ಹೋರಾಟ ಆರ್‌ಎಸ್‌ಎಸ್‌ ವಿರುದ್ಧ. ಇದು ಮುಚ್ಚಿಡುವಂತದ್ದಲ್ಲ. ಇದಕ್ಕಾಘಿ ನಾನು ಚುನಾವಚಣೆಯನ್ನು ಸೋತಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿ: RSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

“ಆರ್‌ಎಸ್‌ಎಸ್ ಎಂದಿಗೂ ಬಡವರ ಪರವಾಗಿಲ್ಲ. ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿಲ್ಲ. ಅವರು ಮನುಸ್ಮೃತಿಯನ್ನು ನಂಬುತ್ತಾರೆ. ಆರ್‌ಎಸ್‌ಎಸ್ ಪುಸ್ತಕಗಳನ್ನು ಓದಿ ನಿಮಗೆ ಅರ್ಥವಾಗುತ್ತದೆ. ನಾನು 16ನೇ ವಯಸ್ಸಿನಿಂದಲೇ ಆರ್‌ಎಸ್‌ಎಸ್ ವಿರುದ್ಧ ಹೋರಾಡುತ್ತಿದ್ದೇನೆ. ಮುಂದೆಯೂ ಹೋರಾಡುತ್ತೇನೆ. ಆರ್‌ಎಸ್‌ಎಸ್ ವಿರುದ್ಧ ಹೋರಾಟ ಮಾಡಿದ ಕಾರಣಕ್ಕೆ ನಾನು ಚುನಾವಣೆಯಲ್ಲಿ ಸೋಲನುಭವಿಸಬೇಕಾಯಿತು” ಎಂದು ಹೇಳಿದ್ದಾರೆ.

ಜೊತೆಗೆ, “ಮೋದಿಯವರು ನಿನ್ನೆ ಲಕ್ನೋದಲ್ಲೇ ಇದ್ದರೂ ಅವರು ರೈತರ ಕುಟುಂಬಕ್ಕೆ ಸಾಂತ್ವನ ಹೇಳುವ ಪ್ರಯತ್ನ ಮಾಡದೇ ನಿರ್ಲಕ್ಷಿಸಿದ್ದಾರೆ. ರೈತರ ಬಗ್ಗೆ ಇರುವ ಕಾಳಜಿಗೆ ಸಾಕ್ಷಿ. ಪ್ರಿಯಾಂಕಾ ಗಾಂಧಿ ಅವರನ್ನು ಯಾಕೆ ಕಾನೂನು ಬಾಹಿರವಾಗಿ ಬಂಧಿಸಿದ್ದೀರಿ ಎಂಬ ಪ್ರಶ್ನೆಯನ್ನೂ ಮಾಡಿಲ್ಲ. ನಂತರ ಪ್ರಿಯಾಂಕಾ ಗಾಂಧಿ ಅವರೇ, ‘ತಮ್ಮನ್ನು ಕಾನೂನು ಬಾಹಿರವಾಗಿ ಬಂಧಿಸಿದ್ದಾರೆ ಈ ಬಗ್ಗೆ ಗಮನಹರಿಸಿ’ ಎಂದು ಪ್ರಧಾನ ಮಂತ್ರಿಗಳಿಗೆ ಮನವಿ ಮಾಡಿದ್ದಾರೆ” ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳುವವರನ್ನು ಬಂಧಿಸುವವರಿಂದ, ಕೇಂದ್ರ ಸಚಿವರ ಮಗನ ಬಂಧನ ಆಗಿಲ್ಲ ಯಾಕೆ? ರೈತರ ಮೇಲೆ ಹರಿದ ಕಾರಿನಲ್ಲಿ ಆತ ಇದ್ದ ಎಂಬ ಆರೋಪ ಇದೆ. ಆದರೂ ಅವರನ್ನು ಬಂಧಿಸಲಾಗಿಲ್ಲ ಯಾಕೆ? ಎಂದು ಪ್ರಶ್ನೆ ಮಾಡಿದ್ದಾರೆ.


ಇದನ್ನೂ ಓದಿ: RSS ಬೆಂಬಲಿತ ಶಾಲೆಗಳು ಕೋಮು ದ್ವೇಷವನ್ನು ಬೆಳೆಸುತ್ತವೆ: ದಿಗ್ವಿಜಯ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...