Homeಮುಖಪುಟಹತ್ರಾಸ್ ಅತ್ಯಾಚಾರ, ರಾಹುಲ್ ಗಾಂಧಿ ಮೇಲೆ ಹಲ್ಲೆ ಖಂಡಿಸಿ ಬೀದಿಗಿಳಿದ ಕಾಂಗ್ರೆಸ್: ಪಂಜಿನ ಮೆರವಣಿಗೆ

ಹತ್ರಾಸ್ ಅತ್ಯಾಚಾರ, ರಾಹುಲ್ ಗಾಂಧಿ ಮೇಲೆ ಹಲ್ಲೆ ಖಂಡಿಸಿ ಬೀದಿಗಿಳಿದ ಕಾಂಗ್ರೆಸ್: ಪಂಜಿನ ಮೆರವಣಿಗೆ

ದುಷ್ಟರನ್ನು ರಕ್ಷಿಸುತ್ತಿರುವ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಧಿಕ್ಕಾರ, ಅಯೋಗ್ಯ ನಾಥ್ ಗೆ ಧಿಕ್ಕಾರ, ಬಿಜೆಪಿ ಹಠಾವೋ, ಭಾರತ್ ಬಚಾವ್, ಗೂಂಡಾ ಆದಿತ್ಯನಾಥ್‌ಗೆ ಧಿಕ್ಕಾರ ಎಂಬ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು ಆದಿತ್ಯನಾಥ್ ಪ್ರತಿಕೃತಿ ದಹಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿನ ದಲಿತ ಯುವತಿಯ ಅತ್ಯಾಚಾರ, ಕೊಲೆ ಘಟನೆ ವಿರೋಧಿಸಿ, ಸಂತ್ರಸ್ತ ಯುವತಿಯ ಕುಟುಂಬದ ಭೇಟಿಗೆ ತೆರಳಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ದಾರಿ ಮದ್ಯದಲ್ಲೇ ತಡೆದು ದೌರ್ಜನ್ಯ ಎಸಗಿದ, ಉತ್ತರ ಪ್ರದೇಶದ ಪೊಲೀಸರ ಕ್ರಮವನ್ನು ಖಂಡಿಸಿ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪ್ರತಿಭಟನೆ ಆರಂಭಿಸಿ ಪಂಜಿನ ಮೆರವಣಿಗೆ ನಡೆಸಿದೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಂಜೆ ಆರು ಗಂಟೆಗೆ ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್ ಕಾರ್ಯಕರ್ತರು ಯುಪಿ ಸಿಎಂ ಆದಿತ್ಯಾನಾಥ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯ ಲೈವ್ ನೋಡಿ

Posted by Indian National Congress – Karnataka on Thursday, October 1, 2020

ದುಷ್ಟರನ್ನು ರಕ್ಷಿಸುತ್ತಿರುವ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಧಿಕ್ಕಾರ, ಅಯೋಗ್ಯ ನಾಥ್ ಗೆ ಧಿಕ್ಕಾರ, ಬಿಜೆಪಿ ಹಠಾವೋ, ಭಾರತ್ ಬಚಾವ್, ಗೂಂಡಾ ಆದಿತ್ಯನಾಥ್‌ಗೆ ಧಿಕ್ಕಾರ ಎಂಬ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು ಆದಿತ್ಯನಾಥ್ ಪ್ರತಿಕೃತಿ ದಹಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ “ದಲಿತ ಹೆಣ್ಣು ಮಗಳ ಮೇಲೆ ನಡೆದ ಅಮಾನುಷ ಅತ್ಯಾಚಾರವನ್ನು ಖಂಡಿಸಿ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಲು ಹೊರಟ ನಮ್ಮ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ಅಮಾನವೀಯವಾಗಿ ನಡೆಸಿಕೊಂಡಿರುವುದನ್ನು ಖಂಡಿಸುತ್ತೇವೆ. ಅವರು ಪೊಲೀಸರಲ್ಲ, ಕೇಂದ್ರ ಸರ್ಕಾರದ ಗುಲಾಮರಾಗಿದ್ದಾರೆ” ಎಂದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ “ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶವನ್ನು ಗೂಂಡಾ ರಾಜ್ಯವನ್ನಾಗಿಸಿದ್ದಾರೆ. ನಮ್ಮ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಜೊತೆಗಿನ ಪೊಲೀಸರ ದುರ್ವರ್ತನೆಗೆ ಯೋಗಿ ಆದಿತ್ಯನಾಥ್ ಅವರು ಬೆಲೆ ತೆರಬೇಕಾಗುತ್ತದೆ” ಎಂದಿದ್ದಾರೆ.


ಇದನ್ನೂ ಓದಿ: ಪೊಲೀಸರ ದುರ್ವರ್ತನೆಗೆ ಯೋಗಿ ಆದಿತ್ಯನಾಥ್‌ರವರು ಬೆಲೆ ತೆರಬೇಕಾಗುತ್ತದೆ: ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗಾಡುವ ಯುವಕರ ಖಾತೆಗಳಿಗೆ ಹಣ...

0
"ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳನ್ನು ಬಳಸಿಕೊಂಡು ಬೀದಿಗಳಲ್ಲಿ ತಿರುಗುತ್ತಿರುವ ನಮ್ಮ ಯುವಕರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ ಒಂದು ಲಕ್ಷ ರೂಪಾಯಿ ಮತ್ತು ತಿಂಗಳಿಗೆ 8,500 ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ"...