Homeಕರ್ನಾಟಕ’ಕೊರೊನಾ ಸಾವುಗಳೆಲ್ಲವೂ ಬಿಜೆಪಿ ನಡೆಸುತ್ತಿರುವ ಕಗ್ಗೊಲೆಗಳು’- ಕಾಂಗ್ರೆಸ್

’ಕೊರೊನಾ ಸಾವುಗಳೆಲ್ಲವೂ ಬಿಜೆಪಿ ನಡೆಸುತ್ತಿರುವ ಕಗ್ಗೊಲೆಗಳು’- ಕಾಂಗ್ರೆಸ್

ಕೂಡಲೇ ಪ್ರತಿ ಅರ್ಹ ಕುಟುಂಬಕ್ಕೆ ಕನಿಷ್ಠ 10 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಿ. ಅನ್ನಭಾಗ್ಯ ಅಕ್ಕಿಯನ್ನು 10 ಕೆಜಿ ನೀಡಿ- ಕಾಂಗ್ರೆಸ್

- Advertisement -
- Advertisement -

’ಮತ್ತೆ ಮತ್ತೆ ಹೇಳುತ್ತೇವೆ, ಕೊರೊನಾ ಸಾವುಗಳೆಲ್ಲವೂ ಬಿಜೆಪಿ ನಡೆಸುತ್ತಿರುವ ಕಗ್ಗೊಲೆಗಳು’ ಎಂದು ರಾಜ್ಯ ಸರ್ಕಾರದ ಮೇಲೆ ಕಾಂಗ್ರೆಸ್ ಆರೋಪಿಸಿದೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಕರ್ನಾಟಕ ಕಾಂಗ್ರೆಸ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ’ಅವರ ಸುಳ್ಳು, ಭ್ರಷ್ಟಾಚಾರ, ನಿರ್ಲಕ್ಷ್ಯ, ನಿರ್ಲಜ್ಜತನವೇ ಇಂದಿನ ಈ ಎಲ್ಲಾ ಅನಾಹುತಗಳಿಗೆ ಕಾರಣ. ಜನ ಸಾಯುತ್ತಿದ್ದರೂ ಕರುಣೆ ಇಲ್ಲದಂತೆ ಸುಳ್ಳಿನ ಬಂಡತನದ ಪ್ರಭು ಚೌಹಾಣ್‌ರಂತವರ ಮೂಲಕ ರಾಜ್ಯವನ್ನು ಸ್ಮಶಾನ ಮಾಡಲು ಹೊರಟಿದೆ ರಾಜ್ಯ ಸರ್ಕಾರ’ ಎಂದು ವಾಗ್ದಾಳಿ ನಡೆಸಿದೆ.

ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಲ್ಲ. ಕೊರೊನಾ ಸೋಂಕಿತರ ನರಳಾಟ ಸುಳ್ಳು ಎಂದು ಪ್ರಭು ಚೌಹಾಣ್ ಅವರ ಹೇಳಿಕರಯ ವರದಿಯನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡು, ಕೊರೊನಾ ಸಾವುಗಳೆಲ್ಲವೂ ಬಿಜೆಪಿ ನಡೆಸುತ್ತಿರುವ ಕಗ್ಗೊಲೆಗಳು ಎಂದು ಆರೋಪಿಸಿದೆ.

ಇದನ್ನೂ ಓದಿ: ರಾಜಕೀಯ ಕೆಲಸ ಬಿಟ್ಟು, ಜನರ ಸಹಾಯಕ್ಕೆ ನಿಲ್ಲುವಂತೆ ಕಾರ್ಯಕರ್ತರಲ್ಲಿ ರಾಹುಲ್ ಗಾಂಧಿ ಮನವಿ

ರಾಜ್ಯದಲ್ಲಿ ಅನಧಿಕೃತ ಲಾಕ್‌ಡೌನ್ ಜಾರಿ ಮಾಡಿ ಬಡವರ ಹೊಟ್ಟೆಮೇಲೆ ಹೊಡೆಯುತ್ತಿದ್ದಿರ ಎಂದು ಆರೋಪಿಸಿರುವ ಕಾಂಗ್ರೆಸ್, ಅರ್ಹರಿಗೆ ಪ್ಯಾಕೇಜ್ ಘೋಷಣೆ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

’ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ನೀವು ಜವಾಬ್ದಾರಿಯಿಂದ ನುಣುಚಿಕೊಳ್ಳಲು ಚಾಪೆಯ ಕೆಳಗೆ ನುಸುಳುವ ಕೆಲಸ ಮಾಡಿದ್ದೀರೆಂದು ಗೊತ್ತಿದೆ. ಅಧಿಕೃತವಾಗಿ ಘೋಷಿಸಿದರೆ ನೆರವು ನೀಡಬೇಕಾದ ಅನಿವಾರ್ಯ ಬರುತ್ತದೆಂದು ಅನಧಿಕೃತ ಲಾಕ್‌ಡೌನ್ ಜಾರಿಗೊಳಿಸಿದಿರಿ. ಆದರೆ ಸಣ್ಣ ವ್ಯಾಪಾರಿಗಳು, ಕೂಲಿ ಕಾರ್ಮಿಕರು, ಚಾಲಕರು, ದಿನಗೂಲಿ ನೌಕರರು ಉಪವಾಸ ಮಲಗುತ್ತಿದ್ದಾರೆ’ ಎಂದು ಆಕ್ರೋಶ ಹೊರಹಾಕಿದೆ.

ಅನಧಿಕೃತ ಲಾಕ್‌ಡೌನ್ ಜಾರಿ ಮಾಡಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿರುವ ರಾಜ್ಯ ಸರ್ಕಾರ ಅರ್ಹರಿಗೆ ನೆರವು ಘೋಷಿಸಬೇಕು ಎಂದಿದೆ. ’ಬಿಜೆಪಿಯ ಅನಧಿಕೃತ ಲಾಕ್‌ಡೌನ್ ಜನತೆಯನ್ನು ಇನ್ನಷ್ಟು ಸಂಕಷ್ಟಕ್ಕೆ ತಳ್ಳುತ್ತಿದೆ. ಕೂಡಲೇ ಪ್ರತಿ ಅರ್ಹ ಕುಟುಂಬಕ್ಕೆ ಕನಿಷ್ಠ 10 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಿ. ಅನ್ನಭಾಗ್ಯ ಅಕ್ಕಿಯನ್ನು 10 ಕೆಜಿ ನೀಡಿ. ಸಣ್ಣ ವ್ಯಾಪಾರಿಗಳು, ಚಾಲಕರಿಗೆ ಪ್ಯಾಕೇಜ್ ನೀಡಿ. MSME ಗಳಿಗೆ ಅಗತ್ಯ ನೆರವು ನೀಡಿ ಉದ್ಯೋಗ ನಷ್ಟವಾಗದಂತೆ ನೋಡಿಕೊಳ್ಳಿ’ ಎಂದು ಕಾಂಗ್ರೆಸ್ ಒತ್ತಾಯಿಸಿದೆ.


ಇದನ್ನೂ ಓದಿ: ಕೊರೊನಾ: ಜನರಿಗೆ ನೆರವಾಗಿ ಎಂದು ಶಾಸಕರಿಗೆ ಪತ್ರ ಬರೆದ ಸಿದ್ದರಾಮಯ್ಯ‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಯುಎಸ್ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, ಹರ್ದೀಪ್ ಸಿಂಗ್‌ ಹತ್ಯೆ ಬಗ್ಗೆ ಉಲ್ಲೇಖ

0
ಯುನೈಟೆಡ್ ಸ್ಟೇಟ್ಸ್ ತನ್ನ 2023ರ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, BBC ಮೇಲೆ ತೆರಿಗೆ ಅಧಿಕಾರಿಗಳ ದಾಳಿ, ಕೆನಡಾದಲ್ಲಿ ಸಿಖ್ ಕಾರ್ಯಕರ್ತ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಂತಹ ಭಾರತಕ್ಕೆ ಸಂಬಂಧಿಸಿದ ಪ್ರಮುಖ...