Homeಕರ್ನಾಟಕಸರ್ಕಾರಿ ದರೋಡೆಗೆ ತೆರಿಗೆ ಎಂದು ಹೆಸರು: ಬೆಲೆ ಏರಿಕೆಗೆ ಕಾಂಗ್ರೆಸ್‌ ಕಿಡಿ

ಸರ್ಕಾರಿ ದರೋಡೆಗೆ ತೆರಿಗೆ ಎಂದು ಹೆಸರು: ಬೆಲೆ ಏರಿಕೆಗೆ ಕಾಂಗ್ರೆಸ್‌ ಕಿಡಿ

- Advertisement -
- Advertisement -

ಬೆಲೆ ಏರಿಕೆ ಬಗ್ಗೆ ಸತತವಾಗಿ ಪ್ರತಿಭಟನೆ, ಆಕ್ರೋಶ ಹೊರ ಹಾಕುತ್ತಿರುವ ಕಾಂಗ್ರೆಸ್, ಹಬ್ಬದ ದಿನವಾದ ಇಂದು ಕೂಡ ’ಗೌರಿ ಗಣೇಶ ಹಬ್ಬಕ್ಕೆ ಬಿಜೆಪಿ ಸರ್ಕಾರ ಜನತೆಗೆ ನೀಡಿದ ಕೊಡುಗೆ ಬೆಲೆ ಏರಿಕೆ. ಸರ್ಕಾರಿ ದರೋಡೆಗೆ ‘ತೆರಿಗೆ’ ಎಂದು ನಾಮಕರಣ ಮಾಡಲಾಗಿದೆ ಎಂದು ಕಿಡಿಕಾರಿದೆ.

ನಿನ್ನೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ, ಒಂದೇ ತಿಂಗಳಲ್ಲಿ ಎರಡು ಬಾರಿ ಗ್ಯಾಸ್ ದರ ಹೆಚ್ಚಳ, ಸತತ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ, ರಾಜಭವನ ಚಲೋ ನಡೆಸಲಾಗಿತ್ತು.

ಇಂದು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, “ಗೌರಿ ಗಣೇಶ ಹಬ್ಬಕ್ಕೆ ಬಿಜೆಪಿ ಸರ್ಕಾರ ಜನತೆಗೆ ನೀಡಿದ ಕೊಡುಗೆ ಬೆಲೆ ಏರಿಕೆ. ಪೆಟ್ರೋಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆ ಏರಿಸಿ ಜನರ ಸಂಭ್ರಮವನ್ನೂ ಕಿತ್ತುಕೊಂಡಿದೆ ಬಿಜೆಪಿ. ಸರ್ಕಾರಿ ದರೋಡೆಗೆ ‘ತೆರಿಗೆ’ ಎಂದು ನಾಮಕರಣ ಮಾಡಿಕೊಂಡು ಜನರ ಜೀವ ಹಿಂಡುತ್ತಿದೆ! ಬಿಜೆಪಿ ದುರಾಡಳಿತದಲ್ಲಿ ಹಬ್ಬವಿರಲಿ, ಬದುಕು ನಡೆಸುವುದೂ ಕಷ್ಟವಾಗಿದೆ” ಎಂದು ಹೇಳಿದೆ.

ಇದನ್ನೂ ಓದಿ: ಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣವಲ್ಲ, ಬಹಿರಂಗ ಚರ್ಚೆಗೆ ನಾವು ಸಿದ್ಧ: ಉಗ್ರಪ್ಪ ಸವಾಲು

ಇದರ ಜೊತೆಗೆ ಗೊಬ್ಬರದ ಕೊರತೆ ನೀಗಿಸದ ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. “ಇಷ್ಟು ದಿನ ಡಿಎಪಿ ಗೊಬ್ಬರದ ಕೊರತೆ, ಈಗ ಯೂರಿಯಾ ಗೊಬ್ಬರದ ಕೊರತೆ, ರಾಜ್ಯದ ರೈತರನ್ನು ಸಂಕಷ್ಟಕ್ಕೆ ದೂಡುವ ಎಲ್ಲಾ ಕೆಲಸಗಳನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. ರೈತರನ್ನು ಹೇಡಿಗಳು ಎಂದಿದ್ದ
ಬಿ.ಸಿ.ಪಾಟೀಲ್ ಅವರೇ, ಗೊಬ್ಬರ ಕೊರತೆ ನೀಗಿಸಲಾಗದ ನೀವು ನಿಜವಾದ ಹೇಡಿಯಲ್ಲವೇ..? ಕೃಷಿ ಸಚಿವರಾಗಿ ಲೂಟಿಯೊಂದನ್ನು ಬಿಟ್ಟು ಬೇರೇನು ಮಾಡಿದ್ದೀರಿ..?” ಎಂದು ಪ್ರಶ್ನಿಸಿದೆ.


ಇದನ್ನೂ ಓದಿ: ರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ; ಆದರೆ, ನನ್ನ ಬಗ್ಗೆ ಪ್ರೀತಿ, ಅಭಿಮಾನವಿತ್ತು-ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...