Homeಕರ್ನಾಟಕಮುಂದಿನ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ: ಸಿದ್ದರಾಮಯ್ಯ

ಮುಂದಿನ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ: ಸಿದ್ದರಾಮಯ್ಯ

’ಬಿಜೆಪಿ ಪಕ್ಷ ಏನೇ ಹೇಳಲಿ ಸ್ಪಷ್ಟ ಬಹುಮತದ ಮೂಲಕ ನಾವು ಗೆಲ್ಲುವುದು ಖಚಿತ’

- Advertisement -
- Advertisement -

ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವುದು ಕಾಂಗ್ರೆಸ್ ಪಕ್ಷದ ಗುರಿ, 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ನಮ್ಮ ಸಮೀಕ್ಷೆಯೂ ನಿರೀಕ್ಷೆಯಂತೆಯೇ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕರ್ನಾಟಕ ಬಿಜೆಪಿ ಪಕ್ಷ ಏನೇ ಹೇಳಲಿ ಸ್ಪಷ್ಟ ಬಹುಮತದ ಮೂಲಕ ನಾವು ಗೆಲ್ಲುವುದು ಖಚಿತ” ಎಂದಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

“ರಾಜ್ಯದ ಒಂದೊಂದು ಕ್ಷೇತ್ರದಲ್ಲಿ ನಮ್ಮ ಪಕ್ಷದಿಂದ 10-12 ಗೆಲ್ಲುವ ಅಭ್ಯರ್ಥಿಗಳಿದ್ದಾರೆ. ಇದೇ ಸಮಸ್ಯೆಯಾಗಿದೆ. ಈ ಸಮಸ್ಯೆ ಬಿಜೆಪಿಗೆ ಇಲ್ಲ. ಅದು ನಮ್ಮಂತೆ ಇಡೀ ರಾಜ್ಯದಲ್ಲಿ ನೆಲೆ ಇರುವ ಪಕ್ಷ ಅಲ್ಲ. ಇದಕ್ಕಾಗಿ ನಮ್ಮಲ್ಲಿ ಗೆದ್ದವರನ್ನು ಆಪರೇಷನ್ ಕಮಲ ಮಾಡಿ ಬಿಜೆಪಿ ಅವರು ಹೊತ್ತುಕೊಂಡು ಹೋಗುತ್ತಾರೆ” ಎಂದು ಟೀಕೆ ಮಾಡಿದ್ದಾರೆ.

“ಬಿಜೆಪಿಗೆ ಅಭ್ಯರ್ಥಿಗಳ ಕೊರತೆ ಖಂಡಿತಾ ಇದೆ. ಉದಾಹರಣೆಗೆ ಹುಣಸೂರಿನಲ್ಲಿ ಕರ್ನಾಟಕ ಬಿಜೆಪಿ ಅಭ್ಯರ್ಥಿ ಯಾರು..? ವಿಶ್ವನಾಥ್ ಈಗ ಪರಿಷತ್ ಸದಸ್ಯರಾಗಿದ್ದಾರೆ. ಕೆ.ಆರ್ ನಗರದಲ್ಲಿ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಗೆ ಅಭ್ಯರ್ಥಿ ಯಾರಿದ್ದಾರೆ..? ಇಡೀ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಗೆ ಅಭ್ಯರ್ಥಿಗಳೇ ಇಲ್ಲ” ಎಂದಿದ್ದಾರೆ.

“ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಹಲವು ನಾಯಕರು ನನ್ನ ಸಂಪರ್ಕದಲ್ಲಿರುವುದು ನಿಜ. ಚುನಾವಣೆಗೆ 9 ತಿಂಗಳು ಇದೆ, ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತದಲ್ಲಿ ನಂಬಿಕೆ ಇಟ್ಟು, ಪಕ್ಷದ ನಾಯಕತ್ವ ಒಪ್ಪಿಕೊಂಡು, ಪಕ್ಷಕ್ಕೆ ನಿಷ್ಠಾವಂತರಾಗಿ ಇರುವವರಿಗೆ ಟಿಕೇಟ್ ನೀಡುತ್ತೇವೆ” ಎಂದು ತಿಳಿಸಿದ್ದಾರೆ.

“ಬಿಜೆಪಿಯಲ್ಲಿರುವವರೆಲ್ಲರೂ ಆರ್.ಎಸ್.ಎಸ್ ಮೂಲದವರಲ್ಲ, ಉದಾಹರಣೆಗೆ ಸಚಿವ ಎಸ್.ಟಿ.ಸೋಮಶೇಖರ್ ಆರ್.ಎಸ್.ಎಸ್ ನವರಲ್ಲ. ಹೀಗೆ ಬಹಳ ಮಂದಿ ಇದ್ದಾರೆ. ಇದರ ಅರ್ಥ ಸೋಮಶೇಖರ್ ಮರಳಿ ಬರುತ್ತಾರೆ ಎಂದಲ್ಲ. ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಂಡು ಬರುವವರಿಗೆ ಸ್ವಾಗತ” ಎಂದು ಕಾಮಗ್ರೆಸ್‌ಗೆ ಬೇರೆ ಪಕ್ಷಗಳಿಮದ ಬರಲು ನಾಯಕರು ತಯಾರಾಗಿದ್ದಾರೆ ಎಂಬ ಸುಳಿವು ನೀಡಿದ್ದಾರೆ.

ಇನ್ನು, ಊದಯಪುರ ಹತ್ಯೆಯನ್ನು ಖಂಡಿಸಿರುವ ಅವರು, “ಉದಯಪುರದಲ್ಲಿ ಕನ್ಹಯ್ಯ ಲಾಲ್ ಕೊಲೆ  ಅತ್ಯಂತ ಖಂಡನೀಯ ಕೃತ್ಯ. ಕೊಲೆಯಾದ ದಿನವೇ ಇದನ್ನು ಹೇಳಿದ್ದೇನೆ. ಈ ರೀತಿ ತಲೆ ಕತ್ತರಿಸುವ ದುಷ್ಕರ್ಮಿಗಳಿಗೆ ಮರಣದಂಡನೆಯೇ ಸರಿಯಾದ ಶಿಕ್ಷೆ. ರಾಜಸ್ತಾನ ಸರ್ಕಾರ ಖಂಡಿತ ಆರೋಪಿಗಳಿಗೆ ತಕ್ಷ ಶಿಕ್ಷೆಯಾಗುವಂತೆ ಕ್ರಮಕೈಗೊಳ್ಳುವ ಭರವಸೆ ಇದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಎಲ್ಲೆಂದರಲ್ಲಿ ವಾಹನ ಸವಾರರನ್ನು ಅಡ್ಡ ಹಾಕಿ ದಾಖಲೆ ಪರಿಶೀಲಿಸುವಂತಿಲ್ಲ: ಡಿಜಿಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...