Homeಮುಖಪುಟದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದ ಗುತ್ತಿಗೆದಾರ: ಬಿಜೆಪಿ ಸರ್ಕಾರದ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ

ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದ ಗುತ್ತಿಗೆದಾರ: ಬಿಜೆಪಿ ಸರ್ಕಾರದ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ

ಸರ್ಕಾರದ ಭ್ರಷ್ಟಾಚಾರವನ್ನು ಮುಚ್ಚಿಹಾಕುವ ಉದ್ದೇಶದಿಂದಲೇ ಪತ್ರಕರ್ತರಿಗೆ ದೀಪಾವಳಿ ಉಡುಗೊರೆ ನೆಪದಲ್ಲಿ ಲಕ್ಷ, ಲಕ್ಷ ರೂಪಾಯಿ ಲಂಚ ನೀಡಿರುವುದನ್ನು ಪತ್ರಕರ್ತರೇ ಬಹಿರಂಗ ಪಡಿಸಿದ್ದಾರೆ.

- Advertisement -
- Advertisement -

ಸಚಿವ ಕೆ.ಎಸ್.ಈಶ್ವರಪ್ಪ 40% ಲಂಚ ಕೇಳಿದ್ದರು ಎಂದು ಆರೋಪಿಸಿ ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯ ಗುತ್ತಿಗೆದಾರ ಬಸವರಾಜ್ ಅಮರಗೋಳ ಎಂಬ ಗುತ್ತಿಗೆದಾರರು ಸಹ ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ನಿರತವಾಗಿದೆ ಎಂಬುದಕ್ಕೆ ಸಾಕ್ಷಿ ಬೇಕೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ಕಾಲದಲ್ಲಿ ಮಾರಾಟ ಮಾಡಿದ್ದ ಉಪಕರಣಗಳ ಬಿಲ್ ಪಾವತಿಗೆ ಲಂಚ ಕೇಳಿ‍ದ್ದಾರೆಂದು ಆರೋಪಿಸಿ ಕಳೆದ ತಿಂಗಳು ಬಸವರಾಜ್‌ ಅಮರಗೋಳ ಎಂಬ ಗುತ್ತಿಗೆದಾರ ರಾಷ್ಟ್ರಪತಿಗಳಿಗೆ ದಯಾಮರಣಕ್ಕೆ ಪತ್ರ ಬರೆದಿದ್ದರು. ಇದಕ್ಕಿಂತ ಬೇರೆ ಸಾಕ್ಷಿ ಬೇಕಾ ಮುಖ್ಯಮಂತ್ರಿಗಳೇ? ಇನ್ನು ಎಷ್ಟು ಮಂದಿಯನ್ನು ಆತ್ಮಹತ್ಯೆಗೆ ನೂಕುತ್ತೀರಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬಸವರಾಜ್ ಅಮರಗೋಳರವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದ ವಿವರಗಳನ್ನೂ ರಾಷ್ಟ್ರಪತಿಗಳಿಗೆ ಪತ್ರದಲ್ಲಿ ತಿಳಿಸಿದ್ದಾರೆ. ಕೆ.ಎಸ್ ಈಶ್ವರಪ್ಪ 40% ಲಂಚ ಕೇಳಿದ್ದಾರೆ ಎಂದು ಆರೋಪಿಸಿ ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕಾಗಿ ಈಶ್ವರಪ್ಪ ರಾಜೀನಾಮೆ ನೀಡಿಲ್ವಾ? ಪೊಲೀಸ್ ಅಧಿಕಾರಿ ನಂದೀಶ್‍ ಹೃದಯಾಘಾತಕ್ಕೆ ಅವರು ವರ್ಗಾವಣೆಗಾಗಿ 60-70 ಲಕ್ಷ ರೂಪಾಯಿ ಲಂಚ ಕೊಟ್ಟಿರುವುದೇ ಕಾರಣ ಎಂದು ಸಚಿವ ಎಂ.ಟಿ.ಬಿ.ನಾಗರಾಜ್ ಹೇಳಿದ್ದಾರೆ. ಲಂಚಗುಳಿತನಕ್ಕೆ ಇನ್ನೇನು ಸಾಕ್ಷಿ ಬೇಕು ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸರ್ಕಾರದ ಭ್ರಷ್ಟಾಚಾರವನ್ನು ಮುಚ್ಚಿಹಾಕುವ ಉದ್ದೇಶದಿಂದಲೇ ಆಯ್ದ ಪತ್ರಕರ್ತರಿಗೆ ದೀಪಾವಳಿ ಉಡುಗೊರೆ ನೆಪದಲ್ಲಿ ಸಿಎಂ ಬೊಮ್ಮಾಯಿಯವರ ಕಚೇರಿಯಿಂದಲೇ ಲಕ್ಷ, ಲಕ್ಷ ರೂಪಾಯಿ ಲಂಚ ನೀಡಿರುವುದನ್ನು ಪತ್ರಕರ್ತರೇ ಬಹಿರಂಗ ಪಡಿಸಿದ್ದಾರೆ. ನಮ್ಮ ಆರೋಪಕ್ಕೆ ಸಾಕ್ಷಿ ಕೇಳುತ್ತಿರಲ್ಲಾ ಮುಖ್ಯಮಂತ್ರಿಗಳೇ, ಪತ್ರಕರ್ತರೇ ಸಾಕ್ಷಿ ಕೊಟಿದ್ದಾರಲ್ಲಾ? ಇದರ ಬಗ್ಗೆಯೂ ತನಿಖೆಯಾಗಲಿ ಎಂದು ಅವರು ಆಗ್ರಹಿಸಿದ್ದಾರೆ.

ಪಿಎಸ್‌ಐ ನೇಮಕಾತಿಯಲ್ಲಿ ಯಾವ ಅಕ್ರಮಗಳು ನಡೆದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಸಿಎಂ ಬೊಮ್ಮಾಯಿಯವರು ಹೇಳಿದ್ದರು. ಹಾಗಾದರೆ ಎಡಿಜಿಪಿ ಅಮೃತ್‌ ಪೌಲ್‌ ಅವರು ಜೈಲು ಸೇರಿದ್ದು ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಲಂಚಕೊಟ್ಟ ಗುತ್ತಿಗೆದಾರನೊಬ್ಬ ಆತ್ಮಹತ್ಯೆ ಮಾಡಿಕೊಂಡ, ಇನ್ನೊಬ್ಬರು ರಾಷ್ಟ್ರಪತಿಗಳಿಗೆ ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ವರ್ಗಾವಣೆಗಾಗಿ ಲಂಚ ಕೊಟ್ಟಿರುವ ಮತ್ತೊಬ್ಬ ಅಧಿಕಾರಿಗೆ ಹೃದಯಾಘಾತವಾಗಿದೆ. ಇನ್ನೇನು ಸಾಕ್ಷಿಗಳು ಬೇಕು? ರಾಜ್ಯ ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ನ್ಯಾಯಾಂಗ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬೀಳಲು ಸಾಧ್ಯ. ನಮ್ಮ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಅವುಗಳನ್ನೂ ಸೇರಿಸಿ ತನಿಖೆ ಮಾಡಿಸಿ, ನಮ್ಮ ಅಭ್ಯಂತರ ಇಲ್ಲ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಗುಜರಾತ್‌ ತೂಗುಸೇತುವೆ ದುರಂತ: ಸಾವಿನ ಸಂಖ್ಯೆ 141ಕ್ಕೆ ಏರಿಕೆ; 177 ಜನರ ರಕ್ಷಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read