Homeಮುಖಪುಟನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ ಪೊಲೀಸ್‌ ಪೇದೆಗೆ 7 ವರ್ಷ ಜೈಲು ಶಿಕ್ಷೆ

ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ ಪೊಲೀಸ್‌ ಪೇದೆಗೆ 7 ವರ್ಷ ಜೈಲು ಶಿಕ್ಷೆ

- Advertisement -
- Advertisement -

ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವನೆಂದು ನಕಲಿಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿದ ಆರೋಪದಲ್ಲಿ ಕರ್ನಾಟಕದ ಪೊಲೀಸ್‌ ಪೇದೆಯೋರ್ವರಿಗೆ ಕೋರ್ಟ್‌ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಕ್ಕಾಗಿ ಹಾವೇರಿ ಜಿಲ್ಲೆಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೊಲೀಸ್ ಪೇದೆ ಸೋಮಶೇಖರ ಭೀಮಪ್ಪ ಕುಂಕುಮಗಾರ ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ನ್ಯಾಯಮೂರ್ತಿ ಜಿ.ಎಲ್.ಲಕ್ಷ್ಮೀನಾರಾಯಣ ಅವರು ಆರೋಪಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ 30 ಸಾವಿರ ರೂ.ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಸರೋಜಾ ಜಿ ಕೂಡಲಗಿಮಠ ಅವರು ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ್ದರು.

ಸಿಟಿ ಆರ್ಮ್ಡ್ ರಿಸರ್ವ್ ಪೋರ್ಸ್‌(ಸಿಎಆರ್) ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕುಂಕುಮಗಾರ ಅವರು ಹಿರೇಕೆರೂರು ಪಟ್ಟಣದ ಸಮೀಪವಿರುವ ಭೋಗಾವಿ ಗ್ರಾಮದಲ್ಲಿ ವಾಸವಾಗಿದ್ದರು.

ಮೂಲತ ಬಲಿಜ ಸಮುದಾಯದ ಕುಂಕುಮಗಾರ ಜಾತಿಗೆ ಸೇರಿದ ಇವರು ಚನ್ನದಾಸರ ಸಮುದಾಯದವರು ಎಂದು ಸುಳ್ಳು ಹೇಳಿಕೆ ನೀಡಿ ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ಪಡೆದಿದ್ದರು. ಇದಲ್ಲದೆ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ಮತ್ತು ಇತರ ದಾಖಲೆಗಳನ್ನು ಹಿರೇಕೆರೂರಿನಲ್ಲಿ ತಹಸೀಲ್ದಾರ್ ಅವರಿಗೆ ಸಲ್ಲಿಸಿದ್ದರು.

ಭೋಗಾವಿ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಹನುಮಂತಪ್ಪ ತಳವಾರ ಈ ವಂಚನೆಗೆ  ಸೋಮಶೇಖರ ಭೀಮಪ್ಪ ಕುಂಕುಮಗಾರನಿಗೆ ಸಹಕರಿಸಿದ್ದಾರೆ. ಅಪರಾಧಿಯು ನಕಲಿ ಪ್ರಮಾಣಪತ್ರದ ಮೂಲಕ ಯಶಸ್ವಿಯಾಗಿ ಉದ್ಯೋಗವನ್ನು ಪಡೆದಿದ್ದಾನೆ. ಈ ಕುರಿತ ಆರೋಪದ ಬಗ್ಗೆ ಜಿಲ್ಲಾಧಿಕಾರಿ ಮೂಲಕ ತನಿಖೆ ನಡೆಸಲಾಗಿತ್ತು ಮತ್ತು ತನಿಖೆಗಾಗಿ ವಿಶೇಷ ಸಮಿತಿಯನ್ನು ರಚಿಸಲಾಗಿತ್ತು. ಆ ಬಳಿಕ ಸಮಿತಿಯ ವರದಿಯ ಆಧಾರದಲ್ಲಿ ಪೇದೆ ವಿರುದ್ಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನು ಓದಿ: ಸಂಸತ್ತಿನಲ್ಲಿ ಸಾಮೂಹಿಕ ಅಮಾನತು: ಹತ್ತಿಕ್ಕಲ್ಪಟ್ಟ 33 ಕೋಟಿಗೂ ಅಧಿಕ ಜನತೆಯ ಧ್ವನಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಟಿಪ್ಪು ಸುಲ್ತಾನ್’ ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸಲಿದ್ದಾರೆ ಎಂಬುವುದು ಸುಳ್ಳು

0
"ಜಿಹಾದಿ ಶಾರುಖ್ ಖಾನ್‌ನ ಭಾರೀ ಬಜೆಟ್‌ನಿಂದ ತಯಾರಾದ ದೇಶದ್ರೋಹಿ, ಮತಾಂಧ ತಿಪ್ಪೆ ಸುಲ್ತಾನನ ನಕಲಿ ಚರಿತ್ರೆ ಬರುತ್ತಿದೆ. ಇಂತಹ ದೇಶದ್ರೋಹಿಯ ಸಿನಿಮಾವನ್ನು ಬಹಿಷ್ಕರಿಸಲು ಶೇರ್ ಮಾಡಿ" ಎಂದು ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ...