ಕೊರೊನಾ ಮೂರನೇ ಅಲೆಯಲ್ಲಿ ರಾಜ್ಯದಲ್ಲಿ ಪ್ರಕರಣಗಳು ದಿಢೀರ್ ಹೆಚ್ಚಾಗಿದ್ದವು. ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಿನ ಕೇಸಸ್ ಪತ್ತೆಯಾಗಿದ್ದವು. ಆದರೆ, ಕಳೆದ 24 ಗಂಟೆಯಲ್ಲಿ 67 ಸಾವಿರ ಕೊರೊನಾ ಸೋಂಕಿತರು ಚೇತರಿಕೆ ಕಂಡು, ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದ ರಾಜ್ಯದ ಚೇತರಿಕೆಯ ಪ್ರಮಾಣ ಶೇಕಡಾ 90ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 38,083 ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿಯೂ ವರದಿಯಾಗುತ್ತಿದ್ದ ಪ್ರಕರಣಗಳಿಗೆ ಹೋಲಿಸಿದರೆ ಇಂದು 17,717 ಕೇಸಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ.
ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,28,711 ಇದ್ದು, ಇದರಲ್ಲಿ 1.89 ಲಕ್ಷ ಪ್ರಕರಣಗಳು ಬೆಂಗಳೂರಿನದ್ದಾಗಿವೆ. ಪಾಸಿಟಿವಿಟಿ ರೇಟ್ 20.44% ಇದೆ.
ಇದನ್ನೂ ಓದಿ: ಕೊರೊನಾ ಲಸಿಕೆ ಅಭಿವೃದ್ಧಿಗೆ ಒಂದು ಪೈಸೆಯು ಕೊಡದ ಪಿಎಂ ಕೇರ್!
COVID cases continue to dip in Karnataka:
◾New cases in State: 38,083
◾New cases in B'lore: 17,717
◾Positivity rate in State: 20.44%
◾Discharges: 67,236
◾Active cases State: 3,28,711 (B'lore- 189k)
◾Deaths:49 (B'lore- 12)
◾Tests: 1,86,313#COVID19 #Omicron— Dr Sudhakar K (@mla_sudhakar) January 27, 2022
ಬೆಂಗಳೂರಿನಲ್ಲಿ 185 ಹೊಸ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ರಾಜ್ಯದಲ್ಲಿ ಒಟ್ಟು ಒಮಿಕ್ರಾನ್ ಸೋಂಕಿತರ ಸಂಖ್ಯೆ 1,115 ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ: 2.55 ಲಕ್ಷ ಹೊಸ ಕೇಸ್‌ಗಳು