ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಏರಿಕೆಯಿಂದ ವಿಧಿಸಲಾಗಿರುವ ವಿಧಿಸಲಾಗಿರುವ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ತೆರವುಗೊಳಿಸುವ ಕುರಿತು ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ. ಬಿಜೆಪಿ ಪಕ್ಷದವರೆ ಬಹಿರಂಗವಾಗಿ ಕರ್ಫ್ಯೂ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಹೋಟೆಲ್, ಕಾರ್ಖಾನೆ ಸೇರಿದಂತೆ ಉದ್ಯಮ ವಲಯದಿಂದ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು (ಜ.21) ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕರ್ಫ್ಯೂ ಮುಂದುವರೆಯುತ್ತದೆಯೇ ಇಲ್ಲವೇ ಎಂಬುದರ ಸ್ಪಷ್ಟ ಚಿತ್ರಣ ಸಿಗಲಿದೆ.
ಇದನ್ನೂ ಓದಿ: ಹಿಜಾಬ್ ಧರಿಸುವುದು ಅಶಿಸ್ತು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿವಾದಾತ್ಮಕ ಹೇಳಿಕೆ
ಮಧ್ಯಾಹ್ನ 1 ಗಂಟೆಗೆ ಸಭೆ ನಡೆಯಲಿದ್ದು, ಆರೋಗ್ಯ ಸಚಿವರು, ತಜ್ಞರು, ಕೋವಿಡ್ ಟಾಸ್ಕ್ ಫೋರ್ಸ್ ಸದಸ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆ ಬಳಿಕ ರಾಜ್ಯದಲ್ಲಿ ನಿರ್ಬಂಧಗಳ ಸಡಿಲಿಕೆ ಅಥವಾ ಹೊಸ ಮಾರ್ಗಸೂಚಿಯ ಬಗ್ಗೆ ನಿರ್ಧಾರವಾಗಲಿದೆ.
ಕೇಂದ್ರ ಬಿಜೆಪಿ ಸಚಿವ ಸಿ.ಟಿ. ರವಿ ಸೇರಿದಂತೆ ರಾಜ್ಯ ಬಿಜೆಪಿ ನಾಯಕರೇ ಸರ್ಕಾರದ ಕೊರೊನಾ ನಿರ್ಬಂಧಗಳ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.
ರಾಜ್ಯದಲ್ಲಿ ಗುರುವಾರ 47,754 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 30,540 ಪ್ರಕರಣಗಳು ದಾಖಲಾಗಿವೆ. ಕೊರೊನಾ ಪಾಸಿಟಿವಿಟಿ ದರ 18.48% ಇದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗಲಿದೆ ಎನ್ನಲಾಗಿದೆ.