Homeಮುಖಪುಟಆಪರೇಷನ್ ಥಿಯೇಟರ್‌ನಲ್ಲಿ ಫ್ರಿ ವೆಡ್ಡಿಂಗ್ ಶೂಟ್: ಸರಕಾರಿ ವೈದ್ಯ ಸೇವೆಯಿಂದ ವಜಾ

ಆಪರೇಷನ್ ಥಿಯೇಟರ್‌ನಲ್ಲಿ ಫ್ರಿ ವೆಡ್ಡಿಂಗ್ ಶೂಟ್: ಸರಕಾರಿ ವೈದ್ಯ ಸೇವೆಯಿಂದ ವಜಾ

- Advertisement -
- Advertisement -

ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ವೈದ್ಯರೋರ್ವರು ವಿವಾಹ ಪೂರ್ವ ಫೋಟೋ ಶೂಟ್ ಮಾಡಿದ್ದು, ಈ ಕುರಿತ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದವು, ಇದೀಗ ಫೋಟೋ ಶೂಟ್ ಮಾಡಿದ ವೈದ್ಯರನ್ನು ಸೇವೆಯಿಂದ ವಜಾಗೊಳಿಸಿ ಆರೋಗ್ಯ ಸಚಿವರು ಆದೇಶವನ್ನು ಹೊರಡಿಸಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಈ ಕುರಿತು ಪ್ರತಿಕ್ರಿಯೆಯನ್ನು ನೀಡಿದ್ದು, ಚಿತ್ರದುರ್ಗದ ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ ವೆಡ್ಡಿಂಗ್ ಶೋಟ್ ನಡೆಸಿದ ವೈದ್ಯರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಿರುವುದು ಜನರ ಆರೋಗ್ಯ ಸೇವೆಗೆ ಹೊರತು ವೈಯಕ್ತಿಕ ಕೆಲಸಗಳಿಗಲ್ಲ. ವೈದ್ಯರಿಂದ ಇಂಥಹ ಅಶಿಸ್ತುಗಳನ್ನು ನಾನು ಸಹಿಸುವುದಿಲ್ಲ. ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಗುತ್ತಿಗೆ ನೌಕರರು ಸೇರಿದಂತೆ ವೈದ್ಯರು, ಸಿಬ್ಬಂದಿ ವರ್ಗದವರು ಸರ್ಕಾರಿ ಸೇವಾ ನಿಯಮಾವಳಿಗಳ ಅನ್ವಯ ಕರ್ತವ್ಯ ನಿರ್ವಹಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಈ ರೀತಿಯ ದುರುಪಯೋಗಗಳು ಆಗದಂತೆ ಎಚ್ಚರಿಕೆ ವಹಿಸಲು ಸಂಬಂಧಪಟ್ಟ ವೈದ್ಯರು ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಈಗಾಗಲೇ ಸೂಚಿಸಿದ್ದೇನೆ. ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರ ಒದಗಿಸಿರುವ ಸೌಕರ್ಯಗಳು ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ಎಂಬುದನ್ನು ಅರಿತು ಕರ್ತವ್ಯ ನಿರ್ವಹಿಸುವತ್ತ ಎಲ್ಲರೂ ಗಮನಹರಿಸಬೇಕು ಎಂದು ಹೇಳಿದ್ದಾರೆ.

ಭರಮಸಾಗರ ಸರ್ಕಾರಿ ಆಸ್ಪತ್ರೆಯ ವೈದ್ಯ ಅಭಿಷೇಕ್ ಇತ್ತೀಚೆಗೆ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ವಿವಾಹಪೂರ್ವ ಫೋಟೋ ಶೂಟ್ ಮಾಡಿಸಿಕೊಂಡಿದ್ದರು. ಡಾ.ಅಭಿಷೇಕ್ ಗುತ್ತಿಗೆ ಅಧಾರದಲ್ಲಿ ಕೆಲಸ ಮಾಡುತ್ತಿದ್ದು, ವಿವಾಹಪೂರ್ವ ಫೋಟೋ ಶೂಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್‌ ಆಗಿತ್ತು. ವೈದ್ಯರ ನಡೆಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಒಂದು ಫೋಟೋದಲ್ಲಿ ಅಭಿಷೇಕ್ ರೋಗಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ನೀಡುತ್ತಿರುವ ರೀತಿ ತೋರಿಸುತ್ತದೆ, ಆದರೆ ವಧು ಮುಂದೆ ನಿಂತು ಅವರಿಗೆ ಸಹಾಯ ಮಾಡುತ್ತಿದ್ದಾರೆ. ಅಂತಿಮವಾಗಿ ಆಪರೇಷನ್‌ ಮುಗಿಯಿತು ಎಂದ ಬಳಿಕ ರೋಗಿ ಎದ್ದು ಕುಳಿತುಕೊಳ್ಳುತ್ತಾನೆ. ಈ ಎಲ್ಲಾ ದೃಶ್ಯಗಳನ್ನು ವೀಡಿಯೋದಲ್ಲಿ ಸೆರೆಯಾಗಿದೆ.

ಅಭಿಷೇಕ್ ಅವರು ಭರಮಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಒಂದು ತಿಂಗಳ ಹಿಂದೆ ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು ಎನ್ನಲಾಗಿದೆ.

ಇದನ್ನು ಓದಿ: ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ: ಸುಪ್ರೀಂ ನಿರ್ದೇಶನವನ್ನು ಕಡೆಗಣಿಸಿದ ಯೋಗಿ ಸರಕಾರ!

 

 

 

 

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...