Homeಕರ್ನಾಟಕಕರ್ನಾಟಕ SIR | ಎರಡು ಫಾರಂ-6 ಹಾಕಿದ ವ್ಯಕ್ತಿಗೆ 5 ವೋಟರ್ ಐಡಿ ನೀಡಿದ ಚು....

ಕರ್ನಾಟಕ SIR | ಎರಡು ಫಾರಂ-6 ಹಾಕಿದ ವ್ಯಕ್ತಿಗೆ 5 ವೋಟರ್ ಐಡಿ ನೀಡಿದ ಚು. ಆಯೋಗ!

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆಯ ಬಳಿಕ ಕರ್ನಾಟಕದ ಮತದಾರರ ಪಟ್ಟಿ ಶುದ್ದವಾಗಿದೆ. ಅನರ್ಹ ಮತದಾರರ ಹೆಸರುಗಳನ್ನು ತೆಗೆದು ಹಾಕಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಒ) ಅನ್ಬುಕುಮಾರ್ ಪ್ರತಿಪಾದಿಸುತ್ತಿದ್ದಾರೆ. ಆದರೆ, ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡ ಬಳಿಕ ಎಸ್ಐಆರ್‌ನ ಅವಾಂತರಗಳು ಒಂದೊಂದಾಗಿ ಬಯಲಾಗುತ್ತಿದೆ.

ಎಸ್‌ಐಆರ್ ಬಳಿಕವೂ ಬಿಜೆಪಿ ಸದಸ್ಯರೊಬ್ಬರು ಕರ್ನಾಟಕ ಮತ್ತು ಬಿಹಾರ ಎರಡೂ ಕಡೆಯು ಮತದಾರರಾಗಿರುವುದನ್ನು ಆಲ್ಟ್‌ ನ್ಯೂಸ್ ಸಹ ಸಂಸ್ಥಾಪಕ ಹಾಗೂ ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಝಬೈರ್ ಅವರು ಇತ್ತೀಚೆಗೆ ಬಯಲು ಮಾಡಿದ್ದರು. ಇದೀಗ ಅಂತಹದ್ದೇ ಮತ್ತೊಂದು ಮಾಹಿತಿಯನ್ನು ಝುಬೈರ್ ಹಂಚಿಕೊಂಡಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಂತೋಷ್ ಕುಮಾರ್ ಎಂಬ ಮತದಾರರ ಎರಡು ಫಾರಂ-6 ಸಲ್ಲಿಸಿದ್ದರು. ಅವರಿಗೆ ಚುನಾವಣಾ ಆಯೋಗ 5 ವೋಟರ್ ಐಡಿಗಳನ್ನು ನೀಡಿದೆ ಎಂದು ಝುಬೈರ್ ಹೇಳಿದ್ದಾರೆ. ಎರಡು ಕೊಂಡರೆ ಆಫರ್‌ನಲ್ಲಿ 5 ವೋಟರ್ ಐಡಿ ಪಡೆಯಿರಿ ಎಂದು ವ್ಯಂಗ್ಯವಾಡಿದ್ದಾರೆ.

ಎಸ್‌ಐಆರ್ ಬಳಿಕ ಕರ್ನಾಟಕದ ಕರಡು ಮತದಾರರ ಪಟ್ಟಿ ಪ್ರಕಟಗೊಂಡಾಗ ಸಂತೋಷ್ ಕುಮಾರ್ ಅವರ ಹೆಸರು ಅದರಲ್ಲಿ ಇರಲಿಲ್ಲ. ಹಾಗಾಗಿ, ಅವರು ಹೊಸದಾಗಿ ನೋಂದಾಯಿಸಿಕೊಳ್ಳಲು ಫಾರಂ-6 ಹಾಕಿದ್ದರು. ಆದರೆ ನಮ್ಮ ಮುಖ್ಯ ಚುನಾವಣಾಧಿಕಾರಿಯವರ ಕಚೇರಿ ಎಷ್ಟು ಉದಾರಿಯಾಗಿದೆಯೆಂದರೆ, ಅವರಿಗೆ ಐದು ಬೇರೆ ಬೇರೆ ವೋಟರ್ ಐಡಿಗಳನ್ನು ನೀಡಿದ್ದಾರೆ. ಅಂದರೆ, ಒಬ್ಬ ವ್ಯಕ್ತಿ ಎರಡು ಬಾರಿ ಅರ್ಜಿ ಸಲ್ಲಿಸಿದರೆ, ಚುನಾವಣಾ ಆಯೋಗವು ಅವರಿಗೆ ಐದು ವೋಟರ್ ಐಡಿಗಳನ್ನು ನೀಡಿದೆ ಎಂದು ಝುಬೈರ್ ವಿವರಿಸಿದ್ದಾರೆ.

ಇಂತಹ ಡೂಪ್ಲಿಕೇಟ್ ಅರ್ಜಿಗಳು ಹೇಗೆ ಪರಿಶೀಲನೆಯಿಂದ ತಪ್ಪಿಸಿಕೊಂಡು ಅಂತಿಮ ಮತದಾರರ ಪಟ್ಟಿಯಲ್ಲಿ ಒಂದಕ್ಕಿಂತ ಹೆಚ್ಚು ವೋಟರ್ ಐಡಿಗಳು ಸೃಷ್ಟಿಯಾಗಲು ಕಾರಣವಾಗುತ್ತಿವೆ ಎಂದು ಝುಬೈರ್ ಪ್ರಶ್ನಿಸಿದ್ದು, ಕರ್ನಾಟಕದಾದ್ಯಂತ ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ ಇಂತಹ ಸಾವಿರಾರು ಪ್ರಕರಣಗಳು ಪತ್ತೆಯಾಗಬಹುದು ಎಂದು ನಾನು ಶಂಕಿಸುತ್ತೇನೆ ಎಂದಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ 1,00,000ಕ್ಕೂ ಹೆಚ್ಚು ಮತಗಳನ್ನು ಅಕ್ರಮವಾಗಿ ತಿರುಚಲಾಗಿದೆ ಎಂದು ಆರೋಪಿಸಿದ್ದು ಇದೇ ಕ್ಷೇತ್ರದ ವ್ಯಾಪ್ತಿಯಲ್ಲಿ ಎಂದು ಝುಬೈರ್ ನೆನಪಿಸಿದ್ದಾರೆ.



 





 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಮೋದಿ ಎಂಬ ರಾವಣನನ್ನು ಕೆಳಗಿಳಿಸಲು ವಾನರ ಸೇನೆ ಬಂದಿದೆ”: ದೆಹಲಿಯಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಾಗ್ದಾಳಿ!

ದೇಶದಲ್ಲಿ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೂಲಕ ಸದ್ದಿಲ್ಲದೆ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲ್ಲಾಡಿಸಲಾಗುತ್ತಿದೆ ಎಂಬ ಆರೋಪಗಳ ನಡುವೆ, ರಾಜಧಾನಿ ನವದೆಹಲಿ ಬೃಹತ್ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಯಿತು. 'ಇಂಡಿಯಾ' (INDIA) ಒಕ್ಕೂಟ...

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್: ವಿಡಿಯೋ ಅಪ್‌ಲೋಡ್‌ಗೆ ಬಳಸಿದ ಫೋನ್ ಕುಮಾರಸ್ವಾಮಿ ದೆಹಲಿ ನಿವಾಸದಲ್ಲಿ ಹಸ್ತಾಂತರ: ಬೆಂಗಳೂರು ಪೊಲೀಸ್ ಆಯುಕ್ತರ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದಂತೆ ವೈರಲ್ ಆಗಿದ್ದ ವಿವಾದಾತ್ಮಕ ‘ಸ್ಟಿಂಗ್ ಆಪರೇಷನ್’ ವಿಡಿಯೊವನ್ನು ಅಪ್‌ಲೋಡ್ ಮಾಡಲು ಬಳಸಿದ್ದ ಮೊಬೈಲ್ ಫೋನ್ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನವದೆಹಲಿಯ ಅಧಿಕೃತ ನಿವಾಸದಲ್ಲಿ...

‘ಗ್ಯಾನೇಶ್ ಕುಮಾರ್ ನಂತರ ನಿಮ್ಮ ಸರದಿ’: ಮತಗಳ್ಳತನಕ್ಕೆ ಮೋದಿ, ಅಮಿತ್ ಶಾ ಕೂಡ ಕಾನೂನು ಕ್ರಮ ಎದುರಿಸಬೇಕಾಗುತ್ತದೆ; ರಾಹುಲ್ ಗಾಂಧಿ ಎಚ್ಚರಿಕೆ

ನವದೆಹಲಿ: ಮತಗಳ್ಳತನದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ನಂತರ...

‘ಅಗತ್ಯಬಿದ್ದರೆ ನಿಮ್ಮನ್ನು ನೆಲದಿಂದಲೇ ಕಿತ್ತು ಹಾಕುತ್ತೇವೆ’: ಸಿಇಸಿ ಗ್ಯಾನೇಶ್ ಕುಮಾರ್‌ಗೆ ಖರ್ಗೆ ಎಚ್ಚರಿಕೆ; ಹೋರಾಟ ಮುಂದುವರಿಸುವ ಪ್ರತಿಜ್ಞೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆ ಪಡೆಯುವವರೆಗೂ ವಿರೋಧ ಪಕ್ಷಗಳ ಹೋರಾಟ ನಿಲ್ಲುವುದಿಲ್ಲ. ಅಗತ್ಯ ಬಿದ್ದರೆ ನಿಮ್ಮನ್ನು ನೆಲದಿಂದಲೇ ಕಿತ್ತು ಹಾಕುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ...

ಕನ್ನಾಟ್ ಪ್ಲೇಸ್‌ನಲ್ಲಿ ಬಿಜೆಪಿ ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿದೆ; ವ್ಯಾಪಾರಿಗಳಿಗೆ ನಷ್ಟ ಉಂಟುಮಾಡುತ್ತಿದೆ: ರಾಹುಲ್ ಗಾಂಧಿ ಆರೋಪ

ನವದೆಹಲಿ: ಚುನಾವಣಾ ಅಕ್ರಮಗಳು ಮತ್ತು ಮತದಾರರ ಹಕ್ಕುಗಳ ಮೇಲಿನ ದಾಳಿಯ ವಿರುದ್ಧ ಇಂಡಿಯಾ ಬ್ಲಾಕ್ ನಡೆಸುತ್ತಿರುವ ಬೃಹತ್ ‘ಚಲೋ ದಿಲ್ಲಿ’ ಪ್ರತಿಭಟನೆಗೆ ರಾಷ್ಟ್ರ ರಾಜಧಾನಿಯಲ್ಲಿ ಜನಸಾಗರವೇ ಹರಿದುಬಂದಿದೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ...

ಸಿಇಸಿ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಬ್ಲಾಕ್ ಪ್ರತಿಭಟನೆ: ಮೋದಿ, ಅಮಿತ್ ಶಾಗೆ ಇದು ಕಠಿಣ ಎಚ್ಚರಿಕೆ; ಕೆ.ಸಿ. ವೇಣುಗೋಪಾಲ್

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಬ್ಲಾಕ್ ಆಯೋಜಿಸಿರುವ ಬೃಹತ್ ಪ್ರತಿಭಟನಾ ರ್ಯಾಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ...

ಇಂಡಿಯಾ ಬ್ಲಾಕ್‌ನ ‘ಚಲೋ ದಿಲ್ಲಿ’ಗೆ ವೇದಿಕೆ ಸಜ್ಜು; ದೆಹಲಿಯಾದ್ಯಂತ ರಾರಾಜಿಸುತ್ತಿರುವ ಪ್ರತಿಭಟನೆಯ ಪೋಸ್ಟರ್‌ಗಳು 

ನವದೆಹಲಿ: ಚುನಾವಣಾ ಅಕ್ರಮಗಳು ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂಡಿಯಾ ಬ್ಲಾಕ್ ಆಯೋಜಿಸಿರುವ...

ನ್ಯಾಯಾಂಗದ ವಿರುದ್ಧ ಟೀಕೆ ಆರೋಪ: ಸಿಜೆಪಿ ವಕ್ತಾರ ಸೌರವ್ ದಾಸ್ ವಿರುದ್ಧ ತನಿಖೆಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಪಿಐಎಲ್

ಚೆನ್ನೈ: ಭಾರತದ ನ್ಯಾಯಾಂಗ, ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್‌ನ ಇತರ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್...

ಕರ್ನಾಟಕ ಎಸ್‌ಐಆರ್: 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್; 2028ಕ್ಕೆ ಯಾರಿಗೆ ಅಧಿಕಾರ?

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್‌ಗೆ ಕೊಕ್; ಚೇತನ್ ಸಿಂಗ್ ರಾಥೋಡ್‌ಗೆ ತನಿಖೆಯ ಹೊಣೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...