Homeಕರ್ನಾಟಕಜಿಬಿಎ ಚುನಾವಣೆ ಗಡುವು ವಿಸ್ತರಣೆಗೆ ಸುಪ್ರೀಂ ಕೋರ್ಟ್ ಅನುಮತಿ ಕೋರಿದ ಕರ್ನಾಟಕ ಚುನಾವಣಾ ಆಯೋಗ

ಜಿಬಿಎ ಚುನಾವಣೆ ಗಡುವು ವಿಸ್ತರಣೆಗೆ ಸುಪ್ರೀಂ ಕೋರ್ಟ್ ಅನುಮತಿ ಕೋರಿದ ಕರ್ನಾಟಕ ಚುನಾವಣಾ ಆಯೋಗ

- Advertisement -
- Advertisement -

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ವಿಧಿಸಿರುವ ಗಡುವನ್ನು ಒಂದು ತಿಂಗಳ ಕಾಲ ವಿಸ್ತರಿಸುವಂತೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಡಿಸೆಂಬರ್ 31, 2026ರ ಬದಲಿಗೆ ಜನವರಿ 31, 2027ರವರೆಗೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದೆ.

ಅಲ್ಲದೆ, ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೂ ಮುನ್ನ, 2026ರ ಏಪ್ರಿಲ್ 18ರಂದು ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿಯನ್ನು ಬಳಸಿಕೊಂಡು ಚುನಾವಣೆ ನಡೆಸಲು ಅನುಮತಿ ನೀಡುವಂತೆಯೂ ಆಯೋಗ ಕೋರಿದೆ. ಪರಿಷ್ಕರಣೆಯ ನಂತರದ ಸಂಪೂರ್ಣ ಮತದಾರರ ದತ್ತಾಂಶಕ್ಕಾಗಿ ಕಾಯುವ ಅಗತ್ಯವಿಲ್ಲ ಎಂದು ಮನವಿಯಲ್ಲಿ ತಿಳಿಸಿದೆ.

2026ರ ಡಿಸೆಂಬರ್ 31ರೊಳಗೆ ಐದು ನಗರ ಪಾಲಿಕೆಗಳ ಚುನಾವಣೆಗಳನ್ನು ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಜುಲೈ 17ರಂದು ನಿರ್ದೇಶನ ನೀಡಿತ್ತು. ಈ ಗಡುವು ನಿಗದಿಪಡಿಸುವಾಗ ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯನ್ನೂ ನ್ಯಾಯಾಲಯ ಪರಿಗಣಿಸಿತ್ತು.

ತನ್ನ ಇತ್ತೀಚಿನ ಅರ್ಜಿಯಲ್ಲಿ ರಾಜ್ಯ ಚುನಾವಣಾ ಆಯೋಗ, ಎಸ್‌ಐಆರ್ ನಂತರದ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಪ್ರಕಟಿಸಲಾಗಿದೆ. ಆದರೆ, ಚುನಾವಣಾ ಸಂಬಂಧಿತ ಕಾರ್ಯಗಳಿಗೆ ಅಗತ್ಯವಿರುವ ಸಂಪೂರ್ಣ ಪರಿಶೀಲಿತ ದತ್ತಾಂಶವನ್ನು ಇನ್ನೂ ಒದಗಿಸಿಲ್ಲ ಎಂದು ತಿಳಿಸಿದೆ.

ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಂಡವರು, ಹೆಸರು ತೆಗೆದುಹಾಕಲ್ಪಟ್ಟವರು, ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವರ್ಗಾವಣೆಗೊಂಡವರು ಮತ್ತು ತಿದ್ದುಪಡಿ ಮಾಡಿಸಿಕೊಂಡವರ ವಿವರಗಳು ಇನ್ನೂ ಲಭ್ಯವಾಗಿಲ್ಲ ಎಂದು ಆಯೋಗ ಹೇಳಿದೆ. ವಾರ್ಡ್‌ವಾರು ಮತದಾರರ ಪಟ್ಟಿಗಳನ್ನು ಸಿದ್ಧಪಡಿಸಲು ಮ್ಯಾಪಿಂಗ್ ಮತ್ತು ಪರಿಶೀಲನೆ ನಡೆಸಬೇಕಿರುವುದರಿಂದ ಅಧಿಕೃತವಾಗಿ ದೃಢೀಕರಿಸಲಾದ ಸಂಪೂರ್ಣ ದತ್ತಾಂಶ ಅಗತ್ಯವಿದೆ ಎಂದು ತಿಳಿಸಿದೆ.

ಸಂಪೂರ್ಣ ದತ್ತಾಂಶ ಸ್ವೀಕರಿಸಿದ ನಂತರ ವಾರ್ಡ್‌ವಾರು ಮತದಾರರ ಪಟ್ಟಿಗಳನ್ನು ಸಿದ್ಧಪಡಿಸಲು ಕನಿಷ್ಠ ಎರಡು ತಿಂಗಳು ಬೇಕಾಗುತ್ತದೆ. ಬಳಿಕ ಚುನಾವಣೆ ನಡೆಸಲು ಮತ್ತೊಂದು ತಿಂಗಳು ಅಗತ್ಯವಿದೆ ಎಂದು ಆಯೋಗ ಅಂದಾಜಿಸಿದೆ. ಹೀಗಾಗಿ, ಈಗಿರುವ ಡಿಸೆಂಬರ್ 31ರ ಗಡುವಿನೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸುವುದು ಕಷ್ಟವಾಗಲಿದೆ ಎಂದು ಅರ್ಜಿಯಲ್ಲಿ ವಿವರಿಸಿದೆ.

ಆದ್ದರಿಂದ, ಈಗಾಗಲೇ ಲಭ್ಯವಿರುವ ಏಪ್ರಿಲ್ 18ರ ಮತದಾರರ ಪಟ್ಟಿಯನ್ನು ಬಳಸಿಕೊಂಡು, 2027ರ ಜನವರಿ 31ರೊಳಗೆ ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಅನುಮತಿ ನೀಡುವಂತೆ ರಾಜ್ಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

ಇದರ ಜೊತೆಗೆ, ಕರ್ನಾಟಕದ ಎಲ್ಲ ಗ್ರಾಮ ಪಂಚಾಯಿತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು 2025ರ ಅಕ್ಟೋಬರ್ 1ರಂದು ಅಸ್ತಿತ್ವದಲ್ಲಿದ್ದ ವಿಧಾನಸಭಾ ಕ್ಷೇತ್ರವಾರು ಮತದಾರರ ಪಟ್ಟಿಗಳನ್ನು ಆಧರಿಸಿ ನಡೆಸಲು ಅನುಮತಿ ನೀಡುವಂತೆಯೂ ಆಯೋಗ ಪ್ರತ್ಯೇಕವಾಗಿ ಸುಪ್ರೀಂ ಕೋರ್ಟ್‌ಗೆ ಕೋರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ಮನೆ ಕೆಡವಿದ ಬುಲ್ಡೋಜರ್‌ಗಳೇ ಉತ್ತರ ಪ್ರದೇಶದ ಬ್ರ್ಯಾಂಡ್ ಎಂದ ಯೋಗಿ ಆದಿತ್ಯನಾಥ್; ಹೆಚ್ಚಿನ ಉತ್ಪಾದನೆ, ರಫ್ತಿಗೆ ಕರೆ 

ಲಖನೌ: ಮುಸ್ಲಿಮರು, ದಲಿತರು ಸೇರಿದಂತೆ ಅಂಚಿನಲ್ಲಿರುವ ಸಮುದಾಯಗಳು ಮತ್ತು ಸರ್ಕಾರದ ನೀತಿಗಳನ್ನು ವಿರೋಧಿಸುವವರನ್ನು ಗುರಿಯಾಗಿಸಿಕೊಂಡು ನಡೆದಿರುವ ಮನೆ, ಕಟ್ಟಡಗಳ ಧ್ವಂಸ ಕಾರ್ಯಾಚರಣೆಗಳ ಮೂಲಕ ವಿವಾದದ ಕೇಂದ್ರವಾಗಿರುವ ಬುಲ್ಡೋಜರ್‌ಗಳನ್ನೇ ಉತ್ತರ ಪ್ರದೇಶದ ಬ್ರ್ಯಾಂಡ್ ಎಂದು...

ಕ್ಷೇತ್ರ ಮರುವಿಂಗಡಣೆ ಮಸೂದೆ ಅಂಗೀಕಾರಕ್ಕೆ ವಿಶೇಷ ಅಧಿವೇಶನ: ‘ಪ್ರತಿಪಕ್ಷಗಳಿಗೆ ಯಾವುದೇ ಮಾಹಿತಿ ನೀಡಿಲ್ಲ’ ಎಂದ ಪ್ರಿಯಾಂಕಾ

ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಉದ್ದೇಶದಿಂದ ಸಂಸತ್ತಿನ ವಿಶೇಷ ಅಧಿವೇಶನ ಕರೆಯಲು ಕೇಂದ್ರ ಸರ್ಕಾರ ಮುಂದಾಗಿದೆ ಎಂಬ ವರದಿಗಳ ಬಗ್ಗೆ ಪ್ರತಿಪಕ್ಷಗಳಿಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ...

ನನ್ನ ಫೋನ್ ಟ್ಯಾಪ್ ಮಾಡುತ್ತಿರುವ ಪ್ರಧಾನಿ, ಅವರ ವಿರುದ್ಧದ ಸಾಕ್ಷ್ಯಗಳೇನು ಎಂಬುದು ಅವರಿಗೆ ಗೊತ್ತಿದೆ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಚರ್ಚೆಗೆ ಆಹ್ವಾನ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ಸಾಕ್ಷ್ಯಗಳು ತಮ್ಮ ಫೋನ್‌ನಲ್ಲಿವೆ. ಅದನ್ನು ಪ್ರಧಾನಿ ಟ್ಯಾಪ್ ಮಾಡುತ್ತಿದ್ದಾರೆ ಎಂದು...

ಗಾಜಾದಲ್ಲಿ ಇಸ್ರೇಲ್ ನರಮೇಧ ನಡೆಸಿದೆ; ವ್ಯವಸ್ಥಿತ ಹತ್ಯೆ, ವಿನಾಶವನ್ನು ಪುನರುಚ್ಚರಿಸಿದ ನೊಬೆಲ್ ಪುರಸ್ಕೃತೆ ನವಿ ಪಿಳ್ಳೈ 

ಗಾಜಾ/ಡರ್ಬನ್: ಪ್ಯಾಲೆಸ್ಟೀನಿಯನ್ನರ ವಿರುದ್ಧ ಇಸ್ರೇಲ್ ನಡೆಸಿರುವುದು ಕೇವಲ ಯುದ್ಧದ ಭಾಗವಾಗಿ ನಡೆದ ದಾಳಿಗಳಲ್ಲ, ಬದಲಿಗೆ ಒಂದು ಜನಸಮುದಾಯವನ್ನು ಸಂಪೂರ್ಣವಾಗಿ ಅಥವಾ ಭಾಗಶಃ ನಾಶಪಡಿಸುವ ಉದ್ದೇಶದಿಂದ ನಡೆಸಿದ ವ್ಯವಸ್ಥಿತ ನರಮೇಧ ಎಂಬ ತಮ್ಮ ಹಿಂದಿನ...

‘ನನ್ನ ಜೊತೆ ನೇರ ಚರ್ಚೆ ನಡೆಸಿದ ನಂತರ ಮೋದಿ ಪ್ರಧಾನಿಯಾಗಿ ಉಳಿಯುವುದಿಲ್ಲ’: ರಾಹುಲ್ ಗಾಂಧಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನೇರವಾಗಿ ಮುಖಾಮುಖಿ ಚರ್ಚೆ ನಡೆಸಲು ಮತ್ತೊಮ್ಮೆ ಸವಾಲು ಹಾಕಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ತಮ್ಮೊಂದಿಗೆ ನಡೆಯುವ ನೇರ ಚರ್ಚೆಯ ಬಳಿಕ ನರೇಂದ್ರ...

ನಾರ್ವೆ ಪತ್ರಕರ್ತೆಯ ಭಾರತ ಭೇಟಿಗೆ ತಡೆ : ಕಾರಣ ತಿಳಿಸುವಂತೆ ಒತ್ತಾಯಿಸಿದ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ

ನಾರ್ವೆ ಪತ್ರಕರ್ತೆ ಹೆಲ್ಲೆ ಲಿಂಗ್ ಅವರ ಭಾರತ ಭೇಟಿಗೆ ಕೊನೆ ಕ್ಷಣದಲ್ಲಿ ತಡೆಯೊಡ್ಡಿರುವುದಕ್ಕೆ ಕಾರಣ ತಿಳಿಸುವಂತೆ ಪತ್ರಕರ್ತರ ಸಂಘ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (ಇಜಿಐ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಗುರುವಾರ (ನ.12)...

ಶಾಂತಿಯುತ ಪ್ರತಿಭಟನೆಗಳನ್ನು ಹತ್ತಿಕ್ಕಲು ಕ್ರಿಮಿನಲ್ ಪ್ರಕರಣಗಳ ಬಳಕೆ ಪ್ರಜಾಪ್ರಭುತ್ವಕ್ಕೆ ಕರಾಳ ದಿನ: ಬಾಂಬೆ ಹೈಕೋರ್ಟ್

ಮುಂಬೈ: ಜನರ ಮೂಲಭೂತ ಹಕ್ಕಾಗಿರುವ ಶಾಂತಿಯುತ ಪ್ರತಿಭಟನೆಗಳನ್ನು ಹತ್ತಿಕ್ಕಲು ಕ್ರಿಮಿನಲ್ ಪ್ರಕರಣಗಳನ್ನು ಅಸ್ತ್ರವಾಗಿ ಬಳಸಿದರೆ ಅದು ಪ್ರಜಾಪ್ರಭುತ್ವಕ್ಕೆ ದುಃಖದ ದಿನವಾಗಲಿದೆ ಎಂದು ಬಾಂಬೆ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಸಾರ್ವಜನಿಕ ಸಮಸ್ಯೆಗಳ ವಿರುದ್ಧ...

ಕುರ್ಚಿ ಹಾಕುವ ದಿನಗಳಿಂದಲೂ ಮಾಧ್ಯಮಗಳೊಂದಿಗೆ ದೀರ್ಘಕಾಲದ ಒಡನಾಟವಿದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ

ಪತ್ರಕರ್ತರ ಕಾರ್ಯಕ್ರಮಗಳಲ್ಲಿ ಅವರಿಗೆ ಕುರ್ಚಿ ಹಾಕುವ ಜವಾಬ್ದಾರಿ ನಿರ್ವಹಿಸುತ್ತಿದ್ದ ದಿನಗಳಿಂದಲೂ ಮಾಧ್ಯಮಗಳೊಂದಿಗೆ ತಮಗೆ ದೀರ್ಘಕಾಲದ ಸಂಬಂಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ (ನ.12) ಹೇಳಿದ್ದಾರೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪತ್ರಕರ್ತರಿಗಾಗಿ ಆಯೋಜಿಸಿದ್ದ...

ಕಾಂಗ್ರೆಸ್ ಸರ್ಕಾರದ ನೀತಿಗಳ ವಿರುದ್ಧವೂ ಜನರು ಪ್ರತಿಭಟನೆ ನಡೆಸಬಹುದು: ಪ್ರಿಯಾಂಕಾ ಗಾಂಧಿ

ಪ್ರತಿಭಟನೆ ನಡೆಸುವ ಹಕ್ಕು ಸಂವಿಧಾನ ನೀಡಿರುವ ಮೂಲಭೂತ ಹಕ್ಕಾಗಿದ್ದು, ಶಾಂತಿಯುತವಾಗಿ ಪ್ರತಿಭಟನೆ ನಡೆಸುವವರೆಗೆ ಕಾಂಗ್ರೆಸ್ ನೇತೃತ್ವದ ಸರ್ಕಾರಗಳ ನೀತಿಗಳ ವಿರುದ್ಧವೂ ಜನರು ಹೋರಾಟ ನಡೆಸಲು ಸ್ವತಂತ್ರರು ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ...

ಎನ್‌ವಿಡಿಯಾ ಸಿಇಒ ವೈಯಕ್ತಿಕ ಸಂಬಂಧ ವಿವಾದ: ‘ಗೂಢಚಾರಿಕೆ ನಿರೂಪಣೆಗಳನ್ನು ಸೃಷ್ಟಿಸಿ ತಾಂತ್ರಿಕ ದಿಗ್ಬಂಧನ ಹೇರಬೇಡಿ’: ಅಮೆರಿಕಕ್ಕೆ ಚೀನಾ ಎಚ್ಚರಿಕೆ

ಅಮೆರಿಕವು ಚೀನಾದ ತಾಂತ್ರಿಕ ಪ್ರಗತಿಗೆ ಕಡಿವಾಣ ಹಾಕಲು ಗೂಢಚಾರಿಕೆಯ ಆರೋಪಗಳನ್ನು ನೆಪವಾಗಿ ಬಳಸುತ್ತಿದೆ ಎಂದು ಆರೋಪಿಸಿರುವ ಚೀನಾ, ಇಂತಹ ನಿರೂಪಣೆಗಳನ್ನು ಸೃಷ್ಟಿಸುವುದನ್ನು ನಿಲ್ಲಿಸುವಂತೆ ಅಮೆರಿಕವನ್ನು ಒತ್ತಾಯಿಸಿದೆ. ಎನ್‌ವಿಡಿಯಾ (Nvidia) ಸಿಇಒ ಜೆನ್ಸನ್ ಹುವಾಂಗ್...