’ಮಹಾತ್ಮರ ಬೆನ್ನು ಬಿಡದ ಟೀಕಾಕಾರರು ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ? ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಾಕಾರರನ್ನು ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವರು ಮಾಡುತ್ತಿರುವ ಆರೋಪ-ಪ್ರತ್ಯಾರೋಪಗಳಿಗೆ ಪ್ರತಿಕ್ರಿಯೆಯಾಗಿ ಸಿದ್ದರಾಮಯ್ಯ ಈ ರೀತಿಯಾಗಿ ಉತ್ತರಿಸಿದ್ದಾರೆ ಎನ್ನಬಹುದಾಗಿದೆ.
“ಮಹಾತ್ಮ ಗಾಂಧೀಜಿ ಅವರನ್ನು ಹಿಂದೂ ವಿರೋಧಿ ಎನ್ನುತ್ತಿದ್ದ ಹಿಂದೂಗಳು, ದಲಿತ ವಿರೋಧಿ ಎನ್ನುತ್ತಿದ್ದ ದಲಿತರು, ಮುಸ್ಲಿಮ್ ವಿರೋಧಿ ಎನ್ನುತ್ತಿದ್ದ ಮುಸ್ಲಿಮರು ಇದ್ದರು. ಮಹಾತ್ಮರ ಬೆನ್ನು ಬಿಡದ ಟೀಕಾಕಾರರು
ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ..?” ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿಯಿಲ್ಲ;ನಾನು ಕರ್ನಾಟಕ ರಾಜಕೀಯಕ್ಕೆ ಮಾತ್ರ ಸೀಮಿತ- ಸಿದ್ದರಾಮಯ್ಯ
ಮಹಾತ್ಮ ಗಾಂಧೀಜಿ ಅವರನ್ನು
ಹಿಂದೂ ವಿರೋಧಿ ಎನ್ನುತ್ತಿದ್ದ ಹಿಂದೂಗಳು,
ದಲಿತ ವಿರೋಧಿ ಎನ್ನುತ್ತಿದ್ದ ದಲಿತರು,
ಮುಸ್ಲಿಮ್ ವಿರೋಧಿ ಎನ್ನುತ್ತಿದ್ದ ಮುಸ್ಲಿಮರು ಇದ್ದರು.ಮಹಾತ್ಮರ ಬೆನ್ನು ಬಿಡದ ಟೀಕಾಕಾರರು
ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ?ಸಬ್ ಕೋ ಸನ್ಮತಿ ದೇ ಭಗವಾನ್.#MahatmaGandhiji
— Siddaramaiah (@siddaramaiah) October 17, 2021
ಟ್ವೀಟ್ ಕೊನೆಯಲ್ಲಿ ’ಸಬ್ ಕೋ ಸನ್ಮತಿ ದೇ ಭಗವಾನ್’ ಎಂದು ಸೇರಿಸಿದ್ದಾರೆ.
ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದ ವಿಚಾರಕ್ಕೆ ಸಿದ್ದರಾಮಯ್ಯ- ಕುಮಾರಸ್ವಾಮಿ ನಡುವೆ ಭಾರಿ ಆರೋಪ-ಪ್ರತ್ಯಾರೋಪದ ಟ್ವೀಟ್‌ಗಳು, ಹೇಳಿಕೆಗಳು ಬಂದಿದ್ದವು.
ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥಿಸಿಕೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಖಂಡಿಸಿದ್ದ ಸಿದ್ದರಾಮಯ್ಯ ಅವರ ಮೇಲೆ ಟ್ವೀಟ್‌ಗಳು, ಹೇಳಿಕೆಗಳ ಮೂಲಕ ಟೀಕಾಪ್ರಹಾರ ಮಾಡಲಾಗಿತ್ತು. ಇವುಗಳಿಗೆ ಉತ್ತರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಈ ರೀತಿ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ; ರಾಜೀನಾಮೆ ಕೊಟ್ಟು ಮನೆಗೆ ಹೋಗಿ: ಸಿದ್ದರಾಮಯ್ಯ


