Homeಕರ್ನಾಟಕಮಹಾತ್ಮರನ್ನು ಬಿಡದ ಟೀಕಾಕಾರರು ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ?- ಸಿದ್ದರಾಮಯ್ಯ

ಮಹಾತ್ಮರನ್ನು ಬಿಡದ ಟೀಕಾಕಾರರು ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ?- ಸಿದ್ದರಾಮಯ್ಯ

- Advertisement -
- Advertisement -

’ಮಹಾತ್ಮರ ಬೆನ್ನು ಬಿಡದ ಟೀಕಾಕಾರರು ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ? ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಾಕಾರರನ್ನು ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವರು ಮಾಡುತ್ತಿರುವ ಆರೋಪ-ಪ್ರತ್ಯಾರೋಪಗಳಿಗೆ ಪ್ರತಿಕ್ರಿಯೆಯಾಗಿ ಸಿದ್ದರಾಮಯ್ಯ ಈ ರೀತಿಯಾಗಿ ಉತ್ತರಿಸಿದ್ದಾರೆ ಎನ್ನಬಹುದಾಗಿದೆ.

“ಮಹಾತ್ಮ ಗಾಂಧೀಜಿ ಅವರನ್ನು ಹಿಂದೂ ವಿರೋಧಿ ಎನ್ನುತ್ತಿದ್ದ ಹಿಂದೂಗಳು, ದಲಿತ ವಿರೋಧಿ ಎನ್ನುತ್ತಿದ್ದ ದಲಿತರು, ಮುಸ್ಲಿಮ್ ವಿರೋಧಿ ಎನ್ನುತ್ತಿದ್ದ ಮುಸ್ಲಿಮರು ಇದ್ದರು. ಮಹಾತ್ಮರ ಬೆನ್ನು ಬಿಡದ ಟೀಕಾಕಾರರು
ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ..?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿಯಿಲ್ಲ;ನಾನು ಕರ್ನಾಟಕ ರಾಜಕೀಯಕ್ಕೆ ಮಾತ್ರ ಸೀಮಿತ- ಸಿದ್ದರಾಮಯ್ಯ

ಟ್ವೀಟ್ ಕೊನೆಯಲ್ಲಿ ’ಸಬ್ ಕೋ ಸನ್ಮತಿ ದೇ ಭಗವಾನ್’ ಎಂದು ಸೇರಿಸಿದ್ದಾರೆ.

ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದ ವಿಚಾರಕ್ಕೆ ಸಿದ್ದರಾಮಯ್ಯ- ಕುಮಾರಸ್ವಾಮಿ ನಡುವೆ ಭಾರಿ ಆರೋಪ-ಪ್ರತ್ಯಾರೋಪದ ಟ್ವೀ‌ಟ್‌ಗಳು, ಹೇಳಿಕೆಗಳು ಬಂದಿದ್ದವು.

ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥಿಸಿಕೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಖಂಡಿಸಿದ್ದ ಸಿದ್ದರಾಮಯ್ಯ ಅವರ ಮೇಲೆ ಟ್ವೀಟ್‌ಗಳು, ಹೇಳಿಕೆಗಳ ಮೂಲಕ ಟೀಕಾಪ್ರಹಾರ ಮಾಡಲಾಗಿತ್ತು. ಇವುಗಳಿಗೆ ಉತ್ತರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಈ ರೀತಿ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ; ರಾಜೀನಾಮೆ ಕೊಟ್ಟು ಮನೆಗೆ ಹೋಗಿ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...