Homeಮುಖಪುಟಯಡಿಯೂರಪ್ಪನವರೇ, ನೀವು ಪಕ್ಷದ ಗುಲಾಮರಾಗಬೇಡಿ. ನಿಷೇಧಾಜ್ಞೆ ಹಿಂಪಡೆಯಿರಿ: ಸಿದ್ದರಾಮಯ್ಯ ಆಗ್ರಹ

ಯಡಿಯೂರಪ್ಪನವರೇ, ನೀವು ಪಕ್ಷದ ಗುಲಾಮರಾಗಬೇಡಿ. ನಿಷೇಧಾಜ್ಞೆ ಹಿಂಪಡೆಯಿರಿ: ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ನಮ್ಮ ಜನ ಶಾಂತಿಪ್ರಿಯರು, ನ್ಯಾಯಾಲಯದ ಬಗ್ಗೆ ಗೌರವ, ಕಾನೂನಿನ ಬಗ್ಗೆ ನಿಷ್ಠೆ ಉಳ್ಳವರು. ಒಡೆಯುವವರು, ಬೆಂಕಿ ಹಚ್ಚುವವರು ನಿಮ್ಮ ಪಕ್ಷದಲ್ಲಿ ಹೆಚ್ಚಿದ್ದಾರೆ. ಯಡಿಯೂರಪ್ಪ ಅವರೇ, ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡದೆ ನಿಷೇಧಾಜ್ಞೆ ಹೇರಿ ನೀವು ಕನ್ನಡಿಗರನ್ನು ಅವಮಾನಿಸಿದ್ದೀರಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ನಾನು ಶಾಂತಿಯುತವಾಗಿ ನಡೆಯುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಹೋರಾಟವನ್ನು ಬೆಂಬಲಿಸುತ್ತೇನೆ ಎಂದು ಘೋಷಿಸಿದ್ದಾರೆ.

ಸ್ವಾತಂತ್ರ್ಯಹೋರಾಟದಲ್ಲಿ ಭಾಗವಹಿಸದ ನಿಮ್ಮ ಪಕ್ಷಕ್ಕೆ ದೇಶದಲ್ಲಿ ನಡೆದ ಅಹಿಂಸಾತ್ಮಕ ಸ್ವಾತಂತ್ರ್ಯ ಹೋರಾಟದ ಬಗ್ಗೆ ತಿಳಿದಿರಲಾರದು. ಗಾಂಧಿ, ನೆಹರೂ ಮತ್ತು ಪಟೇಲ್ ಸೇರಿದಂತೆ ಎಲ್ಲರೂ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದವರು. ಹೋರಾಟದ ಪರಂಪರೆಗೆ ತಡೆಯೊಡ್ಡಬೇಡಿ. ಪ್ರತಿಭಟನೆ, ಪ್ರತಿರೋಧ, ಚಳುವಳಿಗಳೆಲ್ಲ ಆರೋಗ್ಯಪೂರ್ಣ ಪ್ರಜಾಪ್ರಭುತ್ವದ ಲಕ್ಷಣಗಳು. ಭಿನ್ನಮತದ ಅಭಿವ್ಯಕ್ತಿಯ ಕೊರಳು ಹಿಚುಕಲು ಹೊರಡುವುದು ಸರ್ವಾಧಿಕಾರಿ ಧೋರಣೆ. ಇದು ಹಿಟ್ಲರನ ಜರ್ಮನಿ ಅಲ್ಲ, ಗಾಂಧೀಜಿಯವರ ಭಾರತ. ಮಾನ್ಯ ಯಡಿಯೂರಪ್ಪ ಅವರೇ, ನೀವು ಪಕ್ಷದ ಗುಲಾಮರಾಗಬೇಡಿ, ಆತ್ಮಸಾಕ್ಷಿಗೆ ಕಿವಿಕೊಡಿ ಎಂದಿದ್ದಾರೆ.

ನಿಮ್ಮ ಪೌರತ್ವ ತಿದ್ದುಪಡಿ ಕಾಯ್ದೆಯ ಜನಹಿತದ ಬಗ್ಗೆ ಅಷ್ಟೊಂದು ಭರವಸೆ ಇದ್ದಿದ್ದರೆ ಪ್ರತಿಭಟನೆಗೆ ಯಾಕೆ ಹೆದರುತ್ತಿದ್ದೀರಿ, ನರೇಂದ್ರ ಮೋದಿ ಅವರೇ? ಜನಾಭಿಪ್ರಾಯ ಆಲಿಸಿ, ಅವರಿಗೆ ಮನವರಿಕೆ ಮಾಡಿಕೊಡಿ. ದಂಡಪ್ರಯೋಗ ಮನುಷ್ಯನ ದೌರ್ಬಲ್ಯ. ನಿಮ್ಮ ವರ್ತನೆಯೇ ನಿಮ್ಮ ದುಷ್ಟ ಆಲೋಚನೆಗೆ ಸಾಕ್ಷಿ.
ಕಾರ್ಯಾಂಗದ ಮುಖ್ಯ ಭಾಗವಾಗಿರುವ ಪೊಲೀಸರೇ, ನೀವು ಸರ್ಕಾರಿ ನೌಕರರಾಗಿದ್ದರೂ ಮೊದಲು ಮನುಷ್ಯರು ಎಂಬುದನ್ನು ಮರೆಯಬೇಡಿ ಎಂದಿದ್ದಾರೆ.

ಕರ್ನಾಟಕದ ಪೊಲೀಸರಿಗೆ ಅವರದ್ದೇ ಆಗಿರುವ ಹಿರಿಮೆ-ಗರಿಮೆಗಳಿವೆ. ನಿಮಗೆ ದೆಹಲಿ ಪೊಲೀಸರು ಆದರ್ಶವಾಗುವುದು ಬೇಡ, ಅವರ ಸ್ಪೂರ್ತಿಯಿಂದ ಕೆಲಸ ಮಾಡಿದರೆ ಕರ್ನಾಟಕದ ಜನತೆ ನಿಮ್ಮನ್ನು ಕ್ಷಮಿಸಲಾರರು ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಾರಾಷ್ಟ್ರ ಸರ್ಕಾರ

50ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ, ಬಹುಮತ ಸಾಬೀತುಪಡಿಸುತ್ತೇನೆ: ಬಂಡಾಯ ನಾಯಕ ಏಕನಾಥ್ ಶಿಂಧೆ

0
ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್‌ ಕೋಶ್ಯಾರಿ ಅವರು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಗೆ ಬಹುಮತ ಸಾಬೀತು ಪಡಿಸುವಂತೆ ಸೂಚಿಸಿದ ಬೆನ್ನಲ್ಲೇ, ಬಂಡಾಯ ಶಿವಸೇನೆ ನಾಯಕ ಏಕನಾಥ್ ಶಿಂಧೆ ಇಂದು ತಮ್ಮದೇ ಪಕ್ಷದ 50 ಶಾಸಕರು...