Homeಮುಖಪುಟಕೆ.ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ತೆಕ್ಕೆಗೆ

ಕೆ.ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ತೆಕ್ಕೆಗೆ

ಅಣ್ಣಾಮಲೈರವರು ನಿವೃತ್ತಿ ಘೋಷಿಸಿದಾಗಲೇ ಸಿಂಗಂ ಬಿಜೆಪಿ ಸೇರುತ್ತಾರೆ ಎಂದು ಹಲವರು ಊಹಿಸಿದ್ದರು. ಇನ್ನು ಕೆಲವರು ಅವರು ಬಿಜೆಪಿ ಸೇರುವುದಕ್ಕಾಗಿಯೇ ರಾಜೀನಾಮೆ ನೀಡಿದ್ದಾರೆ ಎಂದು ಟೀಕಿಸಿದ್ದರು.

- Advertisement -
- Advertisement -

ಕರ್ನಾಟಕದ ಸಿಂಗಂ ಎಂದು ಕರೆಸಿಕೊಂಡಿದ್ದ ಕರ್ನಾಟಕ ಕೇಡರ್‌ನ ನಿವೃತ್ತ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಲಿದ್ದಾರೆ.

ಇಂದು ಮಧ್ಯಾಹ್ನ ಒಂದು ಗಂಟೆಗೆ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಅವರು ಬಿಜೆಪಿ ಪಕ್ಷ ಸೇರಲಿದ್ದು, ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ಅಣ್ಣಾಮಲೈಯವರನ್ನು ಪಕ್ಷಕ್ಕೆ ಸೆಳೆಯುವಲ್ಲಿ ಸಫಲವಾಗಿದೆ.

ಅಣ್ಣಾಮಲೈರವರು ಕರ್ನಾಟಕದಲ್ಲಿ ಬೆಂಗಳೂರು, ಚಿಕ್ಕಮಗಳೂರು ಸೇರಿ ಹಲವೆಡೆ ಡಿಸಿಪಿ, ಎಸ್‌ಪಿಯಾಗಿ ಕಾರ್ಯನಿರ್ವಹಿಸಿ 2019ರ ಮೇ ತಿಂಗಳಿನಲ್ಲಿ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದರು. ನಿವೃತ್ತಿ ನಂತರ ಕರೂರ್ ಮತ್ತು ಕೊಯಂಬತ್ತೂರಿನಲ್ಲಿ ಕೃಷಿಕರೊಂದಿಗೆ ಕೆಲಸ ಮಾಡುತ್ತಿದ್ದಾರೆ.

ಅಣ್ಣಾಮಲೈರವರು ನಿವೃತ್ತಿ ಘೋಷಿಸಿದಾಗಲೇ ಸಿಂಗಂ ಬಿಜೆಪಿ ಸೇರುತ್ತಾರೆ ಎಂದು ಹಲವರು ಊಹಿಸಿದ್ದರು. ಇನ್ನು ಕೆಲವರು ಅವರು ಬಿಜೆಪಿ ಸೇರುವುದಕ್ಕಾಗಿಯೇ ರಾಜೀನಾಮೆ ನೀಡಿದ್ದಾರೆ ಎಂದು ಟೀಕಿಸಿದ್ದರು. ಆದರೆ ಆಗ ಅದನ್ನು ನಿರಾಕರಿಸಿದ್ದ ಅವರು, ಕೊನೆಗೂ ಬಿಜೆಪಿ ಸೇರುವ ಮೂಲಕ ತಮ್ಮ ಟೀಕಾಕಾರರ ಊಹೆಯನ್ನು ನಿಜ ಮಾಡಿದ್ದಾರೆ.

ಬಿಜೆಪಿ ಸೇರುತ್ತಿರುವ ಅಣ್ಣಾಮಲೈಗೆ ಸಚಿವ ಡಾ.ಸುಧಾಕರ್ ಸೇರಿ ಹಲವರು ಟ್ವೀಟ್ ಮೂಲಕ ಸ್ವಾಗತ ಕೋರಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಯಡಿಯೂರಪ್ಪ ಅಣ್ಣಾಮಲೈ ಬಿಜೆಪಿ ಸೇರ್ಪಡೆ ವಿಚಾರ ನನಗೆ ಗೊತ್ತಿಲ್ಲ ಎಂದಿದ್ದಾರೆ.


ಇದನ್ನೂ ಓದಿ: ಒಂದು ರಾಜೀನಾಮೆ ಹುಟ್ಟಿಸಿರುವ ಪ್ರಶ್ನೆಗಳು – ಅರುಣ್ ಜೋಳದ ಕೂಡ್ಲಿಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...

ನೇಪಾಳ ಚುನಾವಣೆ : ಪ್ರಚಂಡ ಗೆಲುವಿನತ್ತ ಆರ್‌ಎಸ್‌ಪಿ; ಬೆಂಗಳೂರಿನಲ್ಲಿ ಪದವಿ ಪಡೆದಿದ್ದ ಬಲೇಂದ್ರ ಶಾಗೆ ಪ್ರಧಾನಿ ಪಟ್ಟ?

'ಜೆನ್‌ ಝೀ ದಂಗೆ'ಯ ಬಳಿಕ ನಡೆದ ನೇಪಾಳದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಯುವ ನಾಯಕ ಬಲೇಂದ್ರ ಶಾ ನೇತೃತ್ವದ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್‌ಎಸ್‌ಪಿ) ಅಭೂತಪೂರ್ವ ಗೆಲುವಿನತ್ತ ಮುನ್ನುಗ್ಗುತ್ತಿದೆ.  ಕಠ್ಮಂಡುವಿನ ಮಾಜಿ ಮೇಯರ್ ಮತ್ತು ಮಾಜಿ...

‘ರಾಷ್ಟ್ರಪತಿ ಮುಂದಿಟ್ಟುಕೊಂಡು ಬಿಜೆಪಿಯಿಂದ ರಾಜಕೀಯ’ : ದ್ರೌಪದಿ ಮುರ್ಮು ಆರೋಪಗಳಿಗೆ ಮಮತಾ ಬ್ಯಾನರ್ಜಿ ತಿರುಗೇಟು

'ಅಂತಾರಾಷ್ಟ್ರೀಯ ಸಂತಾಲ್' ಸಮ್ಮೇಳನದ ಸ್ಥಳ ಬದಲಾವಣೆ, ಶಿಷ್ಟಾಚಾರ ಉಲ್ಲಂಘನೆ ಸೇರಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ಕೊಟ್ಟಿದ್ದಾರೆ. ಪಶ್ಚಿಮ...

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...