Homeಚಳವಳಿಕೇಜ್ರಿವಾಲ್ ನಡೆ ದೇಶಕ್ಕೆ ಮಾದರಿಯಾಗಿದೆ: ದೆಹಲಿ ಸರ್ಕಾರಿ ಶಾಲೆಗಳನ್ನು ನೋಡಿ ಮಾರುಹೋದ ರಮೇಶ್ ಕುಮಾರ್

ಕೇಜ್ರಿವಾಲ್ ನಡೆ ದೇಶಕ್ಕೆ ಮಾದರಿಯಾಗಿದೆ: ದೆಹಲಿ ಸರ್ಕಾರಿ ಶಾಲೆಗಳನ್ನು ನೋಡಿ ಮಾರುಹೋದ ರಮೇಶ್ ಕುಮಾರ್

ಸರ್ಕಾರವೇ ಜಾರಿಗೆ ತರುವ ಗುಣಮಟ್ಟದ ಸರ್ಕಾರಿ ಶಾಲಾ ಶಿಕ್ಷಣದಿಂದ ಮಾತ್ರ ದೇಶವು ಬಡತನ ಮತ್ತು ಸಾಮಾಜಿಕ ದಾರಿದ್ರ್ಯಗಳಿಂದ ಬಿಡಿಸಿಕೊಂಡು ಮೇಲೇಳಲು ಸಾಧ್ಯವೆಂದ ಕರ್ನಾಟಕದ ಮಾಜಿ ಸ್ಪೀಕರ್

- Advertisement -
- Advertisement -

ದೆಹಲಿಗೆ ಭೇಟಿ ನೀಡಿದ್ದ ವೇಳೆ ದೆಹಲಿ ಶಾಲೆಗಳ ಗುಣಮಟ್ಟವನ್ನು ನೋಡಿ, ಅರವಿಂದ ಕೇಜ್ರಿವಾಲ್ ಸರ್ಕಾರಿ ಶಾಲಾ ವ್ಯವಸ್ಥೆಯಲ್ಲಿ ಮೌನ ಕ್ರಾಂತಿಯನ್ನೇ ಮಾಡಿದ್ದಾರೆ ಎಂದು ಕರ್ನಾಟಕದ ಮಾಜಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ರವರು ಆಶ್ಚರ್ಯ ಮತ್ತು ಅಭಿಮಾನ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಕ್ಷೇತ್ರವು ಖಾಸಗೀಕರಣಗೊಂಡು ಶಿಕ್ಷಣ ವ್ಯವಸ್ಥೆಯಲ್ಲಿ ಖಾಸಗಿಯವರು ಮೇಲುಗೈ ಸಾಧಿಸಿದ್ದಾರೆ. ಶಿಕ್ಷಣವನ್ನು ಮಾರಾಟದ ಸರಕನ್ನಾಗಿಸಿ ಮಾರಾಟಕ್ಕಿಟ್ಟಿರುವ ಸಂದರ್ಭದಲ್ಲಿ ಶಿಕ್ಷಣವು ಕೆಲವೇ ಕೆಲವು ಜನರ ಸ್ವತ್ತಾಗುತ್ತಿದೆ. ಕೆಳವರ್ಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿರುವ ಭಾರತದ ಶಿಕ್ಷಣ ವ್ಯವಸ್ಥೆಯ ಬಿಕ್ಕಟ್ಟನ್ನು ಬಗೆಹರಿಸಲು ಕೇವಲ ಶಿಕ್ಷಕರಿಂದ ಸಾಧ್ಯವಿಲ್ಲ. ಉತ್ತಮ ತರಬೇತಿ ಪಡೆದ ಶಿಕ್ಷಕರ ಜೊತೆಗೆ ದೂರದೃಷ್ಟಿಯುಳ್ಳ ಅಧಿಕಾರಿಗಳು, ರಾಜಕಾರಣಿಗಳು ಮತ್ತು ಸರ್ಕಾರವೂ ಕೈಜೋಡಿಸಬೇಕು. ಅಂತಹ ಮೌಲ್ಯಯುತವಾದ ಕೆಲಸವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಾಡಿದ್ದಾರೆ ಎಂದಿದ್ದಾರೆ.

ವಿಡಿಯೋ ನೋಡಿ

ಭಾರತದಂತಹ ದೇಶದಲ್ಲಿ ಸರ್ಕಾರವೊಂದು ಇಂತಹ ಅದ್ಭುತವಾದ, ಉತ್ತಮ ಗುಣಮಟ್ಟದ ಶಾಲೆಗಳನ್ನು ಕಟ್ಟಲು ಸಾಧ್ಯವೇ ಎಂದು ಆಶ್ಚರ್ಯವಾಯಿತು. ಖಾಸಗಿ ಶಾಲೆಗಳನ್ನು ಮೀರಿಸುವಂತಹ ಅತ್ಯುತ್ತಮ ದರ್ಜೆಗೆ ಸರ್ಕಾರಿ ಶಾಲೆಗಳನ್ನು ಏರಿಸಿದ್ದಾರೆ. ಬಡ ಮತ್ತು ಮಧ್ಯಮ ವರ್ಗದ ಕುಟುಂಬದಿಂದ ಬಂದ ಮಕ್ಕಳಿಗೆ ಪ್ರೀತಿ ಮತ್ತು ಗೌರವದಿಂದ ಅತ್ಯುತ್ತಮ ಶಿಕ್ಷಣ ನೀಡುವ ಮೂಲಕ ಅವರ ಬದುಕಿಗೆ ಅರ್ಥ ಕಲ್ಪಿಸುತ್ತಿದ್ದಾರೆ ಎಂದಿದ್ದಾರೆ.

ಶಾಲೆಗಳಲ್ಲಿ ಶಿಕ್ಷಕರ ಬದ್ಧತೆ ಮತ್ತು ಮಕ್ಕಳ ಮೇಲೆ ಅವರಿಗಿರುವ ಕಾಳಜಿಯು ವಿದ್ಯಾರ್ಥಿಗಳಲ್ಲಿ ಕಲಿಯುವ ಸಾಮರ್ಥ್ಯವನ್ನು ಹೆಚ್ಚಿಸಿದೆ. ಒಂದು ರಾಜ್ಯದ ಅಥವಾ ದೇಶದ ನಾಯಕತ್ವ ವಹಿಸಿಕೊಂಡವರಿಗೆ ಪ್ರಾಮಾಣಿಕತೆ ಮತ್ತು ಸಾಮಾಜಿಕ ಕಳಕಳಿಯ ಹೃದಯವಿದ್ದರೆ ಅದ್ಭುತವಾದ ಕೆಲಸವನ್ನು ಮಾಡಬಹುದು ಎಂಬುದಕ್ಕೆ ಅರವಿಂದ ಕೇಜ್ರಿವಾಲ್ರವರ ಪರಿಶ್ರಮವೇ ಸಾಕ್ಷಿ. ಶಿಕ್ಷಣವನ್ನು ವ್ಯಾಪಾರ ಮಾಡುತ್ತಿರುವ ಸಂದರ್ಭದಲ್ಲಿ ಕೆಳ ವರ್ಗದ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಅತ್ಯುತ್ತಮವಾದ ಶಿಕ್ಷಣವನ್ನು ಕೊಡುವ ಮೌನ ಕ್ರಾಂತಿಯನ್ನೇ ಮಾಡಿದ್ದಾರೆ. ಅರವಿಂದ ಕೇಜ್ರಿವಾಲ್ ರ ಕಾರ್ಯದಕ್ಷತೆಯನ್ನು ನೋಡಿ ನಾನು ನಿಜವಾಗಿಯೂ ಚಕಿತಗೊಂಡಿದ್ದೇನೆ ಎಂದು ಸಂತೋಷಪಟ್ಟಿದ್ದಾರೆ.

ದೇಶದ ಎಲ್ಲಾ ಜನವರ್ಗಗಳ ಕೈಗೆಟಕುವಂತಹ, ಸರ್ಕಾರವೇ ಜಾರಿಗೆ ತರುವ ಗುಣಮಟ್ಟದ ಸರ್ಕಾರಿ ಶಾಲಾ ಶಿಕ್ಷಣದಿಂದ ಮಾತ್ರ ದೇಶವು ಬಡತನ ಮತ್ತು ಸಾಮಾಜಿಕ ದಾರಿದ್ರ್ಯಗಳಿಂದ ಬಿಡಿಸಿಕೊಂಡು ಮೇಲೇಳಲು ಸಾಧ್ಯ. ಅಂತಹ ಅದ್ಭುತವಾದ ಸಾಧನೆಯನ್ನು ದೆಹಲಿಯ ಕೇಜ್ರಿವಾಲ್ ಅವರ ಸರ್ಕಾರ ಮಾಡಿದೆ. ಇಡೀ ದೇಶವು ಇವರ ಮಾರ್ಗವನ್ನು ಅನುಸರಿಸಿದರೆ ದೇಶಕ್ಕೆ ಒಳ್ಳೆಯ ಭವಿಷ್ಯವಿದೆ, ದೇಶವು ಮುಂಚೂಣಿ ರಾಷ್ಟ್ರವಾಗಿ ಬೆಳಯಲಿದೆ. ಇಂತಹ ಸಾಧನೆಯ ಕೆಲಸಗಳನ್ನು ದೇಶದ ಜನರಿಗೆ ತಿಳಿಸಲು ಮಾಧ್ಯಮಗಳಿಗೆ ಸಮಯವೂ ಇಲ್ಲ, ಮನಸ್ಸೂ ಇಲ್ಲ ಎಂದು ರಮೇಶ್ ಕುಮಾರ್ ಮಾಧ್ಯಮಗಳ ಮೇಲೆ ಬೇಸರ ವ್ಯಕ್ತಪಡಿಸಿದರು.

ರಮೇಶ್ ಕುಮಾರ್ ರವರ ದೆಹಲಿ ಭೇಟಿಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾದ ಎಚ್.ವಿ ಮಂಜುನಾಥ್ ರವರ ಜೊತೆಗಿದ್ದರು. ಇವರು ಸಹ ಜಿಲ್ಲಾಡಳಿತದ ವತಿಯಿಂದ ಚಿಕ್ಕಬಳ್ಳಾಪುರದ ಶಿಕ್ಷಣದಲ್ಲಿ ಬಹಳಷ್ಟು ಬದಲಾವಣೆ ತರಲು ಯತ್ನಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...