Homeಕರ್ನಾಟಕಕೊರೊನಾ: ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 12 ಸಾವಿರ ಕೇಸ್, ಬೆಂಗಳೂರಿನಲ್ಲಿ 9 ಸಾವಿರ ಪ್ರಕರಣ

ಕೊರೊನಾ: ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 12 ಸಾವಿರ ಕೇಸ್, ಬೆಂಗಳೂರಿನಲ್ಲಿ 9 ಸಾವಿರ ಪ್ರಕರಣ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು ಇಂದು ಒಂದೇ ದಿನ ಬರೋಬ್ಬರಿ 12,000 ಹೊಸ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 9,020 ಕೇಸ್‌ಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ವರದಿಯಾಗಿವೆ.

ರಾಜ್ಯದಲ್ಲಿ ಪಾಸಿಟಿವಿಟ್ ದರ ಶೇಕಡಾ 6.33 ರಷ್ಟಿದೆ. ಇಂದು ಕೊರೊನಾ ಸಂಬಂಧಿತ ಸಮಸ್ಯೆಗಳಿಂದ ನಾಲ್ವರು ಸಾವನ್ನಪ್ಪಿದ್ದಾರೆ. ಅದರಲ್ಲಿ ಇಬ್ಬರು ಬೆಂಗಳೂರಿನವರು. ನಿನ್ನೆ ವರದಿಯಾಗಿದ್ದ ಪ್ರಕರಣಗಳಿಗಿಂತ ಶೇಕಡಾ 27 ರಷ್ಟು ಏರಿಕೆಯಾಗಿದೆ.

ಒಟ್ಟು ಸಕ್ರಿಯ ಪ್ರಕರಣಗಳು 49,602 ಇದ್ದು, ಬೆಂಗಳೂರಿನಲ್ಲಿಯೇ 40 ಸಾವಿರ ಸಕ್ರಿಯ ಪ್ರಕರಣಗಳಿವೆ. ಇಂದು 901 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 1,89,499 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಈ ಕುರಿತು ಆರೋಗ್ಯ ಸಚಿವ ಕೆ.ಸುಧಾಕರ್‌ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ‘ಕೊರಗಜ್ಜನಿಗೆ ಅವಮಾನ ಮಾಡಲಾಗಿದೆ ಎನ್ನುವ ಸಂಘ ಪರಿವಾರ ಕೊರಗರ ಮೇಲೆ ಲಾಠಿ ಚಾರ್ಜ್ ಆದಾಗ ಎಲ್ಲಿತ್ತು?’

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...