ಸಿದ್ದರಾಮಯ್ಯ,siddaramaiah

ನಾನು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರ ಸಾಲ ಮಾಡಿ ಜನರಿಗೆ ಹೋಳಿಗೆ ತಿನ್ನಿಸುತ್ತಿದೆ ಎಂದು ಬಿಜೆಪಿಯವರು ವ್ಯಂಗ್ಯವಾಡುತ್ತಿದ್ದರು. ಈಗಿನ ಬಿಜೆಪಿ ಸರ್ಕಾರ ನಮಗಿಂತ ದುಪ್ಪಟ್ಟು ಸಾಲ ಮಾಡಿದೆ, ಹೋಗಲಿ ಅದನ್ನು ಜನರಿಗಾದ್ರೂ ಉಪಯೋಗಿಸ್ತಿದ್ದಾರಾ, ಅದೂ ಇಲ್ಲ. ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರೆ

ಭ್ರಷ್ಟಾಚಾರ ರಹಿತ ಹಾಗೂ ಪಾರದಾರ್ಶಕ ಆಡಳಿತವನ್ನು ರಾಜ್ಯದ ಜನ ನಿರೀಕ್ಷಿಸಿದ್ದರು, ಆದರೆ ಯಡಿಯೂರಪ್ಪನವರ ಸರ್ಕಾರ ಭ್ರಷ್ಟಾಚಾರವನ್ನೇ ಪಾರದರ್ಶಕವಾಗಿ ಮಾಡುತ್ತಿದೆ. ಯಡಿಯೂರಪ್ಪ ಕುಟುಂಬ ಜೆಸಿಬಿ ಮೂಲಕ ಹಣ ಗೋರುತ್ತಿದೆ ಎಂದು ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳಿದ್ದಾರೆ. ಇದಕ್ಕಿಂತ ಇನ್ನೇನು ಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಶಿರಾ ಉಪಚುನಾವಣೆ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಬಿಹಾರದ ಚುನಾವಣಾ ಭಾಷಣದಲ್ಲಿ ವಂಶಪಾರಂಪರ್ಯ ಭ್ರಷ್ಟಾಚಾರ ಗೆದ್ದಲು ಇದ್ದಂತೆ ಅಂದಿದ್ದಾರೆ, ಅವರ ಹೇಳಿಕೆ ಗಮನಿಸಿದರೆ ಬಹುಶಃ ಯಡಿಯೂರಪ್ಪನವರ ಆಡಳಿತವನ್ನು ನೋಡಿಯೇ ಈ ರೀತಿ ಹೇಳಿದ್ದಾರೆ ಅಂತ ನನಗನ್ನಿಸುತ್ತಿದೆ ಎಂದಿದ್ದಾರೆ.

ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ತಕ್ಷಣ ನೆರವು ನೀಡಿ, ಹಾನಿಗೊಳಗಾಗಿರುವ ಎಲ್ಲಾ ಮೂಲಸೌಕರ್ಯಗಳನ್ನು ಮರು ನಿರ್ಮಿಸಬೇಕು’ ಎಂದು ಆಗ್ರಹಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಬೀದರ್, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿದ್ದೇನೆ  ಅಲ್ಲಿಯ ಪರಿಸ್ಥಿತಿ ಆಧರಿಸಿ ಈ ಪತ್ರ ಬರೆದಿದ್ದೇನೆ. ಸಂತ್ರಸ್ತ ಪ್ರದೇಶಗಳ ಜನಪ್ರತಿನಿಧಿಗಳು, ಮುಖಂಡರು ನನ್ನ ಜೊತೆಯಲ್ಲಿ ಭಾಗವಹಿಸಿದ್ದರು. ನನ್ನ ಅನುಭವದ ಪ್ರಕಾರ ಈ ವರ್ಷದ ಹಾನಿ ಹಿಂದೆಂದಿಗಿಂತಲೂ ದುಪ್ಪಟ್ಟು ಪ್ರಮಾಣದಲ್ಲಿದೆ’ ಎಂದು ಬರೆದಿದ್ದಾರೆ.

’ನಗರಗಳಿಗೆ ವ್ಯಾಪಕವಾಗಿ ವಲಸೆ ಹೋಗುವ ಕಲ್ಯಾಣ ಕರ್ನಾಟಕದ ರೈತಾಪಿ ಮಕ್ಕಳು, ಬಡವರ ಬದುಕು ಮಳೆಯಿಂದಾಗಿ ಕೊಚ್ಚಿ ಹೋಗಿದೆ. ಕಳೆದ ವರ್ಷ ಬಿದ್ದ ಮಳೆಯಿಂದಾಗಿ ಹಾನಿಯಾದ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಮನೆಗಳಿಗೆ ಇದುವರೆಗೂ ಪರಿಹಾರ ನೀಡಿಲ್ಲ. ಕೇಂದ್ರ ಸರ್ಕಾರಕ್ಕೆ 2,47,000 ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಆದರೆ ಪರಿಹಾರ ನೀಡಿರುವುದು ಕೇವಲ 1,24,000 ಮನೆಗಳಿಗೆ ಮಾತ್ರ. ಅದೂ ಸಹ ಅಲ್ಪ ಸ್ವಲ್ಪ ಪ್ರಮಾಣದಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬಿಜೆಪಿ ಕರ್ನಾಟಕವನ್ನು ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟಿದೆ: ಸಿದ್ದರಾಮಯ್ಯ

ರಾಜ್ಯ ಸರ್ಕಾರವು ಸುಮಾರು 90,000 ಕೋಟಿಗೂ ಹೆಚ್ಚು ಮೊತ್ತದ ಸಾಲ ಮಾಡುತ್ತಿದೆ. ರಾಜ್ಯದ ಜನ ಮತ್ತು ರಾಜ್ಯದ ಆಸ್ತಿಯನ್ನು ಒತ್ತೆ ಇಟ್ಟು ತರುವ ಸಾಲ ಜನರ ಕಣ್ಣೀರು ಒರೆಸಬೇಕಲ್ಲದೇ ಭ್ರಷ್ಟಾಚಾರಕ್ಕೆ ಬಳಕೆಯಾಗಬಾರದು. ಜನರ ಸಂಕಷ್ಟ ಪರಿಹರಿಸಲು ಬಳಕೆಯಾಗದ ಸಾಲವನ್ನು ರಾಜ್ಯದ ಜನ ಸಹಿಸುವುದಿಲ್ಲ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಪರಿಸ್ಥಿತಿಯನ್ನು ಚರ್ಚಿಸಲು ತಕ್ಷಣ ವಿಧಾನ ಮಂಡಲದ ಅಧಿವೇಶನ ಕರೆಯಬೇಕು, ನಮ್ಮ ಎಲ್ಲ ಶಾಸಕರಿಗೆ ತಮ್ಮ ಕ್ಷೇತ್ರದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಹಾನಿಯನ್ನು ಹೇಳಿಕೊಳ್ಳಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ಜೊತೆಗೆ ’ಉತ್ತರ ಕರ್ನಾಟಕದ ನೆರೆಪರಿಸ್ಥಿತಿಗೆ ಕೇಂದ್ರದ ನೆರವು ಕೇಳುವ ಧೈರ್ಯ ಮುಖ್ಯಮಂತ್ರಿಯವರಿಗೆ ಇರದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಪ್ರಧಾನಿಗಳ ಬಳಿಗೆ ಕರೆದುಕೊಂಡು ಹೋಗಿ. ನಾವು ರಾಜ್ಯದ ಸ್ಥಿತಿಯನ್ನು ವಿವರಿಸಿ ಹಣ ಬಿಡುಗಡೆ ಮಾಡುವಂತೆ ಒತ್ತಡ ಹಾಕುತ್ತೇವೆ’ ಎಂದು ರಾಜ್ಯ ಸರ್ಕಾರದ ಕುರಿತು ವ್ಯಂಗ್ಯವಾಡಿದ್ದಾರೆ.

’ಜನರು ಮೇಲಿಂದ ಮೇಲೆ ಬಂದೊದಗುತ್ತಿರುವ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲಾಗದೆ ಅಸಹಾಯಕರಾಗಿ ಕಂಗೆಟ್ಟು ಕೂತಿದ್ದಾರೆ. ಇಂಥ ಹೊತ್ತಿನಲ್ಲಿ ಸರ್ಕಾರ ಜನರ ಜೊತೆ ನಿಲ್ಲಬೇಕಿತ್ತು. ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ. ಇದು ಜನರಿಂದ ಆಯ್ಕೆಯಾದ ಸರ್ಕಾರದ ಕ್ರೂರ, ದುಷ್ಟ ಸರ್ಕಾರ ಎನ್ನದೆ ಬೇರೆ ದಾರಿಗಳೇ ಇಲ್ಲ’ ಎಂದೂ ಪತ್ರದಲ್ಲಿ ಟೀಕಿಸಿದ್ದಾರೆ.


ಇದನ್ನೂ ಓದಿ: ಜನರಿಗೆ ಪಾಠ ಹೇಳುವ ಮೊದಲು ಮೋದಿ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿದ್ದರಾಮಯ್ಯ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here