Homeಮುಖಪುಟಡಾ.ಎ.ಎಸ್ ಪ್ರಭಾಕರ್‌ರವರಿಗೆ ಕರ್ನಾಟಕ ಜಾನಪದ ಅಕಾಡೆಮಿಯ ಪುಸ್ತಕ ಪ್ರಶಸ್ತಿ

ಡಾ.ಎ.ಎಸ್ ಪ್ರಭಾಕರ್‌ರವರಿಗೆ ಕರ್ನಾಟಕ ಜಾನಪದ ಅಕಾಡೆಮಿಯ ಪುಸ್ತಕ ಪ್ರಶಸ್ತಿ

- Advertisement -
- Advertisement -

ಕರ್ನಾಟಕ ಜಾನಪದ ಅಕಾಡೆಮಿಯು ನೀಡುವ 2021ರ ಸಾಲಿನ ಪುಸ್ತಕ ಪ್ರಶಸ್ತಿಗೆ ಹಂಪಿ ಕನ್ನಡ ವಿವಿಯ ಪ್ರಾಧ್ಯಾಪಕರಾಗಿರುವ ಡಾ.ಎ.ಎಸ್ ಪ್ರಭಾಕರ್‌ರವರ ‘ಚಹರೆಗಳೆಂದರೆ ಗಾಯಗಳೂ ಹೌದು’ ಪುಸ್ತಕ ಆಯ್ಕೆಯಾಗಿದೆ.

ಸೆಪ್ಟಂಬರ್ 29ರ ಶುಕ್ರವಾರದಂದು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಪ್ರಶಸ್ತಿಯು 25,000/- ರೂ ಗೌರವ ಪ್ರಶಸ್ತಿ ಮೊತ್ತ ಮತ್ತು ಫಲಕವನ್ನು ಒಳಗೊಂಡಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಚಹರೆಗಳೆಂದರೆ ಗಾಯಗಳೂ ಹೌದು; ರಚನಾತ್ಮಕ ತಳಮಳಗಳ ದಮನಿತ ಸಮುದಾಯಗಳ ಕಥನ

ಡಾ.ಎಸ್ ಪ್ರಭಾಕರ್‌ರವರು ಹಂಪಿ ಕನ್ನಡ ವಿವಿಯ ಬುಡಕಟ್ಟು ಅಧ್ಯಯನ ವಿಭಾಗದ ಮುಖ್ಯಸ್ಥರಾಗಿದ್ದಾರೆ. ಅವರು ಬರೆದ ‘ಚಹರೆಗಳೆಂದರೆ ಗಾಯಗಳೂ ಹೌದು’ ಕೃತಿಯಲ್ಲಿನ ಸಮುದಾಯ ಅಧ್ಯಯನಗಳ ಕುರಿತ ಕಥನಗಳು ವರ್ತಮಾನದಲ್ಲಿ ನಮ್ಮೊಡನೆ ಬದುಕುತ್ತಿರುವ ಬುಡಕಟ್ಟು, ಆದಿವಾಸಿ ಸಮುದಾಯಗಳ ವೈರುಧ್ಯಗಳಿಂದ ಕೂಡಿದ ಸಮಾಜೋ -ಆರ್ಥಿಕ ಬದುಕಿನ ವಾಸ್ತವಗಳನ್ನು ವಿಶ್ಲೇಷಿಸಲಾಗಿದೆ.

ಈ ಪುಸ್ತಕವನ್ನು ಗೌರಿ ಮೀಡಿಯಾ ಟ್ರಸ್ಟ್ ಪ್ರಕಾಶನ ಪ್ರಕಟಿಸಿದೆ. ಪುಸ್ತಕ ಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: ಡಾ.ಡಿ.ಎಂ.ನಂಜುಂಡಪ್ಪನವರ ವರದಿಯ ವಿಶೇಷ ಅಭಿವೃದ್ಧಿ ಯೋಜನೆ ರದ್ದು; ಆಘಾತಕಾರಿ ನಡೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...