Homeಕರ್ನಾಟಕಓಮಿಕ್ರಾನ್ ಆತಂಕ: ಸಾವಿನ ಮೆರವಣಿಗೆ ಮತ್ತೆ ಬೇಡ- ಎಚ್.ಡಿ.ಕುಮಾರಸ್ವಾಮಿ

ಓಮಿಕ್ರಾನ್ ಆತಂಕ: ಸಾವಿನ ಮೆರವಣಿಗೆ ಮತ್ತೆ ಬೇಡ- ಎಚ್.ಡಿ.ಕುಮಾರಸ್ವಾಮಿ

- Advertisement -
- Advertisement -

ದೇಶದಲ್ಲಿ ಓಮಿಕ್ರಾನ್ ಆತಂಕ ಉಂಟಾಗಿದ್ದು, ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳು ಮುನ್ನೆಚ್ಚರಿಕೆ ನೀಡಿವೆ. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸೋಣ, ಯಾವ ಕಾರಣಕ್ಕೂ ಮತ್ತೊಂದು ಸಾವಿನ ಅಲೆಗೆ ಅವಕಾಶ ಕೊಡುವುದು ಬೇಡ. ಅಂಥ ಸಾವಿನ ಮೆರವಣಿಗೆ ಮತ್ತೆ ಬೇಡ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾವನಾತ್ಮವಾಗಿ ಟ್ವೀಟ್ ಮಾಡಿದ್ದಾರೆ.

“ಕೋವಿಡ್‌ ಮೊದಲ ಅಲೆಯ ಆತಂಕ, ಎರಡನೇ ಅಲೆ ಸೃಷ್ಟಿಸಿದ ನರಕಯಾತನೆ ಎಂಥದ್ದು ಎಂದು ನಾವೆಲ್ಲ ಕಂಡು, ಅನುಭವಿಸಿದ್ದೇವೆ. ಆಸ್ಪತ್ರೆಯಲ್ಲಿ ಬೆಡ್‌ ಸಿಗದೇ, ಬದುಕುಳಿಯಲು ಪ್ರಾಣವಾಯುವೂ ಸಿಗದೇ ಉಸಿರು ಚೆಲ್ಲಿದ ಜೀವಗಳನ್ನು ನೆನೆಸಿಕೊಂಡರೆ ಕಣ್ಣುಗಳ ಕಟ್ಟೆಯೊಡೆಯುತ್ತದೆ. ಅಂಥ ಸಾವಿನ ಮೆರವಣಿಗೆ ಮತ್ತೆ ಬೇಡ. ಯಾರೂ ಎಚ್ಚರ ತಪ್ಪುವುದು ಬೇಡ” ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಓಮಿಕ್ರಾನ್ ಆತಂಕ: ಸೌತ್ ಆಫ್ರಿಕಾದಿಂದ ಬಂದ ವ್ಯಕ್ತಿಗೆ ಸೋಂಕು, 3 ದೇಶಗಳಿಂದ ವಿಮಾನಯಾನ ಬಂದ್ ಮಾಡಿ- ಸಿಎಂ ಬೊಮ್ಮಾಯಿ

“ಕೊರೊನಾ ಹೊಸ ತಳಿ ಓಮಿಕ್ರಾನ್ 30ಕ್ಕೂ ಹೆಚ್ಚು ರೂಪಾಂತರ ಹೊಂದಿರುವ ವರದಿ ಇದೆ. ಭಾರತವೂ ಸೇರಿ ಜಗತ್ತಿನ ವಿವಿಧ ದೇಶಗಳಲ್ಲಿ ಮಾರಕ ಮಾರಿ ಪುನಾ ಅಬ್ಬರಿಸುತ್ತಿದೆ. ಕೇಂದ್ರ ಸರಕಾರ, ಏಮ್ಸ್ ವೈದ್ಯರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಎಲ್ಲೆಡೆ ಕೆನ್ನಾಲಗೆ ಚಾಚಿರುವ ಕೊರೋನಾ ಹೊಸ ತಳಿಯನ್ನೆದುರಿಸಲು ನಮಗೊಂದಿಷ್ಟು ತಾಳ್ಮೆ ಬೇಕಿದೆ” ಎಂದಿದ್ದಾರೆ.

“ಕೊರೊನ ಶಿಷ್ಟಾಚಾರ ಪಾಲಿಸೋಣ. ಮಾಸ್ಕ್, ಸ್ಯಾನಿಟೈಸ್, ದೈಹಿಕ ಅಂತರ ಪಾಲನೆ ಮಹಾಮಾರಿ ನಿಯಂತ್ರಣಕ್ಕಿರುವ ಸರಳಸೂತ್ರಗಳು. ಅಗತ್ಯವಿದ್ದರೆ ಓಡಾಡಿ. ಹೊರಗೆ ಬಂದಾಗ ಮುನ್ನೆಚ್ಚರಿಕೆ ಜತೆಗೆ, ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಯಾವ ಕಾರಣಕ್ಕೂ ಮತ್ತೊಂದು ಸಾವಿನ ಅಲೆಗೆ ಅವಕಾಶ ಕೊಡುವುದು ಬೇಡ. ಇದು ನನ್ನ ವಿನಮ್ರ ಪ್ರಾರ್ಥನೆ” ಎಂದು ಜನಸಾಮಾನ್ಯರಲ್ಲಿ ಮನವಿ ಮಾಡಿದ್ದಾರೆ.

ಇತ್ತ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಓಮಿಕ್ರಾನ್‌ ಬಗ್ಗೆ ರಾಜ್ಯದಲ್ಲಿ ಕಟ್ಟುನಿಟ್ಟನ ಕ್ರಮ ಕೈಗೊಳ್ಳುತ್ತಿರುವುದರ ಕುರಿತು ಮಾಹಿತಿ ನೀಡಿದ್ದಾರೆ. “ಹೊರ ದೇಶದಿಂದ ಆಗಮಿಸುವ ಜನರನ್ನು ತಪಾಸಣೆಗೆ ಒಳಪಡಿಸಿ ನೆಗಟಿವ್ ರಿಪೋರ್ಟ್ ಬಂದರೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ ನೀಡಲಾಗುವುದು. ಇಲ್ಲವಾದಲ್ಲಿ ಕಂಟೈನ್‌ಮೆಂಟ್ ಸ್ಥಳಕ್ಕೆ ಸ್ಥಳಾಂತರಿಸುವುದು. ವಿಶೇಷವಾಗಿ ಓಮಿಕ್ರಾನ್ ಹೊಸ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ದಕ್ಷಿಣ ಆಫ್ರಿಕಾ, ಹಾಂಕಾಂಗ್, ಬೊಟ್ಸ್ವಾನಾ ಈ ಮೂರು ದೇಶಗಳಿಂದ ನಗರಕ್ಕೆ ಪ್ರಯಾಣಿಕರ ಆಗಮನವನ್ನು ಸಂಪೂರ್ಣವಾಗಿ ನಿಷೇದಿಸಬೇಕೆನ್ನುವ ಬೇಡಿಕೆಯನ್ನು ಕೇಂದ್ರ ಸರ್ಕಾರದ ಮುಂದೆ ಇಡಲಾಗಿದೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ರಾಜ್ಯದಲ್ಲಿ ’ಓಮಿಕ್ರಾನ್’ ಆತಂಕ: ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ- ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...