Homeಕರ್ನಾಟಕಚಿತ್ರದುರ್ಗ: ವಿಷಾಹಾರ ಸೇವನೆ ಅನುಮಾನ- ಒಂದೇ ಕುಟುಂಬದ ನಾಲ್ವರು ಸಾವು

ಚಿತ್ರದುರ್ಗ: ವಿಷಾಹಾರ ಸೇವನೆ ಅನುಮಾನ- ಒಂದೇ ಕುಟುಂಬದ ನಾಲ್ವರು ಸಾವು

- Advertisement -
- Advertisement -

ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಹೋಬಳಿಯ ಇಸಾಮುದ್ರ ಗ್ರಾಮದ ಗೊಲ್ಲರಹಟ್ಟಿಗೆ ಹೊಂದಿಕೊಂಡಿರುವ ಲಂಬಾಣಿಹಟ್ಟಿಯಲ್ಲಿ ನಡೆದಿದೆ.

ಸೋಮವಾರ ತಡರಾತ್ರಿ ಘಟನೆ ಸಂಭವಿಸಿದ್ದು, ವಿಷಾಹಾರ ಸೇವನೆ ಮಾಡಿರುವ ಸಂಶಯ ವ್ಯಕ್ತವಾಗಿದೆ. ನಾಲ್ವರ ಸಾವಿನಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.

ಮೃತರನ್ನು ಮನೆಯ ಮುಖ್ಯಸ್ಥ ತಿಪ್ಪನಾಯ್ಕ (45), ಪತ್ನಿ ಸುಧಾಬಾಯಿ (40) ತಾಯಿ ಗುಂಡಿಬಾಯಿ (80), ಮಗಳು ರಮ್ಯಾ (16) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಅಸ್ವಸ್ಥರಾಗಿದ್ದ ಮಗ ರಾಹುಲ್ (19) ರನ್ನು  ದಾವಣಗೆರೆಯ ಎಸ್‌.ಎಸ್‌. ಹೈಟೆಕ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ಒಂದೇ ಕುಟುಂಬದ ಐವರನ್ನು ಕೊಲೆಗೈದು 8 ಅಡಿ ಆಳದ ಗುಂಡಿಯಲ್ಲಿ ಹೂತಿದ್ದ ಕೊಲೆಗಡುಕರು

ಕುಟುಂಬದ ಸದಸ್ಯರೆಲ್ಲರೂ ಸೋಮವಾರ ರಾತ್ರಿ 10 ಗಂಟೆಗೆ ರಾಗಿ ಮುದ್ದೆ ಹಾಗೂ ಬೇಳೆ ತರಕಾರಿ ಸಾರು ಊಟ ಮಾಡಿ ಮಲಗಿದ್ದಾರೆ. ರಾತ್ರಿ ಸುಮಾರು 11 ರಿಂದ 12 ಗಂಟೆ ಸುಮಾರಿಗೆ ಮುದ್ದೆ ತಿಂದವರಲ್ಲಿ ವಾಂತಿ ಕಾಣಿಸಿಕೊಂಡಿದೆ.

ಮನೆಯವರ ನರಳಾಟ ಕೇಳಿ ನೆರೆಹೊರೆಯವರು ತಕ್ಷಣ ಅವರನ್ನು ಭರಮಸಾಗರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಮಾರ್ಗ ಮಧ್ಯದಲ್ಲಿ ಗುಂಡಿಬಾಯಿ ಮತ್ತು ಸುಧಾಬಾಯಿ ಮೃತಪಟ್ಟಿದ್ದಾರೆ.  ತಿಪ್ಪನಾಯ್ಕ ಮತ್ತು ಮಗಳು ರಮ್ಯಾ ದಾವಣಗೆರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುದ್ದೆ ಊಟ ಮಾಡಿದ್ದವರಲ್ಲಿ ಮಾತ್ರ ತೊಂದರೆ ಕಾಣಿಸಿಕೊಂಡು ಮೃತಪಟ್ಟಿದ್ದಾರೆ. ಮತ್ತೊಬ್ಬ ಮಗಳು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ. ಊಟದಲ್ಲಿ ವಿಷ ಬೆರೆತಿರುವ ಶಂಕೆ ವ್ಯಕ್ತವಾಗಿದ್ದು, ಉಳಿದಿದ್ದ ಅಡುಗೆಯನ್ನು ಪೊಲೀಸರು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ ಮಾಡಿದ್ದಾರೆ.

ವಿಷಾಹಾರ ಸೇವನೆ ಸಾವಿಗೆ ಕಾರಣ ಎಂದು ಅನುಮಾನಿಸಲಾಗಿದ್ದು, ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಘಟನೆ ಸಂಬಂಧ  ಭರಮಸಾಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ಕೆನಡಾ: ದ್ವೇಷಪೂರಿತ ದಾಳಿಗೆ ಒಂದೇ ಕುಟುಂಬದ ನಾಲ್ವರು ಬಲಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ತ್ರಿಪುರದಲ್ಲಿ ಬುಡಕಟ್ಟು ಜನರಿಂದ ಮತದಾನ ಬಹಿಷ್ಕಾರ

0
ತ್ರಿಪುರ ಪೂರ್ವ ಲೋಕಸಭಾ ಕ್ಷೇತ್ರದ ಭಾಗವಾದ ಧಲೈ ಜಿಲ್ಲೆಯಲ್ಲಿ ರಸ್ತೆ, ನೀರಿನಂತಹ ಮೂಲಭೂತ ಸೌಕರ್ಯಗಳ ವ್ಯವಸ್ಥೆಯಿಲ್ಲದೆ ಕಂಗೆಟ್ಟ ಬುಡಕಟ್ಟು ಗ್ರಾಮದ 600ಕ್ಕೂ ಹೆಚ್ಚು ಜನರು ಮತದಾನವನ್ನು ಬಹಿಷ್ಕರಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ...