Homeಕರ್ನಾಟಕರಾಜ್ಯದಲ್ಲಿ 4 ವರ್ಷದ ಪದವಿ ರದ್ದು: ಪ್ರಸಕ್ತ ವರ್ಷದಿಂದಲೇ 3 ವರ್ಷದ ಕೋರ್ಸ್ ಮರು ಜಾರಿ

ರಾಜ್ಯದಲ್ಲಿ 4 ವರ್ಷದ ಪದವಿ ರದ್ದು: ಪ್ರಸಕ್ತ ವರ್ಷದಿಂದಲೇ 3 ವರ್ಷದ ಕೋರ್ಸ್ ಮರು ಜಾರಿ

- Advertisement -
- Advertisement -

ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಸಿನಂತೆ 2024-25ನೇ ಸಾಲಿನಿಂದ ನಾಲ್ಕು ವರ್ಷಗಳ ಪದವಿ ರದ್ದು ಮಾಡಿದೆ.

ಈ ಹಿಂದಿನ ಬಿಜೆಪಿ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಅಥವಾ ಹೊಸ ಶಿಕ್ಷಣ ನೀತಿ (ಎನ್‌ಇಪಿ) ಪ್ರಕಾರ ರಾಜ್ಯದಲ್ಲಿ ನಾಲ್ಕು ವರ್ಷಗಳ ಪದವಿ ಜಾರಿಗೊಳಿಸಿತ್ತು. ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಎನ್‌ಇಪಿ ಬದಲು ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಜಾರಿಗೊಳಿಸಲು ಆಯೋಗವನ್ನು ರಚಿಸಲಾಗಿದೆ. ಈ ಆಯೋಗದ ಶಿಫಾರಸಿನಂತೆ ನಾಲ್ಕು ವರ್ಷಗಳ ಪದವಿ ರದ್ದುಗೊಳಿಸಿ, ಈ ಹಿಂದಿನಂತೆ ಮೂರು ವರ್ಷಗಳ ಪದವಿ ಮುಂದುವರೆಸಲು ಆದೇಶಿಸಲಾಗಿದೆ.

ರಾಜ್ಯ ಶಿಕ್ಷಣ ನೀತಿ ಆಯೋಗದ ಮುಖ್ಯಸ್ಥ ಪ್ರೊ.ಸುಖದೇವ್ ಥೋರಟ್ ಅವರು ರಾಜ್ಯದ ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳು, ಡೀನ್‌ಗಳು, ಕಾಲೇಜುಗಳ ಪ್ರಾಂಶುಪಾಲರು ಮತ್ತು ಶಿಕ್ಷಣ ತಜ್ಞರ ಜೊತೆ ಮೂರು ತಿಂಗಳುಗಳ ಕಾಲ ನಿರಂತರ ಸಭೆ ನಡೆಸಿ, ಸಮಾಲೋಚಿಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಅದರ ಆಧಾರದ ಮೇಲೆ ನಾಲ್ಕು ವರ್ಷಗಳ ಪದವಿ ರದ್ದುಗೊಳಿಸಿ ಮೂರು ವರ್ಷಗಳ ಪದವಿ ಜಾರಿಗೊಳಿಸಲು ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

ನಾಲ್ಕು ವರ್ಷಗಳ ಆನರ್ಸ್ ಪದವಿ ಪಡೆಯಲು ಅವಕಾಶ : 

ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಜಾರಿಯಲ್ಲಿದೆ. ಈ ಅವಧಿಯಲ್ಲಿ ಪದವಿ ತರಗತಿಗಳಿಗೆ ಪ್ರವೇಶಾತಿ ಪಡೆದವರು ಮೂರು ವರ್ಷಗಳ ಪದವಿ ಪೂರ್ಣಗೊಳಿಸಿದ ಬಳಿಕ ಇಚ್ಚಿಸಿದಲ್ಲಿ ನಾಲ್ಕನೇ ವರ್ಷದ ಆನರ್ಸ್‌ ಪದವಿಗೆ ಪ್ರವೇಶ ಪಡೆಯಬಹುದು. ವಿದ್ಯಾರ್ಥಿಗಳ ಬೇಡಿಕೆ, ಕಾಲೇಜುಗಳ ಮೂಲಸೌಕರ್ಯಗಳನ್ನು ಪರಿಗಣಿಸಿ ಅವರಿಗೆ ಸೂಕ್ತ ವ್ಯವಸ್ಥೆ ಮಾಡಿಕೊಡುವಂತೆ ಶಿಕ್ಷಣ ಇಲಾಖೆ ಆದೇಶದಲ್ಲಿ ಸೂಚಿಸಿದೆ. ವಿದ್ಯಾರ್ಥಿಗಳು ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಕಾಲೇಜುಗಳಲ್ಲಿ ಕೋರ್ಸ್ ಲಭ್ಯವಿಲ್ಲದಿದ್ದರೆ ಸಮೀಪದ ಕಾಲೇಜುಗಳಲ್ಲಿ ಪ್ರವೇಶ ನೀಡಬೇಕು ಎಂದು ಆದೇಶಿಸಿದೆ.

2021-22ನೇ ಸಾಲಿನಿಂದ 2023-24ರವರೆಗೆ ಪದವಿ ತರಗತಿಗಳಿಗೆ ಪ್ರವೇಶಾತಿ ಪಡೆದವರು ನಾಲ್ಕು ವರ್ಷಗಳ ಆನರ್ಸ್ ಪದವಿ ಪಡೆದರೆ, ಅವರು ಒಂದು ವರ್ಷದ ಏಕೀಕೃತ ಸ್ನಾತಕೋತ್ತರ ಪದವಿ ಮಾಡಬಹುದು. ಮೂರು ವರ್ಷದ ಪದವಿ ಮುಗಿಸಿ ನಿರ್ಗಮಿಸಲು ಬಯಸಿದರೆ, ಈ ಹಿಂದಿನಂತೆ ಪ್ರತ್ಯೇಕವಾಗಿ ಎರಡು ವರ್ಷಗಳ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯಬಹುದು.

ಕಾಲೇಜು ಆರಂಭ ದಿನಾಂಕ ಸಮೀಪಿಸಿದರೂ ಪದವಿ ವಿಚಾರದಲ್ಲಿ ನಾಲ್ಕು ವರ್ಷವೋ ಮೂರು ವರ್ಷವೋ ಎಂಬ ಗೊಂದಲ ಇತ್ತು. ಇದನ್ನು ಶೀಘ್ರ ಪರಿಹರಿಸುವಂತೆ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳ ಪೋಷಕರು ಸರ್ಕಾರವನ್ನು ಆಗ್ರಹಿಸಿದ್ದರು. ಹಾಗಾಗಿ, ಎಸ್‌ಇಪಿ ಆಯೋಗದ ಮಧ್ಯಂತರ ಶಿಫಾರಸು ಅನುಸರಿಸಿ ಶಿಕ್ಷಣ ಇಲಾಖೆ ನಾಲ್ಕು ವರ್ಷಗಳ ಪದವಿ ರದ್ದುಗೊಳಿಸಿ, ಈ ಹಿಂದಿನಂತೆ ಮೂರು ವರ್ಷಗಳ ಪದವಿ ಮುಂದುವರೆಸಲು ಸೂಚಿಸಿದೆ. ಇದರಿಂದ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ನಿರಾಳರಾಗಿದ್ದಾರೆ.

ಇದನ್ನೂ ಓದಿ : ಮಹಿಳೆಯ ಅಪಹರಣ ಪ್ರಕರಣ: ಹೆಚ್.ಡಿ ರೇವಣ್ಣಗೆ ಮೇ 14ರವರೆಗೆ ನ್ಯಾಯಾಂಗ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಇವಿಎಂಗೆ ಹಾನಿ ಪ್ರಕರಣ: ಜೆಡಿಎಸ್ ಮುಖಂಡನ ವಿರುದ್ದದ ಪ್ರಕರಣ ರದ್ದತಿ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ...

0
ವಿದ್ಯುನ್ಮಾನ ಮತಯಂತ್ರ (ಇವಿಎಂ) ಗಳಿಗೆ ಹಾನಿ ಮಾಡಿ ಆರೋಪದ ಮೇಲೆ ಜೆಡಿಎಸ್‌ ಮುಖಂಡ ಬಿ ಬಿ ಪಾಟೀಲ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ದೂರು ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ...