Homeಕರ್ನಾಟಕಟಿಪ್ಪು ಸುಲ್ತಾನ್ ಸೇರಿದಂತೆ ಮಹತ್ವದ ಪಠ್ಯಗಳನ್ನು ಕೈಬಿಟ್ಟ ರಾಜ್ಯ ಸರ್ಕಾರ

ಟಿಪ್ಪು ಸುಲ್ತಾನ್ ಸೇರಿದಂತೆ ಮಹತ್ವದ ಪಠ್ಯಗಳನ್ನು ಕೈಬಿಟ್ಟ ರಾಜ್ಯ ಸರ್ಕಾರ

ಬ್ರಿಟೀಷರ ವಿರುದ್ಧ ದಿಟ್ಟ ಹೋರಾಟ ನಡೆಸಿದ್ದ ರಾಣಿ ಅಬ್ಬಕ್ಕ ಸೇರಿದಂತೆ ಕನ್ನಡದ ರಾಜಮನೆತನಗಳಾದ ಶಾತವಾಹನರು, ಕದಂಬರು ಮತ್ತು ಗಂಗರ ಸಾಹಿತ್ಯ, ವಿಜ್ಞಾನ, ಕಲೆ ಮತ್ತು ವಾಸ್ತುಶಿಲ್ಪ, ರಜಪೂತರ ಕೊಡುಗೆಗಳು, ಕ್ರಿಸ್ತನ ಜೀವನ, ಧರ್ಮಬೋಧನೆ ಮುಂತಾದ ಅಧ್ಯಾಯಗಳನ್ನು ಸಹ ಕೈಬಿಡಲಾಗಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ಶಾಲಾ ಅವಧಿ ಕಡಿತಗೊಂಡಿರುವ ನೆಪ ಇಟ್ಟುಕೊಂಡು ಟಿಪ್ಪು ಸುಲ್ತಾನ್ ಸೇರಿದಂತೆ ಹಲವು ಮಹತ್ವದ ಪಠ್ಯಗಳನ್ನು ಕೈಬಿಡಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಕುರಿತು ಡಿಎಸ್‌ಇಆರ್‌ಟಿ ತನ್ನ ವೆಬ್‌ ಸೈಟ್‌ನಲ್ಲಿ ಕೈಬಿಡಲಾದ ಪಠ್ಯಗಳನ್ನು ಉಲ್ಲೇಖಿಸಿದೆ. ಏಳನೇ ತರಗತಿಯ ಸಮಾಜ ವಿಜ್ಞಾನ ವಿಷಯದಲ್ಲಿದ್ದ ಮೈಸೂರು ಸಾಮ್ರಾಜ್ಯದ ಐತಿಹಾಸಿಕ ಚರಿತ್ರೆಯ ಭಾಗದಿಂದ ಟಿಪ್ಪು ಸುಲ್ತಾನ್ ಆಧ್ಯಾಯವನ್ನು ಕಿತ್ತು ಹಾಕಲಾಗಿದೆ.

ಆರನೇ ತರಗತಿ ಮತ್ತು 10ನೇ ತರಗತಿ ಪಠ್ಯಗಳಲ್ಲಿ ಟಿಪ್ಪು ಸುಲ್ತಾನ್ ಕುರಿತ ಪಠ್ಯಗಳನ್ನು ಉಳಿಸಿಕೊಂಡಿದ್ದೇವೆ. ಹಾಗಾಗಿ ಪುನಾರಾವರ್ತನೆ ಆಗಬಾರದೆಂದು 7ನೇ ತರಗತಿಯ ಪಠ್ಯದಿಂದ ಕೈಬಿಡಲಾಗಿದೆ ಎಂದು ಅಧಿಕಾರಿಗಳು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಬ್ರಿಟೀಷರ ವಿರುದ್ಧ ದಿಟ್ಟ ಹೋರಾಟ ನಡೆಸಿದ್ದ ರಾಣಿ ಅಬ್ಬಕ್ಕ ಸೇರಿದಂತೆ ಕನ್ನಡದ ರಾಜಮನೆತನಗಳಾದ ಶಾತವಾಹನರು, ಕದಂಬರು ಮತ್ತು ಗಂಗರ ಸಾಹಿತ್ಯ, ವಿಜ್ಞಾನ, ಕಲೆ ಮತ್ತು ವಾಸ್ತುಶಿಲ್ಪ, ರಜಪೂತರ ಕೊಡುಗೆಗಳು, ಕ್ರಿಸ್ತನ ಜೀವನ, ಧರ್ಮಬೋಧನೆ ಮುಂತಾದ ಅಧ್ಯಾಯಗಳನ್ನು ಸಹ ಕೈಬಿಡಲಾಗಿದೆ.

ಯೇಸುಕ್ರಿಸ್ತ ಮತ್ತು ಪ್ರವಾದಿ ಮಹಮ್ಮದ್ ಅವರ ಬೋಧನೆಗಳ ಸಂಪೂರ್ಣ ಅಧ್ಯಾಯವನ್ನು ಆರನೇ ತರಗತಿಯಿಂದ ಕೈಬಿಡಲಾಗಿದೆ. ಆದರೆ ವಿದ್ಯಾರ್ಥಿಗಳು ಈ ಧಾರ್ಮಿಕ ವ್ಯಕ್ತಿಗಳು ಮತ್ತು ಅವರ ಬೋಧನೆಗಳನ್ನು ಒಂಬತ್ತನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಾರೆ. ಬೌದ್ಧಧರ್ಮ ಮತ್ತು ಜೈನ ಧರ್ಮವನ್ನು ಕಲಿಸಲು ನಿಗದಿಪಡಿಸಿದ ಸಮಯವನ್ನು ಸಹ ಶೇಕಡಾ 50 ರಷ್ಟು ಕಡಿಮೆ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ.

2020-21ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯನ್ನು ಅಂದಾಜು ಮಾಡಿ, ಪಠ್ಯಕ್ರಮಗಳನ್ನು ಪರಿಷ್ಕರಣೆ ಅಥವಾ ಮೊಟಕು ಮಾಡಲಾಗಿದೆ. ಸೆಪ್ಟೆಂಬರ್ 1 ರಿಂದ 120 ದಿನಗಳಲ್ಲಿಅಗತ್ಯವಾದ ಪಠ್ಯಗಳನ್ನು ಮಾತ್ರ ಕಲಿಸಲು 6 ರಿಂದ 10 ನೇ ತರಗತಿಗಳ ಸಮಾಜ ವಿಜ್ಞಾನ ಶಿಕ್ಷಕರಿಗೆ ಒಂದು ಕೈಪಿಡಿ ನೀಡಲಾಗಿದೆ.

ಇನ್ನೊಂದೆಡೆ ಸಿಬಿಎಸ್‌ಇ ಪೌರತ್ವ, ಜಾತ್ಯಾತೀತತೆ, ಒಕ್ಕೂಟ ಸರ್ಕಾರಕ್ಕೆ ಸಂಬಂಧಿಸಿದ ಪಠ್ಯಗಳನ್ನು ಕೈಬಿಡುವುದಾಗಿ ಕಳೆದ ತಿಂಗಳು ತಿಳಿಸಿತ್ತು. ಉತ್ತರ ಪ್ರದೇಶ ಸರ್ಕಾರವು ನೆಹರೂ ಮತ್ತು ಲಾಲ್‌ ಬಹದ್ದೂರ್ ಶಾಸ್ತ್ರಿಯವರಿಗೆ ಸಂಬಂಧಿಸಿದ ಪಠ್ಯಗಳನ್ನು ಕೈಬಿಟ್ಟಿದೆ ಎಂದು ಅಲ್ಲಿನ ಕಾಂಗ್ರೆಸ್ ಪಕ್ಷ ಆರೋಪಿಸಿದೆ.


ಇದನ್ನೂ ಓದಿ; ನೆಹರೂ-ಶಾಸ್ತ್ರಿಗೆ ಸಂಬಂಧಿಸಿದ ವಿಷಯಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...