Homeಕರ್ನಾಟಕಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

ಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

- Advertisement -
- Advertisement -

ಒಂದರಿಂದ ಹತ್ತನೇ ತರಗತಿವರೆಗಿನ ಪಠ್ಯಪುಸ್ತಕಗಳ ಪರಿಶೀಲನೆಗೆ ನೇಮಿಸಿದ್ದ ಸಮಿತಿಯು ಯಾವುದೇ ಅಧಿಕೃತ ಆದೇಶವಿಲ್ಲದೆ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿರುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿರುವ ರಾಜ್ಯ ಸರ್ಕಾರ, ಪಠ್ಯಪುಸ್ತಕದಲ್ಲಿ ಕಂಡು ಬಂದಿರುವ ಸಾಲು ಸಾಲು ದೋಷಗಳ ಪೈಕಿ ಎಂಟನ್ನು ಮಾತ್ರ ತಿದ್ದಲು ಮುಂದಾಗಿದೆ.

ಪ್ರಾಥಮಿಕ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಯವರು ಆದೇಶ ನೀಡಿದ್ದು, ಪಠ್ಯದಲ್ಲಿನ ಎಂಟು ತಪ್ಪುಗಳನ್ನು ಉಲ್ಲೇಖಿಸಿ ತಿದ್ದುಪಡಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

ತಿದ್ದುಪಡಿಯಲ್ಲಿ ಏನೇನು ಸೇರಿಸಲಾಗುತ್ತಿದೆ?

1) 9ನೇ ತರಗತಿ ಸಮಾಜ ವಿಜ್ಞಾನ ಭಾಗ-01ರ ‘ನಮ್ಮ ಸಂವಿಧಾನ’ ಎಂಬ ಪಾಠದಲ್ಲಿ ಸಂವಿಧಾನದ ಕರಡು ರಚನೆ ಸಮಿತಿ ಬಗ್ಗೆ ಉಲ್ಲೇಖವಿರುತ್ತದೆ. ಪರಿಷ್ಕೃತ ಪಠ್ಯದಲ್ಲಿ, “ಇವರು ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗಿದೆ” ಎಂಬ ವಾಕ್ಯವು ಇಲ್ಲವಾಗಿದ್ದು, “ಸಂವಿಧಾನದ ಶಿಲ್ಪಿ” ಎಂಬುದರ ಪುನರ್ ಸೇರ್ಪಡೆ.

2) 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-01ರ ಭಕ್ತಿ ಪಂಥ ಹಾಗೂ ಸೂಫಿ ಸಂತರು ಪಾಠವನ್ನು ಪೂರ್ಣವಾಗಿ ಕೈಬಿಡಲಾಗಿದೆ. 9ನೇ ತರಗತಿಯ ಸಮಾಜ ವಿಜ್ಞಾನ ವಿಷಯದ ಭಾಗ-2 ರಲ್ಲಿ ಭಕ್ತಿಪಂಥ ಎಂಬ ಅಧ್ಯಾಯದಲ್ಲಿ ಪುರಂದರದಾಸರು, ಕನಕದಾಸರ ಕುರಿತು ವಿಷಯಗಳು ಸಂಕ್ಷಿಪ್ತಗೊಳಿಸಲಾಗಿದೆ. ಆದ್ದರಿಂದ, 2021-22ನೇ ಸಾಲಿನ 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-01ರ ‘ಭಕ್ತಿ ಪಂಥ ಹಾಗೂ ಸೂಫಿಸಂತರು’ ಸಂಪೂರ್ಣ ಪಾಠ ಸೇರ್ಪಡೆ.

3) 7ನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದ ಪುಟ ಸಂಖ್ಯೆ 147ರಲ್ಲಿ ‘ಗೊಂಬೆ ಕಲಿಸುವ ನೀತಿ’ ಪದ್ಯದ ಕೃತಿಕಾರರ ಹೆಸರು ಡಾ.ಆರ್.ಎನ್‌.ಜಯಗೋಪಾಲ್ ಎಂದು ತಪ್ಪಾಗಿ ಮುದ್ರಣಗೊಂಡಿದ್ದು, ಮೂಲ ಕೃತಿಕಾರರಾದ ಚಿ.ಉದಯಶಂಕರ್ ರವರ ಕವಿ ಪರಿಚಯ ಸೇರ್ಪಡೆ.

4) 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿನ ‘ನಮ್ಮ ಹೆಮ್ಮೆಯ ರಾಜ್ಯ ಕರ್ನಾಟಕ’ ಪಾಠದಲ್ಲಿ ಸಿದ್ದಗಂಗಾ ಮಠ ಹಾಗೂ ಆದಿಚುಂಚನಗಿರಿ ಮಠದ ಕುರಿತಾದ ಸೇವೆಯ ಸಾಲುಗಳು ಸೇರ್ಪಡೆ.

5) 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-1 ರ ಮೈಸೂರು ಮತ್ತು ಇತರ ಸಂಸ್ಥಾನಗಳು ಎಂಬ ಪಾಠದಲ್ಲಿದ್ದ ಸುರಪುರ ನಾಯಕರ ಕುರಿತಾದ ವಿವರಗಳು ಸೇರ್ಪಡೆ.

6) 9ನೇ ತರಗತಿಯ ಸಮಾಜ ವಿಜ್ಞಾನ ಭಾಗ-1 ರ ಪಠ್ಯಪುಸ್ತಕದಲ್ಲಿ ಭಾರತದ ಮತ ಪರಿವರ್ತಕರು ಎಂಬ ಅಧ್ಯಾಯದಲ್ಲಿ ಬಸವಣ್ಣನವರ ಕುರಿತಾದ ವಿಷಯಾಂಶ ಸೇರ್ಪಡೆ.

7) 7ನೇ ತರಗತಿ ಸಮಾಜ ವಿಜ್ಞಾನ ಭಾಗ-2 ರ ಪಠ್ಯಪುಸ್ತಕದ ‘ಕರ್ನಾಟಕ ರಾಜ್ಯ ಏಕೀಕರಣ ಹಾಗೂ ಗಡಿವಿವಾದಗಳು’ ಎಂಬ ಪಾಠದಲ್ಲಿ ರಾಷ್ಟ್ರಕವಿ ಕುವೆಂಪು ರವರ ಹಾಗೂ ಹುಯಿಲಗೋಳ ನಾರಾಯಣರಾವ್ ರವರ ಭಾವಚಿತ್ರಗಳನ್ನು ಅಳವಡಿಸುವುದು.

8) 4ನೇ ತರಗತಿಯ ಪರಿಸರ ಅಧ್ಯಯನ ‘ಪ್ರತಿಯೊಬ್ಬರು ವಿಶಿಷ್ಟ’ ಎಂಬ ಪಾಠದಲ್ಲಿ “ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿದ ಕುವೆಂಪು ರವರಿಗೆ ಚಿಕ್ಕಂದಿನಿಂದಲೂ ಕಥೆ, ಕವನ, ಪುಸ್ತಕ ಓದುವ, ಬರೆಯುವ ಅಭ್ಯಾಸ ಇತ್ತು” ಎಂಬ ವಾಕ್ಯದ ನಂತರ “ಅನೇಕರ ಪ್ರೋತ್ಸಾಹದಿಂದ ಇವರು ಮುಂದೆ ಪ್ರಖ್ಯಾತ ಕವಿ ಎನಿಸಿಕೊಂಡರು” ಎಂಬ ಸಾಲನ್ನು ಕೈಬಿಡುವುದು.

(ಮುಂದಿನ ಅಂಶಗಳು ಪಠ್ಯ ತಿದ್ದುಪಡಿಗೆ ಸಂಬಂಧಿಸಿದಂತೆ ಸರ್ಕಾರದ ನಡಾವಳಿಗಳನ್ನು ಸೂಚಿಸುತ್ತವೆ.)

9) ಸಾಮಾನ್ಯವಾಗಿ ಪಠ್ಯಪುಸ್ತಕಗಳ ರಚನೆ, ಪರಿಷ್ಕರಣೆಗಳಾದಾಗ ಅಗತ್ಯವಾದ ತಿದ್ದುಪಡಿಗಳನ್ನು ತಿದ್ದೋಲೆ ರೂಪದಲ್ಲಿ ನೀಡುವುದು ಶಿಕ್ಷಣ ಇಲಾಖೆಯಲ್ಲಿ ಈ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪ್ರಕ್ರಿಯೆಯಾಗಿದೆ.

10) ಅಗತ್ಯವಿರುವ ತಿದ್ದೋಲೆ ಪ್ರತಿಗಳನ್ನು ಮುದ್ರಿಸಲು ಕರ್ನಾಟಕ ಪಠ್ಯಪುಸ್ತಕ ಸಂಘದಿಂದ ಈಗಾಗಲೇ ಪಠ್ಯಪುಸ್ತಕಗಳ ಮುದ್ರಣಕ್ಕೆ ಕಾರ್ಯಾದೇಶ ಪಡೆದಿರುವ ಎಲ್-೧ ದರ ನಮೂದಿಸಿರುವ ಮುದ್ರಕರಿಂದ ಮುದ್ರಿಸಿ, ಕರ್ನಾಟಕ ಪಠ್ಯಪುಸ್ತಕ ಸಂಘದಲ್ಲಿ ಲಭ್ಯವಿರುವ ಅನುದಾನದಿಂದ ಭರಿಸಿ, ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳಿಗೆ ಹಾಗೂ ಅನುದಾನರಹಿತ ಶಾಲೆಗಳಿಗೆ ಉಚಿತವಾಗಿ ತಲಾ ಒಂದು ಪ್ರತಿಯಂತೆ ವಿತರಿಸುವುದು.

11)ತಿದ್ದೋಲೆಯ ವಿಷಯಾಂಶಗಳನ್ನು ಕರ್ನಾಟಕ ಪಠ್ಯಪುಸ್ತಕ ಸಂಘದ ಜಾಲತಾಣದಲ್ಲಿ ಪ್ರಕಟಿಸುವುದು ಮತ್ತು ಮೂಲ ಪಠ್ಯಪುಸ್ತಕಗಳ ಸಾಫ್ಟ್ ಪ್ರತಿಯಲ್ಲಿ ಅಳವಡಿಸುವುದು.

‘ಪಠ್ಯಪುಸ್ತಕ ವಾಪಸ್ ಪಡೆಯುವುದೇ ಸರಿಯಾದ ಕ್ರಮ’

ಪಠ್ಯಪುಸ್ತಕದಲ್ಲಿ ಆಗಿರುವ ತಪ್ಪುಗಳ ಸಂಬಂಧ 62 ಪುಟಗಳ ಸಂಶೋಧನಾ ವರದಿ ಸಿದ್ಧಪಡಿಸಿರುವ ಸಂಶೋಧಕ, ಸಾಮಾಜಿಕ ಕಾರ್ಯರ್ತ ಹರ್ಷಕುಮಾರ್‌ ಕುಗ್ವೆಯವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಸಂಪೂರ್ಣ ಪಠ್ಯಪುಸ್ತಕವನ್ನು ವಾಪಸ್‌ ಪಡೆದು ಹಳೆಯ ಪಠ್ಯಪುಸ್ತಕಗಳನ್ನೇ ಮಕ್ಕಳಿಗೆ ನೀಡುವುದು ಸರಿಯಾದ ಕ್ರಮ” ಎಂದು ಪ್ರತಿಪಾದಿಸಿದರು.

“ಇಷ್ಟು ದಿನ ಶಿಕ್ಷಣ ಸಚಿವರು ತಾವು ಮಾಡಿದ್ದೆಲ್ಲ ಸರಿ ಇದೆ ಎಂದು ಮಾತನಾಡುತ್ತಿದ್ದರು. ಆದರೆ ತಪ್ಪುಗಳಿರುವುದನ್ನು ಸರ್ಕಾರ ತನ್ನ ಆದೇಶದಲ್ಲಿ ಅಧಿಕೃತವಾಗಿ ಒಪ್ಪಿಕೊಂಡಿದೆ. ದುರಾದೃಷ್ಟವಶಾತ್‌ ಸರ್ಕಾರ ಕೇವಲ ಎಂಟು ಅಂಶಗಳನ್ನು ಮಾತ್ರ ಪ್ರಸ್ತಾಪಿಸಿ ನಿಜವಾದ ಸಮಸ್ಯೆಯನ್ನು ಮರೆಮಾಚಿದೆ. ಕರ್ನಾಟಕದ ಜನರ ಕಣ್ಣಿಗೆ ಮಣ್ಣೆರೆಚುವ ತಂತ್ರವಿದು. ನೂರಾರು ಗಂಭೀರ ಲೋಪಗಳನ್ನು ಗುರುತಿಸಿ ವರದಿ ಸಿದ್ಧಪಡಿಸಿದ್ದೇವೆ. ಪ್ರತಿ ಪಠ್ಯಪುಸ್ತಕದಲ್ಲೂ ಈ ತಪ್ಪುಗಳನ್ನು ಕಾಣಬಹುದು. ಅದ್ಯಾವುದರ ಬಗ್ಗೆಯೂ ಮಾತನಾಡದೆ ಕೇವಲ ಒಂದೆರಡು ತಪ್ಪುಗಳನ್ನು ಪ್ರಸ್ತಾಪಿಸಿ ಜನರನ್ನು ಯಾಮಾರಿಸಲಾಗುತ್ತಿದೆ. ತಮ್ಮ ಅಜೆಂಡಾವನ್ನೇ ಮುಂದುವರಿಸಲು ಹೊರಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಪರಿಷ್ಕರಣೆಗೆ ಸರ್ಕಾರ ಆದೇಶ ಮಾಡಿರಲಿಲ್ಲ ಎಂಬುದು ಇಂದಿನ ಆದೇಶದಲ್ಲಿ ಸ್ಪಷ್ಟವಾಗಿದೆ. ಇದು ಪರಿಶೀಲನೆಗೆ ನೇಮಿಸಿದ್ದ ಸಮಿತಿಯಾಗಿತ್ತೇ ಹೊರತು ಪರಿಷ್ಕರಣೆಗಲ್ಲ ಎಂಬುದನ್ನು ಸರ್ಕಾರ ಪರೋಕ್ಷವಾಗಿ ಒಪ್ಪಿಕೊಂಡಿದೆ. ಸರ್ಕಾರದ ಆದೇಶವಿಲ್ಲದೆ ಪರಿಷ್ಕರಣೆ ಮಾಡಿರುವುದು ಅಸಿಂಧುವಾಗುತ್ತದೆ. ಸಂಪೂರ್ಣವಾಗಿ ಪರಿಷ್ಕರಣೆಯನ್ನು ಕೈಬಿಟ್ಟು, ಈ ನಷ್ಟಕ್ಕೆ ಕಾರಣವಾದವರಿಂದಲೇ ಹಣ ವಸೂಲಿ ಮಾಡಬೇಕು” ಎಂದು ಆಗ್ರಹಿಸಿದರು.

ಶಿಕ್ಷಣ ತಜ್ಞರಾದ ಡಾ.ವಿ.ಪಿ.ನಿರಂಜನಾರಾಧ್ಯ ಅವರು ಪ್ರತಿಕ್ರಿಯೆ ನೀಡಿ, “ಸರ್ಕಾರದ ನಿರ್ಧಾರವನ್ನು ಒಪ್ಪಲು ಸಾಧ್ಯವೇ ಇಲ್ಲ. ಅಲ್ಲಿ ಇಲ್ಲಿ ಒಂಚೂರು ಬದಲಾಯಿಸುವ ಕೆಲಸ ಇದಲ್ಲ. ಇಡೀ ಪ್ರಕ್ರಿಯೆಯೇ ಅಸಾಂವಿಧಾನಿಕ, ಅಪ್ರಜಾಸತ್ತಾತ್ಮಕ ಆಗಿರುವುದರಿಂದ ಇಲ್ಲೊಂದು ಇಲ್ಲೊಂದು ವಾಕ್ಯ ಬದಲಿಸುತ್ತೇವೆ ಎನ್ನುವುದರಲ್ಲಿ ಅರ್ಥವೇ ಇಲ್ಲ. ಇಡೀ ಪ್ರಕ್ರಿಯೆಯನ್ನೇ ರದ್ದುಪಡಿಸಬೇಕು” ಎಂದು ಆಗ್ರಹಿಸಿದರು.

ಪಠ್ಯಪುಸ್ತಕ ಎಡವಟ್ಟಿಗೆ ಸಂಬಂಧಿಸಿದ ಕೆಲವು ವರದಿಗಳು (ಲಿಂಕ್ ಕ್ಲಿಕ್ ಮಾಡಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...