Homeಮುಖಪುಟಪುನೀತ್ ರಾಜ್‌ಕುಮಾರ್‌ರವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಬೊಮ್ಮಾಯಿ

ಪುನೀತ್ ರಾಜ್‌ಕುಮಾರ್‌ರವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಬೊಮ್ಮಾಯಿ

ನಟ ಪುನೀತ್ ರಾಜ್‌ಕುಮಾರ್‌ರವರಿಗೆ ಮರಣೋತ್ತರವಾಗಿ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲು ಮುರುಘಾ ಮಠ ನಿರ್ಧರಿಸಿದೆ.

- Advertisement -
- Advertisement -

ದಿವಂಗತ ಪುನೀತ್ ರಾಜ್ ಕುಮಾರ್‌ರವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇತ್ತಿಚೆಗೆ ನಮ್ಮನ್ನಗಲಿದ ನಾಡಿನ ಪ್ರತಿಭಾನ್ವಿತ ನಟ ಪುನೀತ್ ರಾಜ್‌ಕುಮಾರ್‌ ಅವರಿಗೆ ಮರಣೋತ್ತರವಾಗಿ ಪ್ರತಿಷ್ಠಿತ ಕರ್ನಾಟಕ ರತ್ನ ಗೌರವ ನೀಡಬೇಕು ಎಂಬ ಅಭಿಮಾನಿಗಳ ಕೂಗಿಗೆ ರಾಜ್ಯ ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸಿದೆ.

’ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂಬ ಬೇಡಿಕೆ ಚಿತ್ರರಂಗ ಮತ್ತು ಅಭಿಮಾನಿಗಳಿಂದ ಕೇಳಿ ಬಂದಿದೆ. ತಕ್ಷಣಕ್ಕೆ ಈ ಬೇಡಿಕರ ಬಗ್ಗೆ ಏನು ಹೇಳಲಾಗದು. ಈ ಬಗ್ಗೆ ಪ್ರಮುಖರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ಈ ಹಿಂದೆ ಬೊಮ್ಮಾಯಿಯವರು ಹೇಳಿದ್ದರು.

ನಟ ಪುನೀತ್ ರಾಜ್‌ಕುಮಾರ್‌ರವರಿಗೆ ಮರಣೋತ್ತರವಾಗಿ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲು ಮುರುಘಾ ಮಠ ನಿರ್ಧರಿಸಿದೆ. ಮುಂದಿನ ವರ್ಷ ಬಸವ ಜಯಂತಿಯಂದು ಪುನೀತ್ ರಾಜ್‌ಕುಮಾರ್ ಕುಟುಂಬಕ್ಕೆ ಪ್ರಶಸ್ತಿ ಪ್ರದಾನ ಮಾಡುಲಾಗುತ್ತದೆ ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.

ಅಭಿಮಾನಿಗಳಿಂದ ಪ್ರೀತಿಯಿಂದ ಅಪ್ಪು ಎಂದು ಕರೆಸಿಕೊಳ್ಳುವ ಪವರ್‌ ಸ್ಟಾರ್ ಪುನೀತ್ ರಾಜಕುಮಾರ್ ಕನ್ನಡ ಚಿತ್ರರಂಗದ ಪ್ರಮುಖ ನಾಯಕನಟ. ಪುನೀತ್ ರಾಜ್‌ಕುಮಾರ್‌ ನಟರಾಗಿಯಷ್ಟೇ ಅಲ್ಲದೆ ಹಿನ್ನೆಲೆ ಗಾಯಕರಾಗಿ, ನಿರ್ಮಾಪಕರಾಗಿಯೂ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದಾರೆ.

1976 ರಲ್ಲಿ ತೆರೆಕಂಡ ಡಾ.ರಾಜ್‌ಕುಮಾರ್‌ ಅಭಿನಯದ `ಪ್ರೇಮದ ಕಾಣಿಕೆ’ ಚಿತ್ರದ ಮೂಲಕ ತೆರೆಯ ಮೇಲೆ ಕಾಣಿಸಿಕೊಂಡಿದ್ದರು. ಆಗ ಪುನೀತ್ ಆರು ತಿಂಗಳು ಮಗು. ನಂತರ ವಸಂತ ಗೀತ (1980)ಮೂಲಕ ಬಾಲ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಪುನೀತ್‌ ರಾಜ್‌ಕುಮಾರ್, ಸುಮಾರು ನಾಲ್ಕು ದಶಕಗಳ ತಮ್ಮ ಸಿನಿಜೀವನದಲ್ಲಿ ಬಾಲ ಕಲಾವಿದನಾಗಿ 14 ಚಿತ್ರಗಳು ಮತ್ತು ನಾಯಕ ನಟನಾಗಿ 28 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿರುವ ಅಣ್ಣಾವ್ರ ಕುಟುಂಬದ ಕುಡಿ ಪುನೀತ್ ರಾಜ್‌ಕುಮಾರ್. 1975 ರ ಮಾರ್ಚ್ 17 ರಂದು ವರನಟ ಡಾ.ರಾಜಕುಮಾರ್ ಮತ್ತು ಪಾರ್ವತಮ್ಮರವರ ಕಿರಿಯ ಪುತ್ರನಾಗಿ ಪುನೀತ್ ರಾಜ್‌ಕುಮಾರ್ ಜನಿಸಿದರು. ಇವರ ಹಿರಿಯ ಸಹೋದರರಾದ ಶಿವರಾಜ ಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಕನ್ನಡ ಚಿತ್ರರಂಗದ ಯಶಸ್ವಿ ನಾಯಕನಟರು.

ತಂದೆ ರಾಜ್‌ಕುಮಾರ್ ಅವರ ಚಿತ್ರಗಳನ್ನು ನೋಡುತ್ತಾ, ಅವರ ಶೂಟಿಂಗ್‌ ಸೆಟ್‌ಗಳಿಗೆ ಭೇಟಿ ಕೊಡುತ್ತಿದ್ದ ಅಪ್ಪುಗೆ ಬಾಲ್ಯದಿಂದಲೇ ನಟನೆಯಲ್ಲಿ ಆಸಕ್ತಿಯಿತ್ತು. ಈ ಕಾರಣದಿಂದಲೇ ಬಾಲ ನಟನಾಗಿ ಚಿತ್ರರಂಗದಲ್ಲಿ ಅಳಿಸದ ಹೆಜ್ಜೆಗುರುತು ಮೂಡಿಸಿದ್ದಾರೆ.

ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ, ಭಾಗ್ಯವಂತ, ಚಲಿಸುವ ಮೋಡಗಳು, ಎರಡು ನಕ್ಷತ್ರಗಳು, ಪ್ರೇಮದ ಕಾಣಿಕೆ, ಬೆಟ್ಟದ ಹೂವು, ಶಿವ ಮೆಚ್ಚಿದ ಕಣ್ಣಪ್ಪ, ಪರಶುರಾಮ್, ಯಾರಿವನು, ಭಕ್ತ ಪ್ರಹ್ಲಾದ, ವಸಂತ ಗೀತ, ಭೂಮಿಗೆ ಬಂದ ಭಗವಂತ, ಸನಾದಿ ಅಪ್ಪಣ್ಣ, ತಾಯಿಗೆ ತಕ್ಕ ಮಗ ಸೇರಿದಂತೆ ಹಲವು ಚಿತ್ರಗಳ ಮೂಲಕ ಜನರ ಮನಗೆದ್ದಿದ್ದಾರೆ. ಪುನೀತ್ ಅವರ ಮೊದಲು ಹೆಸರು ಮಾ.ಲೋಹಿತ್.

ಪುನೀತ್‌ ನಟನೆಯ 1985ರಲ್ಲಿ ತೆರೆಕಂಡ ಬೆಟ್ಟದ ಹೂವು ಚಿತ್ರದ ರಾಮು ಪಾತ್ರಕ್ಕೆ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದಾರೆ. ಚಲಿಸುವ ಮೋಡಗಳು’ ಹಾಗೂ ‘ಎರಡು ಕನಸು’ ಚಿತ್ರಗಳಿಗಾಗಿ ಅತ್ಯುತ್ತಮ ಬಾಲ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ.

ನಂತರ ಪುನೀತ್ 2002ರ ಅಪ್ಪು ಚಿತ್ರದ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಕಾಲಿಟ್ಟರು. ಅವರ ಅಭಿ, ಆಕಾಶ್, ಅರಸು, ಮಿಲನ, ಜಾಕಿ, ಹುಡುಗರು, ಅಣ್ಣಾ ಬಾಂಡ್, ಪವರ್, ಮೌರ್ಯ, ನಮ್ಮ ಬಸವ, ಪೃಥ್ವಿ, ವಂಶಿ, ರಾಜ್‌, ಪರಮಾತ್ಮ, ಯಾರೇ ಕೂಗಾಡಲಿ, ನಟ ಸಾರ್ವಭೌಮ, ರಾಜಕುಮಾರ, ಅಂಜನಿಪುತ್ರ, ರಣವಿಕ್ರಮ, ದೊಡ್ಮನೆ ಹುಡುಗ, ರಾಮ್, ನಿನ್ನಿಂದಲೇ, ಮೈತ್ರಿ, ಚಕ್ರವ್ಯೂಹ, ಯುವರತ್ನ ಸೇರಿದಂತೆ ಹಲವು ಯಶಸ್ವಿ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

ಪುನೀತ್‌ ರಾಜ್‌ಕುಮಾರ್ ಚಿತ್ರ ನಿರ್ಮಾಪಕರಾಗಿ`ಕವಲುದಾರಿ’, `ಮಾಯಾಬಜಾರ್’, ಫ್ರೆಂಚ್ ಬಿರಿಯಾನಿ, ಲಾ, ಫ್ಯಾಮಿಲಿ ಪ್ಯಾಕ್ ಎಂಬ ಚಿತ್ರಗಳನ್ನು ಪಿಆರ್‌ಕೆ ಪ್ರೊಡಕ್ಷನ್‌ ಎಂಬ ತಮ್ಮ ಹೋಮ್ ಬ್ಯಾನರ್ನಲ್ಲಿ ನಿರ್ಮಿಸಿದ್ದಾರೆ. ಜೊತೆಗೆ ಪ್ರೊಡಕ್ಸನ್ ಹೌಸ್ ಮೂಲಕ ಕಿರುತೆರೆ ಧಾರಾವಾಹಿಗಳನ್ನು ಕೂಡ ನಿರ್ಮಿಸಿದ್ದಾರೆ. ತಾಯಿಯ ನೆನಪಿನಲ್ಲಿ `ಪಿ.ಆರ್.ಕೆ ‘ ಆಡಿಯೋ ಕಂಪನಿಯೊಂದನ್ನು ಸ್ಥಾಪಿಸಿದ್ದಾರೆ.

ಇದರ ಜೊತೆಗೆ ಪ್ರಸಿದ್ಧ ಟಿವಿ ಕಾರ್ಯಕ್ರಮ ಕನ್ನಡದ ಕೋಟ್ಯಧಿಪತಿ, ಫ್ಯಾಮಿಲಿ ಪವರ್ ಶೋ ಗಳನ್ನು ನಿರೂಪಣೆ ಮಾಡಿದ್ದಾರೆ. ಚಿತ್ರನಟ ,ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕರೂ ಆಗಿದ್ದ ಪುನೀತ್‌ ರಾಜ್‌ಕುಮಾರ್, ನಾಯಕ ನಟರಾಗಿ ನಟಿಸಿದ್ದ ಮಿಲನ ಮತ್ತು ಜಾಕಿ ಚಿತ್ರಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯ ಉತ್ತಮ ನಟ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದರು. ಅಲ್ಲದೆ, ಹುಡುಗರು, ಯಾರೇ ಕೂಗಾಡಲಿ, ರಣ ವಿಕ್ರಮ, ರಾಜಕುಮಾರ ಸಿನಿಮಾಗಳಿಗೆ ದಕ್ಷಿಣ ಭಾರತ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.


ಇದನ್ನೂ ಓದಿ: ಪುನೀತ್ ರಾಜಕುಮಾರ್ ನುಡಿನಮನ; ಮುಗ್ಧ ನಗುವೊಂದರ ಕಣ್ಮರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...