Homeಕರ್ನಾಟಕಸ್ವಿಗ್ಗಿ, ಜೊಮಾಟೊ ಸೇರಿದಂತೆ ಡೆಲಿವರಿ ಬಾಯ್‌ಗಳಿಗೆ ಜೀವ, ಅಪಘಾತ ವಿಮಾ ಸೌಲಭ್ಯ ಜಾರಿ

ಸ್ವಿಗ್ಗಿ, ಜೊಮಾಟೊ ಸೇರಿದಂತೆ ಡೆಲಿವರಿ ಬಾಯ್‌ಗಳಿಗೆ ಜೀವ, ಅಪಘಾತ ವಿಮಾ ಸೌಲಭ್ಯ ಜಾರಿ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ ತಿಂಗಳಲ್ಲಿ 2023-24ನೇ ಸಾಲಿನ ಆಯವ್ಯಯ(ಬಜೆಟ್) ಭಾಷಣದಲ್ಲಿ ಘೋಷಿಸಿದಂತೆ ಗಿಗ್ ಕಾರ್ಮಿಕರಿಗೆ ಅಂದರೇ ಸ್ವಿಗ್ಗಿ, ಜೊಮಾಟೊ(Zomato) ಮತ್ತು ಅಮೆಜಾನ್​​ನಂತಹ (Amazon) ಇ-ಕಾಮರ್ಸ್​​ ಡೆವಲರಿ ಬಾಯ್​​ಗಳಿಗೆ ವಿಮಾ ಸೌಲಭ್ಯ ಜಾರಿಗೊಳಿಸುವ ತೀರ್ಮಾನವನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.

ಸಿಗ್ಗಿ , ಜೊಮಾಟೋ, ಅಮಜಾನ್‌, ಕ್ಲಿಪ್‌ಕಾರ್ಟ್, ಬಿಗ್‌ಬಾಸ್ಕೆಟ್ ಮತ್ತಿತರ ಸಂಸ್ಥೆಗಳಲ್ಲಿ ಡೆಲಿವರಿ ಬಾಯ್‌ಗಳಾಗಿ ಕೆಲಸ ಮಾಡುವವರಿಗೆ ಸಾಮಾಜಿಕ ಭದ್ರತೆ ನೀಡಲು 12 ಲಕ್ಷ ಜೀವ ವಿಮೆ ಮತ್ತು 12 ಲಕ್ಷ ಅಪಘಾತ ಪರಿಹಾರ ವಿಮಾಸ ಲಭ್ಯ ಸೇರಿ ಒಟ್ಟು 4 ಲಕ್ಷ ವಿಮಾ ಸೌಲಭ್ಯ ಜಾರಿ ಮಾಡಲಾಗುವುದು. ಇದನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಜಾರಿ ಮಾಡಲು ಆದೇಶಿಸಲಾಗಿದೆ.

ರಾಜ್ಯ ಸರ್ಕಾರ ಸೆ.08 ರಂದು ಅಧಿಕೃತ ಸುತ್ತೋಲೆ ಹೊರಡಿಸುವ ಮೂಲಕ ಯೋಜನೆಯನ್ನು ಜಾರಿ ಮಾಡಿದೆ. 2022 ರ ನೀತಿ ಆಯೋಗದ ವರದಿ ಪ್ರಕಾರ ರಾಜ್ಯದಲ್ಲಿ ಅಂದಾಜು 2.3 ಲಕ್ಷ ಗಿಗ್ ಕೆಲಸಗಾರರಿದ್ದಾರೆ. ಆದರೆ ರಾಜ್ಯ ಕಾರ್ಮಿಕ ಇಲಾಖೆಯು ಈ ಬಗ್ಗೆ ಯಾವುದೇ ನಿಖರ ಅಂಕಿ-ಸಂಖ್ಯೆ ಹೊಂದಿಲ್ಲ. ಸರಕು ಮತ್ತು ಸೇವೆಗಳನ್ನು ನಿಗದಿತ ಸಮಯದಲ್ಲಿ ತಲುಪಿಸಲು ಜೀವವನ್ನು ಪಣಕ್ಕಿಟ್ಟು ಕೆಲಸ ಮಾಡುವ ಕಾರ್ಮಿಕರ ಭದ್ರತೆಗೆ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯ ಪ್ರಯೋಜನ ಪಡೆಯಬೇಕಾದರೇ ಕೆಲವು ಷರತ್ತುಗಳನ್ನು ಸರ್ಕಾರ ವಿಧಿಸಿದೆ.

ಗಿಗ್ ಕಾರ್ಮಿಕರಿಗೆ ಜೀವ ವಿಮೆ: ಷರತ್ತುಗಳು-

  • 18-60 ವರ್ಷ ವಯಸ್ಸಿನ ಯಾವುದೇ ವ್ಯಕ್ತಿ ಮತ್ತು ಕನಿಷ್ಠ ಒಂದು ವರ್ಷದ ಅವಧಿಯವರೆಗೆ ಯಾವುದೇ ಆನ್‌ಲೈನ್ ಆಹಾರ ವಿತರಣೆ ಅಥವಾ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಕಂಪನಿಯಲ್ಲಿ ಗಿಗ್ ಕೆಲಸಗಾರರಾಗಿ ಕೆಲಸ ಮಾಡುತ್ತಿರಬೇಕು.
  • ಅಪಘಾತದಲ್ಲಿ ಮೃತಪಟ್ಟರೇ 4 ಲಕ್ಷ ರೂಪಾಯಿಗಳನ್ನು ಒದಗಿಸಲಾಗುತ್ತದೆ. ಇದರಲ್ಲಿ 2 ಲಕ್ಷ ರೂಪಾಯಿ ಅಪಘಾತ ಕವರೇಜ್ ಕೂಡ ಸೇರಿದೆ. ಒಂದು ವೇಳೆ ಅಪಘಾತದಿಂದ ಗಾಯ ಮತ್ತು ಅಂಗವೈಕಲ್ಯರಾದರೆ ಅದರ ಪ್ರಮಾಣವನ್ನು ಆಧರಿಸಿ ಗಿಗ್ ಕೆಲಸಗಾರರಿಗೆ ಹಣ ನೀಡಲಾಗುತ್ತದೆ.
  • ಆಸ್ಪತ್ರೆಗೆ ದಾಖಲಾದರೆ, 1 ಲಕ್ಷದವರೆಗಿನ ಮೊತ್ತವನ್ನು ಮರುಪಾವತಿ ಮಾಡಲಾಗುತ್ತದೆ.
  • ಗಿಗ್ ಕಾರ್ಮಿಕರು ಆದಾಯ ತೆರಿಗೆ ಪಾವತಿಸುತ್ತಿದ್ದರೆ, ಭವಿಷ್ಯ ನಿಧಿ ಅಥವಾ ಇಎಸ್‌ಐ ಹೊಂದಿದ್ದರೆ ಹಂತವರು ಯೋಜನೆಗೆ ಅರ್ಹರಾಗಿರುವುದಿಲ್ಲ.
  • ಕೆಲಸದಲ್ಲಿರುವಾಗ ಗಿಗ್  ಕಾರ್ಮಿಕ ಮದ್ಯಪಾನ ಅಥವಾ ಡ್ರಗ್ಸ್‌ನ ಅಮಲಿನಲ್ಲಿ ಅಪಘಾತ ಅಥವಾ ಮೃತಪಟ್ಟರೆ ಯೋಜನೆಯ ಪ್ರಯೋಜನಗಳಿಗೆ ಅರ್ಹರಾಗಿರುವುದಿಲ್ಲ.
  • ಗಿಗ್ ಕಾರ್ಮಿಕ ಆತ್ಮಹತ್ಯೆಯಿಂದ ಸತ್ತರೆ, ಉದ್ದೇಶಪೂರ್ವಕವಾಗಿ ಯಾರನ್ನಾದರೂ ನೋಯಿಸಲು ಅಪಘಾತದ ಕೃತ್ಯವನ್ನು ಮಾಡಿದರೆ ಅಥವಾ ಮಾನಸಿಕ ಅಸ್ಥಿರತೆಯಿಂದ ಅಪಘಾತ ಸಂಭವಿಸಿದಲ್ಲಿ ಯೋಜನೆಯ ಪ್ರಯೋಜನೆ ಪಡೆಯಲು ಸಾಧ್ಯವಿಲ್ಲ.
  • ಅಪಘಾತ ಅಥವಾ ಸಾವಿನ ಒಂದು ವರ್ಷದೊಳಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

ರಾಜ್ಯ ಸರ್ಕಾರದ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ ಮತ್ತು ಇ-ಲೇಬರ್ ಐಡೆಂಟಿಟಿ ಕಾರ್ಡ್ ಸೇರಿದಂತೆ ವೈಯಕ್ತಿಕ ದಾಖಲೆ ಮತ್ತು ಬ್ಯಾಂಕ್ ಖಾತೆ ವಿವರ ನೀಡಿ ನೋಂದಾಯಿಸಿಬೇಕು.

ಇದನ್ನೂ ಓದಿ: ಮಾನಿಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ: ಗ್ಯಾರೆಂಟಿ ಯೋಜನೆಗಳ ಬಗ್ಗೆ ಉಲ್ಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...