Homeಮುಖಪುಟಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ

ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ರಾಜ್ಯ ಸರ್ಕಾರ ಇಂದು (ಸೆ.5) ಚಾಲನೆ ನೀಡಿತು. ಸಾಂಕೇತಿಕವಾಗಿ ರೈತ ಮಕ್ಕಳಿಗೆ ಚೆಕ್‌ ವಿತರಿಸಲಾಯಿತು.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಎನ್‌.ಎಸ್.ತೋಮರ್‌, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಚಿವರಾದ ಮುನಿರತ್ನ, ಪ್ರಭು ಚೌಹಾಣ್ ಭಾಗವಹಿಸಿದ್ದರು. ಸಚಿವ ತೋಮರ್‌, ವಿದ್ಯಾರ್ಥಿಗಳ ಖಾತೆಗೆ ವಿದ್ಯಾನಿಧಿ ಹಣವನ್ನು ವರ್ಗಾವಣೆ ಮಾಡಿದರು.

ರೈತ ವಿದ್ಯಾನಿಧಿ ಯೋಜನೆಯು 17 ಲಕ್ಷ ರೈತರ ಮಕ್ಕಳಿಗೆ ಅನುಕೂಲವಾಗಿದೆ. ಪಿಯುಸಿ, ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ 2,500 ರೂ., ವಿದ್ಯಾರ್ಥಿನಿಯರಿಗೆ 3 ಸಾವಿರ ರೂ., ಪದವೀಧರ ವಿದ್ಯಾರ್ಥಿಗಳಿಗೆ 5 ಸಾವಿರ ರೂ, ವಿದ್ಯಾರ್ಥಿನಿಯರಿಗೆ 5,500 ರೂ., ಎಲ್ಎಲ್​ಬಿ, ಪ್ಯಾರಾಮೆಡಿಕಲ್, ಬಿ ಫಾರ್ಮ್, ನರ್ಸಿಂಗ್, ವೃತ್ತಿಪರ ಕೋರ್ಸ್​ಗಳ ವಿದ್ಯಾರ್ಥಿಗಳಿಗೆ 7,500 ರೂ., ವಿದ್ಯಾರ್ಥಿನಿಯರಿಗೆ 8 ಸಾವಿರ ರೂ. ಹಣವನ್ನು ಸರ್ಕಾರ ನೀಡಲಿದೆ.

ಇದನ್ನೂ ಓದಿ: ರೈತರ ಮಕ್ಕಳಿಗೆ ಪಿಯುಸಿಯಿಂದ ಪಿಜಿವರೆಗೂ ಸ್ಕಾಲರ್‌‌ಶಿಪ್‌: ಸಿಎಂ ಬೊಮ್ಮಾಯಿ ಘೋಷಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...