ಪೆಟ್ರೋಲ್‌ನಲ್ಲಿ ನಿಗದಿಗಿಂತ ಹೆಚ್ಚಿನ ಎಥೆನಾಲ್ ಮಿಶ್ರಣ ಆರೋಪಕ್ಕೆ ಕರ್ನಾಟಕ ಸರ್ಕಾರ ಬದ್ಧ: ಸಚಿವ ರಿಜ್ವಾನ್ ಅರ್ಷದ್

ಪೆಟ್ರೋಲ್‌ನಲ್ಲಿ ನಿಗದಿಪಡಿಸಿರುವ ಶೇ.20ರ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ತನ್ನ ವರದಿಗೆ ಕರ್ನಾಟಕ ಸರ್ಕಾರ ಬದ್ಧವಾಗಿದೆ ಎಂದು ಆಹಾರ, ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು ಹಾಗೂ ಕಾನೂನು ಮಾಪನಶಾಸ್ತ್ರ ಸಚಿವ ರಿಜ್ವಾನ್ ಅರ್ಷದ್ ಸೋಮವಾರ (ನ.9) ಹೇಳಿದ್ದಾರೆ. ರಾಜ್ಯದ ವಿವಿಧ ಪೆಟ್ರೋಲ್ ಬಂಕ್‌ಗಳಿಂದ ಸಂಗ್ರಹಿಸಲಾದ ಕೆಲವು ಮಾದರಿಗಳಲ್ಲಿ ಶೇ.31.2ರಷ್ಟು ಎಥೆನಾಲ್ ಪತ್ತೆಯಾಗಿದೆ ಎಂದು ತಿಳಿಸಿರುವ ಅವರು, ಈ ವಿಚಾರಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ತೈಲ ಮಾರುಕಟ್ಟೆ ಕಂಪನಿಗಳು (OMCs) ಉತ್ತರಿಸದೆ ತಪ್ಪಿಸಿಕೊಳ್ಳುತ್ತಿವೆ ಎಂದು ಆರೋಪಿಸಿದ್ದಾರೆ. … Continue reading ಪೆಟ್ರೋಲ್‌ನಲ್ಲಿ ನಿಗದಿಗಿಂತ ಹೆಚ್ಚಿನ ಎಥೆನಾಲ್ ಮಿಶ್ರಣ ಆರೋಪಕ್ಕೆ ಕರ್ನಾಟಕ ಸರ್ಕಾರ ಬದ್ಧ: ಸಚಿವ ರಿಜ್ವಾನ್ ಅರ್ಷದ್