Homeಕರೋನಾ ತಲ್ಲಣಕೋವಿಡ್ ಸ್ಕ್ಯಾಮ್ ಕರ್ನಾಟಕ: ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

ಕೋವಿಡ್ ಸ್ಕ್ಯಾಮ್ ಕರ್ನಾಟಕ: ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

- Advertisement -
- Advertisement -

ಕೆಲವು ದಿನಗಳಿಂದ ಕರ್ನಾಟಕದಲ್ಲಿ ಕೊರೊನಾ ಸಂಬಂಧಿತ ವೈದ್ಯಕೀಯ ಸಾಮಗ್ರಿಗಳ ಖರೀದಿ ವಿಚಾರದಲ್ಲಿ ಹಗರಣ ನಡೆದಿದೆ ಎಂಬ ದೊಡ್ಡ ಆರೋಪ ಭುಗಿಲೆದ್ದಿದೆ. 2200 ಕೋಟಿ ಅವ್ಯವಹಾರ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಆರೋಪಿಸಿದ್ದಾರೆ. ಈ ಕುರಿತು ಇದೀಗ #CovidScamKarnataka ಎಂಬ ಹ್ಯಾಸ್‌ಟ್ಯಾಗ್ ಟ್ರೆಂಡಿಂಗ್‌ ಆಗಿದೆ.

ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಹಲವು ಗಂಟೆಗಳ ಕಾಲ ನಂಬರ್ 1 ಸ್ಥಾನದಲ್ಲಿದ್ದು, ಭಾರತದಲ್ಲಿ 15ನೇ ಸ್ಥಾನ ಪಡೆದುಕೊಂಡಿದೆ.

ಕಳೆದ ವಾರ ಸಿದ್ಧರಾಮಯ್ಯನವರು ಅಂಕಿಅಂಶಗಳ ಸಮೇತ ಈ ಹಗರಣವನ್ನು ಬಹಿರಂಗಪಡಿಸಿದ್ದರು. ಅದರ ಮುಂದುವರಿದ ಭಾಗವಾಗಿ ನೆಟ್ಟಿಗರು ಈ ಅಭಿಯಾನವನ್ನು ಆರಂಭಿಸಿದ್ದಾರೆ.

ನಾವು ನಮ್ಮ ಜೀವವನ್ನು ಸರ್ಕಾರದ ಕೈಯಲ್ಲಿಟ್ಟೇವೆ. ಆದರೆ ಅವರು ನಮ್ಮ ನಂಬಿಕೆಯನ್ನೂ ಲೂಟಿ ಮಾಡಿದ್ದಾರೆ. ಕರ್ನಾಟಕದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ನಡೆದಿದ್ದು 2008-13 ರ ಅವಧಿಯಲ್ಲಿ. ಆಗ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿತ್ತು. ಈಗಲೂ ಇರುವುದು ಅವರ ಆಡಳಿತವೇ. ಹಾಗಾಗಿ ಮತ್ತೆ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಶಾದ್‌ ಬಾಜಪೈ ಎಂಬುವವರು ಕಿಡಿಕಾರಿದ್ದಾರೆ.

 

ಕರ್ನಾಟಕದ ಲಕ್ಷಾಂತರ ಜನರ ಬೊಕ್ಕಸದ ಹಣವನ್ನು ಲೂಟಿ ಮಾಡುವುದಕ್ಕೆ ಕೊರೊನಾ ಒಳ್ಳೇಯ ಅವಕಾಶ ನೀಡಿದೆ. ರಾಜ್ಯಪಾಲರು ಸಾರ್ವಜನಿಕ ಹಣವನ್ನು ನುಂಗಿದವರ ವಿರುದ್ಧ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಟ್ರೆಂಡ್ ಸೆಟ್ಟರ್ಸ್ ಇಂಡಿಯ ಒತ್ತಾಯಿಸಿದೆ.

ಜನರು ಆತಂಕದಲ್ಲಿದ್ದಾರೆ. ಸರ್ಕಾರ ಲೂಟಿಯಲ್ಲಿ ನಿರತವಾಗಿದೆ. ಹಣ ಮಾಡುವುದಕ್ಕೆ ನೂರಾರು ವಿಧಾನಗಳಿವೆ. ಆದರೆ ಪರಿಹಾರ ಹಣದಲ್ಲಿ ಲೂಟಿ ಹೊಡೆಯಬಾರದು ಎಂದು ಎಸ್‌ಡಿಪಿಐನ ಮೊಹಮ್ಮದ್ ನಾಸಿರ್ ಟ್ವೀಟ್ ಮಾಡಿದ್ದಾರೆ.

ಆದರೆ ಈ ಆರೋಪಗಳನ್ನೆಲ್ಲಾ ತಳ್ಳಿಹಾಕಿರುವ ರಾಜ್ಯ ಸರ್ಕಾರ, ಯಾವುದೇ ಹಗರಣ ನಡೆದಿಲ್ಲ ಎಂದು ಹೇಳಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಕೊರೊನಾ ವೆಚ್ಚಕ್ಕೆ ಸಂಬಂಧಿಸಿದಂತೆ ಯಾವುದೇ ವಿವರಗಳನ್ನು ಬೇಕಾದರೂ ಪಡೆದುಕೊಳ್ಳಬಹುದು. ಇದು ಪಾರದರ್ಶಕವಾಗಿರುತ್ತದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ : CAG ಗಿಲ್ಲ PM CARES ಆಡಿಟ್‌ : ಪಿಎಂ ಕೇರ್ಸ್ ಸುತ್ತಾ ಹಗರಣಗಳ ಹುತ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...