Homeಕರ್ನಾಟಕಮುಸ್ಲಿಂ ಮೀಸಲು ಮಸೂದೆ ಮತ್ತೆ ವಾಪಸ್: ಸುಪ್ರೀಂ ತೀರ್ಪು ಉಲ್ಲೇಖಿಸಿದ ರಾಜ್ಯಪಾಲರು

ಮುಸ್ಲಿಂ ಮೀಸಲು ಮಸೂದೆ ಮತ್ತೆ ವಾಪಸ್: ಸುಪ್ರೀಂ ತೀರ್ಪು ಉಲ್ಲೇಖಿಸಿದ ರಾಜ್ಯಪಾಲರು

- Advertisement -
- Advertisement -

ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡ 4ರಷ್ಟು ಮೀಸಲಾತಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ರೂಪಿಸಿರುವ ‘ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಕೆಟಿಪಿಪಿ) ತಿದ್ದುಪಡಿ’ ಮಸೂದೆಯನ್ನು ರಾಷ್ಟ್ರಪತಿ ಅಂಕಿತಕ್ಕೆ ಕಾಯ್ದಿರಿಸಿ ಎರಡನೇ ಬಾರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ ಎಂದು ವರದಿಯಾಗಿದೆ.

ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ಮಸೂದೆಯನ್ನು ಏಪ್ರಿಲ್ 1ರಂದು ಮೊದಲ ಬಾರಿಗೆ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಏಪ್ರಿಲ್ 15ರಂದು ಆರು ಪುಟಗಳ ಪತ್ರದೊಂದಿಗೆ ರಾಜ್ಯಪಾಲರು ಮಸೂದೆಯನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದರು.

“ಧರ್ಮಾಧಾರಿತ ಮೀಸಲಾತಿಗೆ ದೇಶದ ಸಂವಿಧಾನದಲ್ಲಿ ಅವಕಾಶ ಇಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅಲ್ಲದೆ, ಮಸೂದೆಯನ್ನು ರಾಷ್ಟ್ರಪತಿಯ ಪರಿಶೀಲನೆಗೆ ಬಿಡುವುದು ಸೂಕ್ತವೆಂದು ಭಾವಿಸಿದ್ದೇನೆ ಎಂದು ಹೇಳಿದ್ದರು.

ರಾಜ್ಯ ಸರ್ಕಾರ ಕಳೆದವಾರ ಮಸೂದೆಯನ್ನು ಮತ್ತೆ ರಾಜ್ಯಪಾಲರಿಗೆ ಕಳುಹಿಸಿತ್ತು. ರಾಷ್ಟ್ರಪತಿ ಪರಿಶೀಲನೆಗೆ ಕಾಯ್ದಿರಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರನ್ನು ಕೋರಿತ್ತು.

ಎರಡನೇ ಬಾರಿಯೂ ಮಸೂದೆಯನ್ನು ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿರುವ ರಾಜ್ಯಪಾಲರು, ಮೊದಲ ಬಾರಿ ಕಳುಹಿಸಿದ್ದ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದ ಅಭಿಪ್ರಾಯವನ್ನೇ ತಿಳಿಸಿದ್ದಾರೆ. ಅಲ್ಲದೆ, ತಮಿಳುನಾಡು ಸರ್ಕಾರ ಮತ್ತು ಅಲ್ಲಿನ ರಾಜ್ಯಪಾಲರ ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಅಂಶಗಳನ್ನು ಉಲ್ಲೇಖಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ಸಾಂವಿಧಾನಿಕ ಬಿಕ್ಕಟ್ಟು ಎದುರಾಗುವ ಸಂದರ್ಭದಲ್ಲಿ ರಾಷ್ಟ್ರಪತಿ ಮಾತ್ರ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ರಾಜ್ಯಪಾಲರಿಗೆ ಸಾಂವಿಧಾನಿಕ ನ್ಯಾಯಾಲಯಗಳಿಂದ ಅಭಿಪ್ರಾಯ ಪಡೆಯಲು ಅಧಿಕಾರವಿಲ್ಲ. ಮಸೂದೆಯು ಸಾಂವಿಧಾನಿಕ ಅಂಶಗಳನ್ನು ಹೊಂದಿರುವುದರಿಂದ ಮರು ಪರಿಶೀಲಿಸಲು ಕಷ್ಟವಾಗುತ್ತಿದೆ. ಹಾಗಾಗಿ, ರಾಷ್ಟ್ರಪತಿಯ ಪರಿಶೀಲನೆಗೆ ಕಾಯ್ದಿರಿಸಿದ್ದೇನೆ” ಎಂದು ರಾಜ್ಯಪಾಲರು ಉಲ್ಲೇಖಿಸಿದ್ದಾರೆ.

ಅಲ್ಲದೆ, “ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರ ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯ ಹಂತದಲ್ಲಿ ಇರುವುದರಿಂದ, ಈ ವಿಷಯದಲ್ಲಿ ಮಧ್ಯ ಪ್ರವೇಶಿಸುವುದು ಸೂಕ್ತವಲ್ಲ ಎಂದು ಭಾವಿಸಿದ್ದೇನೆ. ಈ ಕಾರಣಕ್ಕೆ ಮಸೂದೆಗೆ ಅಂಕಿತ ಹಾಕದೆ ರಾಷ್ಟ್ರಪತಿಯ ಪರಿಶೀಲನೆಗೆ ಬಿಡಲು ನಿರ್ಧರಿಸಿದ್ದೇನೆ” ಎಂದು ರಾಜ್ಯಪಾಲರು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ತಿರುಗೇಟು ಕೊಟ್ಟ ರಾಜ್ಯಪಾಲರು

ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳುವ ವಿಚಾರಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ರಾಜ್ಯ ಸರ್ಕಾರ ಮತ್ತು ಅಲ್ಲಿನ ರಾಜ್ಯಪಾಲರ ನಡುವಿನ ಬಿಕ್ಕಟ್ಟು ಸಂಬಂಧ ಸುಪ್ರೀಂ ಕೋರ್ಟ್ ಇತ್ತೀಚೆಗೆ ಮಹತ್ವದ ತೀರ್ಪು ನೀಡಿತ್ತು.

ರಾಜ್ಯ ಸರ್ಕಾದೊಂದಿಗೆ ದ್ವೇಷ ಸಾಧಿಸಿದಂತೆ ಮಸೂದೆಗಳ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳದೆ ತನ್ನಲ್ಲೇ ಬಾಕಿ ಉಳಿಸಿಕೊಂಡಿದ್ದ ತಮಿಳುನಾಡು ರಾಜ್ಯಪಾಲ ಆರ್‌.ಎನ್‌ ರವಿ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ನ್ಯಾಯಾಲಯವೇ ನೇರವಾಗಿ ಸುಮಾರು 10 ಮಸೂದೆಗಳನ್ನು ಅಂಗೀಕರಿಸಿತ್ತು.

ಕಾರ್ಯಾಂಗ ಮತ್ತು ನ್ಯಾಯಾಂಗಕ್ಕೆ ಸಂಬಂಧಪಟ್ಟಂತೆ ಅತಿ ಮಹತ್ವದ ಈ ತೀರ್ಪನ್ನು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಬಿಜೆಪಿಯೇತರ ರಾಜ್ಯಗಳ ಸಿಎಂಗಳು ಸ್ವಾಗತಿಸಿದ್ದರು. ಈಗ ಅದೇ ತೀರ್ಪಿನ ಅಂಶಗಳನ್ನು ಮುಂದಿಟ್ಟು ರಾಜ್ಯಪಾಲರು ಸರ್ಕಾರಕ್ಕೆ ತಿರುಗೇಟು ಕೊಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿನ ಪ್ಯಾರಾಗ್ರಾಫ್ 412 ಅನ್ನು ಉಲ್ಲೇಖಿಸಿರುವ ರಾಜ್ಯಪಾಲರು,”ರಾಜ್ಯಪಾಲರಿಗೆ ಸಾಂವಿಧಾನಿಕ ನ್ಯಾಯಾಲಯಗಳಿಂದ ಅಭಿಪ್ರಾಯ ಪಡೆಯಲು ಅಧಿಕಾರವಿಲ್ಲ. ಮಸೂದೆಯು ಸಾಂವಿಧಾನಿಕ ಅಂಶಗಳನ್ನು ಹೊಂದಿರುವುದರಿಂದ ಮರು ಪರಿಶೀಲಿಸಲು ಕಷ್ಟವಾಗುತ್ತಿದೆ. ಹಾಗಾಗಿ, ರಾಷ್ಟ್ರಪತಿಯ ಪರಿಶೀಲನೆಗೆ ಕಾಯ್ದಿರಿಸಿದ್ದೇನೆ” ಎಂದಿದ್ದಾರೆ.

ಮುಂದುವರಿದು, “ಮುಸ್ಲಿಮರ ಮೀಸಲಾತಿಗೆ ಸಂಬಂಧಿಸಿದ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವುದರಿಂದ, ಈ ಹಂತದಲ್ಲಿ ಮಧ್ಯಪ್ರವೇಶಿಸದಿರುವುದು ಸೂಕ್ತವೆಂದು ನಾನು ಭಾವಿಸುತ್ತೇನೆ. ಏಕೆಂದರೆ ಈ ವಿಷಯವು ಸಂವಿಧಾನದ 14 ಮತ್ತು 15 ನೇ ವಿಧಿಗಳು ಹಾಗೂ ವಿವಿಧ ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನ ತೀರ್ಪುಗಳಿಂದ ವಿಧಿಸಲಾದ ನಿರ್ಬಂಧಗಳನ್ನು ಒಳಗೊಂಡಿದೆ” ಎಂದು ಹೇಳಿದ್ದಾರೆ.

ಏನಿದು ಮುಸ್ಲಿಂ ಮೀಸಲು ಮಸೂದೆ?

ನಿಜವಾಗಿಯೂ ಇದು ಮುಸ್ಲಿಂ ಮೀಸಲು ಮಸೂದೆಯಲ್ಲ. ಮಸೂದೆಗೆ ತಿದ್ದುಪಡಿ ತಂದು ಮುಸ್ಲಿಮರಿಗೆ ಕಾಮಗಾರಿಗಳ ಗುತ್ತಿಗೆಯಲ್ಲಿ ಮೀಸಲಾತಿ ಕಲ್ಪಿಸಲು ಅವಕಾಶ ಮಾಡಿಕೊಟ್ಟಿರುವುದರಿಂದ ಮುಸ್ಲಿಂ ಮೀಸಲು ಮಸೂದೆ ಎನ್ನಲಾಗುತ್ತಿದೆ.

1999ರ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆಗೆ ತಿದ್ದುಪಡಿ ತಂದು, ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಮಸೂದೆ, 2025ಕ್ಕೆ ವಿಧಾನಮಂಡಲದ ಅನುಮೋದನೆ ಪಡೆಯಲಾಗಿದೆ. ಇದು ರಾಜ್ಯಪಾಲರ ಅಂಕಿತಕ್ಕೆ ಅಥವಾ ರಾಷ್ಟ್ರಪತಿಯ ಪರಿಶೀಲನೆಗೆ ಬಾಕಿಯಿದೆ.

ತಿದ್ದುಪಡಿ ಮಸೂದೆಯಲ್ಲಿ ರೂ. 2 ಕೋಟಿವರೆಗಿನ ಸಿವಿಲ್ ಕೆಲಸಗಳ ಸರ್ಕಾರಿ ಟೆಂಡರ್‌ಗಳಲ್ಲಿ ಮತ್ತು ರೂ. 1 ಕೋಟಿವರೆಗಿನ ಸರಕು/ಸೇವೆಗಳ ಸಂಗ್ರಹಣೆಯಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ 4 ಶೇಕಡ ಮೀಸಲಾತಿ ಪರಿಚಯಿಸಲಾಗಿದೆ. ನಿರುದ್ಯೋಗವನ್ನು ಪರಿಹರಿಸುವ ಮತ್ತು ಹಿಂದುಳಿದ ವರ್ಗಗಳ ವರ್ಗ 2ಬಿಯ (ಮುಸ್ಲಿಮರು) ಒಳಗೊಳ್ಳುವಿಕೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಬಿಜೆಪಿಯವರು Sorry ಸಾವರ್ಕರ್‌ರನ್ನು ಅಕ್ಷರಶಃ ಪಾಲನೆ ಮಾಡುತ್ತಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...