ಮುಸ್ಲಿಂ ಮೀಸಲು ಮಸೂದೆ ಮತ್ತೆ ವಾಪಸ್: ಸುಪ್ರೀಂ ತೀರ್ಪು ಉಲ್ಲೇಖಿಸಿದ ರಾಜ್ಯಪಾಲರು

ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡ 4ರಷ್ಟು ಮೀಸಲಾತಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ರೂಪಿಸಿರುವ ‘ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಕೆಟಿಪಿಪಿ) ತಿದ್ದುಪಡಿ’ ಮಸೂದೆಯನ್ನು ರಾಷ್ಟ್ರಪತಿ ಅಂಕಿತಕ್ಕೆ ಕಾಯ್ದಿರಿಸಿ ಎರಡನೇ ಬಾರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ ಎಂದು ವರದಿಯಾಗಿದೆ. ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ಮಸೂದೆಯನ್ನು ಏಪ್ರಿಲ್ 1ರಂದು ಮೊದಲ ಬಾರಿಗೆ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಏಪ್ರಿಲ್ 15ರಂದು ಆರು ಪುಟಗಳ ಪತ್ರದೊಂದಿಗೆ ರಾಜ್ಯಪಾಲರು ಮಸೂದೆಯನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದರು. “ಧರ್ಮಾಧಾರಿತ ಮೀಸಲಾತಿಗೆ ದೇಶದ … Continue reading ಮುಸ್ಲಿಂ ಮೀಸಲು ಮಸೂದೆ ಮತ್ತೆ ವಾಪಸ್: ಸುಪ್ರೀಂ ತೀರ್ಪು ಉಲ್ಲೇಖಿಸಿದ ರಾಜ್ಯಪಾಲರು