Homeಮುಖಪುಟತೆಲಂಗಾಣ ಪತ್ರಿಕೆಗಳಲ್ಲಿ ಕರ್ನಾಟಕ ಸರ್ಕಾರದ ಜಾಹೀರಾತುಗಳನ್ನು ನಿಲ್ಲಿಸಬೇಕು: ಚುನಾವಣಾ ಆಯೋಗ

ತೆಲಂಗಾಣ ಪತ್ರಿಕೆಗಳಲ್ಲಿ ಕರ್ನಾಟಕ ಸರ್ಕಾರದ ಜಾಹೀರಾತುಗಳನ್ನು ನಿಲ್ಲಿಸಬೇಕು: ಚುನಾವಣಾ ಆಯೋಗ

- Advertisement -
- Advertisement -

ತೆಲಂಗಾಣದಲ್ಲಿ ಚುನಾವಣೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಅಲ್ಲಿಯ ಹಲವಾರು ಪತ್ರಿಕೆಗಳಲ್ಲಿ ಕರ್ನಾಟಕ ಸರ್ಕಾರದ ಕಲ್ಯಾಣ ಯೋಜನೆಗಳು ಮತ್ತು ಸಾಧನೆಗಳ ಕುರಿತು ಜಾಹೀರಾತುಗಳನ್ನು ಪ್ರಕಟಿಸುವುದನ್ನು ನಿಲ್ಲಿಸಬೇಕು ಎಂದು ಚುನಾವಣಾ ಆಯೋಗವು ಸೋಮವಾರ ಕೇಳಿಕೊಂಡಿದೆ.

ನವೆಂಬರ್ 24 ಮತ್ತು ನವೆಂಬರ್ 27 ರ ನಡುವೆ ಪ್ರಕಟವಾದ ಜಾಹೀರಾತುಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಚುನಾವಣಾ ಸಮಿತಿಯಿಂದ ಅನುಮೋದನೆ ಪಡೆದಿಲ್ಲ ಎಂದು ಕರ್ನಾಟಕ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ. ಅಕ್ಟೋಬರ್ 9ರಿಂದ ರಾಜ್ಯ ಸರ್ಕಾರಗಳು ನಿರ್ದೇಶನವನ್ನು ಉಲ್ಲಂಘಿಸಿದೆ ಎಂದು ಚುನಾವಣಾ ಆಯೋಗವು ಹೇಳಿದೆ.

ನಿರ್ದೇಶನವನ್ನು ಉಲ್ಲಂಘಿಸಿರುವ ಬಗ್ಗೆ ಮಂಗಳವಾರ ಸಂಜೆ 5 ಗಂಟೆಯೊಳಗೆ ವಿವರಣೆ ನೀಡಬೇಕು ಎಂದು ಚುನಾವಣಾ ಆಯೋಗವು ಕರ್ನಾಟಕ ಮುಖ್ಯ ಕಾರ್ಯದರ್ಶಿಗೆ ಕೇಳಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರಿ ಕಾರ್ಯದರ್ಶಿ ವಿರುದ್ಧ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು? ಎಂದು ಕೇಳಿದೆ.

ತೆಲಂಗಾಣದ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ಬಿಜೆಪಿ ನೀಡಿದ ದೂರುಗಳಿಗೆ ಪ್ರತಿಕ್ರಿಯೆಯಾಗಿ ಚುನಾವಣಾ ಆಯೋಗವು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಪತ್ರ ಬರೆದಿದೆ.

ಬೇರೆ ರಾಜ್ಯದ ಚುನಾವಣೆಯ ಮೇಲೆ ಪ್ರಭಾವ ಬೀರಲು ಕಾಂಗ್ರೆಸ್ ಸಾರ್ವಜನಿಕ ಹಣವನ್ನು ಬಳಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಕರ್ನಾಟಕದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸುವ ಮೂಲಕ ಬಿಜೆಪಿಯನ್ನು ಅಧಿಕಾರದ ಗದ್ದುಗೆಯಿಂದ ಕೆಳಗಿಳಿಸಿತು.

ಇದನ್ನೂ ಓದಿ: ಮೋದಿಯವರೇ ನಮ್ಮ ಹೆಮ್ಮೆಯ ಹೆಚ್ಎಎಲ್ ಮಾರಬೇಡಿ: ಕಾಂಗ್ರೆಸ್‌ ಲೇವಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...