Homeಮುಖಪುಟಹಿಂದೂ ಮತ ಬ್ಯಾಂಕ್‌ ಆತಂಕ: ಅನಧಿಕೃತ ಧಾರ್ಮಿಕ ಸ್ಥಳಗಳ ರಕ್ಷಣೆ ಮಸೂದೆ ಮಂಡಿಸಿದ ಬಿಜೆಪಿ ಸರ್ಕಾರ!

ಹಿಂದೂ ಮತ ಬ್ಯಾಂಕ್‌ ಆತಂಕ: ಅನಧಿಕೃತ ಧಾರ್ಮಿಕ ಸ್ಥಳಗಳ ರಕ್ಷಣೆ ಮಸೂದೆ ಮಂಡಿಸಿದ ಬಿಜೆಪಿ ಸರ್ಕಾರ!

ಇತ್ತೀಚೆಗೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದ ದೇವಸ್ಥಾನ ತೆರವು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡ ಬಳಿಕ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

- Advertisement -
- Advertisement -

ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರಗಳನ್ನು ರಕ್ಷಿಸುವ ಮಸೂದೆಯನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಇದು ಹಿಂದೂ ಮತ ಬ್ಯಾಂಕ್ ಸೆಳೆಯುವ ಹುನ್ನಾರ ಎಂದು ಟೀಕಿಸಿದೆ. ಬಿಜೆಪಿಯ ಇಬ್ಬಂದಿತನದ ಕುರಿತು ಚರ್ಚೆಯಾಗಬೇಕು ಎಂದಿದೆ.

2009ರಲ್ಲಿ ಸುಪ್ರೀಂಕೋರ್ಟ್‌ ನೀಡಿರುವ ಆದೇಶದ ಅನ್ವಯ ಅನಧಿಕೃತ ದೇವಾಲಯಗಳನ್ನು ತೆರವು ಮಾಡಬೇಕಿದೆ. ಇತ್ತೀಚೆಗೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದ ದೇವಸ್ಥಾನ ತೆರವು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡ ಬಳಿಕ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

ರಾಜ್ಯದಲ್ಲಿನ ಎಲ್ಲ ಧಾರ್ಮಿಕ ಕಟ್ಟಡಗಳನ್ನು ರಕ್ಷಿಸಲಾಗುವುದು. ಆದರೆ ಅನಧಿಕೃತವಾಗಿ ಧಾರ್ಮಿಕ ಕಟ್ಟಡಗಳನ್ನು ಇನ್ನು ಮುಂದೆ ನಿರ್ಮಿಸುವಂತಿಲ್ಲ ಎಂದು ‘ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣೆ) ಮಸೂದೆ 2021′ ಹೇಳಿದೆ. ಕೋರ್ಟ್‌ ತೀರ್ಪು ಬಳಿಕ ಈಗ ಸರ್ಕಾರವು “ಸರ್ಕಾರದ ನಿಯಮಗಳಿಗೆ ಅನುಸಾರ ಇರುವ ಧಾರ್ಮಿಕ ಕಟ್ಟಡಗಳಿದ್ದರೆ ಅವುಗಳನ್ನು ತೆರವುಗೊಳಿಸಬಾರದು. ಸರ್ಕಾರದ ನಿಯಮಗಳಿಗೆ ಒಳಪಡದ ಧಾರ್ಮಿಕ ಕಟ್ಟಡಗಳನ್ನು ತೆರೆವು ಮಾಡಬಹುದು” ಎಂದು ಹೊಸ ಮಸೂದೆಯಲ್ಲಿ ಹೇಳಿದೆ.

ಇದನ್ನೂ ಓದಿ: ನಂಜನಗೂಡಿನ ಪುರಾತನ ದೇವಸ್ಥಾನ ಕೆಡವಿದ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಆಕ್ರೋಶ

ಕಾಂಗ್ರೆಸ್ ಶಾಸಕ ಎನ್‌.ಎ.ಹ್ಯಾರೀಸ್‌, “ಇದು ಬಿಜೆಪಿಯ ಓಟ್‌ ಬ್ಯಾಂಕ್‌ ರಾಜಕಾರಣದ ಭಾಗ. ದೇವಾಲಯವನ್ನು ಉರುಳಿಸುವವರು ಇವರೇ, ಅವುಗಳನ್ನು ರಕ್ಷಿಸುವವರು ಇವರೇ. ಇದು ಮತಬ್ಯಾಂಕ್‌ ರಾಜಕಾರಣವಲ್ಲದೆ ಮತ್ತೇನು ಅಲ್ಲ. ಈ ವಿಚಾರ ಕುರಿತು ಚರ್ಚೆ ನಡೆಯಬೇಕು” ಎಂದು ಎಎನ್‌ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ನಂಜನಗೂಡಿನ ದೇವಾಲಯ ನೆಮಸಮವಾಗುತ್ತಿದ್ದಂತೆ ರಾಜ್ಯದಲ್ಲಿ ಭಾರೀ ಪ್ರತಿರೋಧ ವ್ಯಕ್ತವಾಗಿತ್ತು. ಬಿಜೆಪಿಯ ಹಿಂದೂ ಓಟ್‌ ಬ್ಯಾಂಕ್‌ ರಾಜಕಾರಣದ ಭಾಗವಾಗಿರುವ ಸಂಘಟನೆಗಳು ಅದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದವು. “ಇಂದು ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಿದ್ದರೆ ಈ ಪ್ರಕರಣ ಬೇರೆಯೇ ಸ್ವರೂಪ ಪಡೆಯುತ್ತಿತ್ತು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಿಜೆಪಿಯ ನಳೀನ್‌ ಕುಮಾರ್‌ ಕಟೀಲ್‌ ಒಂದು ವಿಚಾರವಾಗಿ ಮಾತನಾಡುತ್ತಾ ಬೆಂಕಿ ಹಚ್ಚುವ ಮಾತನಾಡಿದ್ದರು. ಇಂದು ಏನಾದರೂ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಿದ್ದರೆ ಅದು ಅಕ್ಷರಶಃ ಆಗುತ್ತಿತ್ತು” ಎಂದು ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧಮೇಂದ್ರ ಹೇಳಿಕೆ ನೀಡಿದ್ದರು. ಅಲ್ಲದೇ ಗಾಂಧಿಯನ್ನೇ ಬಿಟ್ಟಿಲ್ಲ ನಾವು, ಇನ್ನು ನೀವು ಯಾವ ಲೆಕ್ಕ ಎಂದು ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿದ್ದರಿಂದ ಧರ್ಮಂದ್ರ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಮೈಸೂರು- ಕೊಡಗು ಲೋಕಸಭಾ ಸಂಸದ ಪ್ರತಾಪ್‌ ಸಿಂಹ, ತನ್ನದೇ ಪಕ್ಷದ ಅಧಿಕಾರದಲ್ಲಿದ್ದರೂ, ಮೈಸೂರು ಜಿಲ್ಲಾಡಳಿತದ ವಿರುದ್ಧ ಹೇಳಿಕೆ ನೀಡಿದ್ದರು. ಹಿಂದೂ ದೇವಾಲಯಗಳ ತೆರವು ಮಾಡಬಾರದು ಎಂದು ಹೇಳಿದ್ದರು. ಇಷ್ಟೇ ಅಲ್ಲದೇ ಬಿಜೆಪಿ ಇತರ ನಾಯಕರು ದೇವಾಲಯ ತೆರವು ವಿರೋಧಿಸಿದ್ದರು. ಹಿಂದೂ ಮತಬ್ಯಾಂಕ್‌ ರಾಜಕಾರಣ ಮಾಡುವ ಬಿಜೆಪಿ, ಹಿಂದೂಗಳ ದೇವಾಲಯಗಳನ್ನು ತೆರವು ಮಾಡುತ್ತಿದೆ ಎಂದು ಪ್ರತಿಪಕ್ಷಗಳೂ ಟೀಕಿಸಿದ್ದವು.

ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿಹಾಕಿರುವುದು ಖಂಡನೀಯ ಕೃತ್ಯ. ಇದೊಂದು ಧರ್ಮಸೂಕ್ಷ್ಮ ವಿಚಾರವಾಗಿದ್ದು ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಸ್ಥಳೀಯರ ಜೊತೆ ಮಾತುಕತೆ ನಡೆಸಬೇಕಾಗಿತ್ತು. ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆ‌ನಪಾಗಲಿಲ್ಲವೇ? ಮುಖ್ಯಮಂತ್ರಿಯವರು ನಿಷ್ಪಕ್ಷಪಾತ ತನಿಖೆ‌ ನಡೆಸಿ‌ ಕಾರಣಕರ್ತ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕಾ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದರು.

ಈ ಎಲ್ಲಾ ಹಿನ್ನೆಲೆಯಲ್ಲಿ ತನ್ನ ಹಿಂದೂ ಮತ ಬ್ಯಾಂಕ್ ಸಿಡಿದೆದ್ದಿದ್ದನ್ನು ಗಮನಿಸಿದ ಸರ್ಕಾರ ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರಗಳನ್ನು ರಕ್ಷಿಸುವ ಮಸೂದೆಯನ್ನು ಮಂಡಿಸಿದೆ. ಈ ಕುರಿತು ಹಲವು ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

‘ನಾನುಗೌರಿ.ಕಾಂ ಜೊತೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌, “ದೇವಾಲಯಗಳನ್ನು ಒಡೆಯಬೇಕು ಎಂಬ ನಿರ್ಧಾರವನ್ನು ಸರ್ಕಾರ ಈ ಹಿಂದೆ ಎಂದೂ ತೆಗೆದುಕೊಂಡಿಲ್ಲ. ಈಗಲೂ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳಬೇಕು ಎಂದು ತೀರ್ಮಾನ ತೆಗೆದುಕೊಳ್ಳಲಾಗಿದೆ. ಹೀಗಿರುವ ಹಿಂದೂ ಮತಗಳ ಧ್ರುವೀಕರಣ ಹೇಗೆ ಸಾಧ್ಯವಾಗುತ್ತದೆ?” ಎಂದು ಕೇಳುತ್ತಾರೆ.

“ಅನೇಕ ಘಟನೆಗಳು ನಮ್ಮ ಗಮನಕ್ಕೆ ಬಂದಿರುವುದಿಲ್ಲ. ಹೀಗಾಗಿ ನಂಜನಗೂಡಿನ ಘಟನೆ ನಡೆದಿದೆ. ಈ ರೀತಿಯ ಘಟನೆ ನಡೆದದ್ದು ಹೇಗೆ ಎಂಬುದು ತನಿಖೆಯಾಗಬೇಕು. ಸರ್ಕಾರ ಮಂಡಿಸಿರುವ ಹೊಸ ಮಸೂದೆಯಲ್ಲಿ ಮಂದಿರ, ಮಸೀದಿ, ಚರ್ಚ್‌ ಎಲ್ಲ ಧಾರ್ಮಿಕ ಕೇಂದ್ರಗಳ ರಕ್ಷಣೆ ಇದೆ. ಹೀಗಾಗಿ ಎಲ್ಲ ಪಕ್ಷಗಳೂ ಸುಮ್ಮನಾಗಿವೆ” ಎನ್ನುತ್ತಾರೆ ರವಿಕುಮಾರ್‌.

ಈ ವಿಚಾರದ ಕುರಿತು ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್‌, “ಇದು ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು ಈ ಕುರಿತು ಸ್ಪಷ್ಟವಾಗಿ ಮಾತನಾಡಿದ್ದಾರೆ. ಸೂಕ್ಷ್ಮ ವಿಚಾರಗಳ ಕುರಿತು ಮಾತನಾಡುವಾಗ ಸ್ಥಳೀಯ ಜನರೊಂದಿಗೆ ಮಾತನಾಡಬೇಕು. ಜನರ ಅಭಿಪ್ರಾಯವನ್ನು ಗಣನೆಗೆ ತೆಗೆದುಕೊಂಡು ಮುಂದಿನ ಹೆಜ್ಜೆ ಇಡಬೇಕು ಎಂದಿದ್ದಾರೆ. ಜನರು ಮತ್ತೊಂದು ದೇವಾಲಯ ಕಟ್ಟಬೇಕೆಂದು ಬಯಸಿದರೆ, ಅದಕ್ಕೆ ಅವಕಾಶ ನೀಡಬೇಕು ಅಲ್ಲವೇ? ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರವಾಗಿದೆ. ಅದು ಚರ್ಚೆ ಆಗಬೇಕಿದೆ” ಎಂದರು.

ಹಿಂದೂ ಮತಗಳ ಮೇಲೆ ಉಭಯ ಪಕ್ಷಗಳು ಕಣ್ಣಿಟ್ಟಿರುವುದು ಇಲ್ಲಿ ಸ್ಪಷ್ಟವಾಗುತ್ತದೆ. ಭಾವನಾತ್ಮಕ ವಿಚಾರಗಳಲ್ಲಿ ಯಾವುದೇ ಪಕ್ಷವೂ ವೈಚಾರಿಕ ನಿಲುವು ತಾಳುವುದು ಕಷ್ಟ. ನ್ಯಾಯಾಂಗದ ನಿಲುವನ್ನು ಸಮರ್ಥಿಸುವುದು ಆಡಳಿತ ಹಾಗೂ ವಿರೋಧ ಪಕ್ಷಗಳೆರಡಕ್ಕೂ ಕಷ್ಟವಾಗುತ್ತದೆ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ.


ಇದನ್ನೂ ಓದಿ: ಮೈಸೂರು ಜಿಲ್ಲಾಡಳಿತದ ವಿರುದ್ಧ ಪ್ರತಾಪ್ ಸಿಂಹ ಸಮರ! ಬಿಜೆಪಿ v/s ಬಿಜೆಪಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...