Homeಕರ್ನಾಟಕಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸಲು ರಾಜ್ಯ ಸರ್ಕಾರದಿಂದ ಆದೇಶ

ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸಲು ರಾಜ್ಯ ಸರ್ಕಾರದಿಂದ ಆದೇಶ

- Advertisement -
- Advertisement -

ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸುವಂತೆ ಸೂಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್‌, ಸ್ವಚ್ಚತಾ ಸಿಬ್ಬಂದಿ ಮತ್ತು ಗ್ರೂಪ್ ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ಡಿಸೆಂಬರ್ 21, 2023ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸುವ ನೀತಿಯನ್ನು ಜಾರಿಗೊಳಿಸಲು ನಿರ್ಣಯಿಸಲಾಗಿದೆ. ಆದ್ದರಿಂದ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಮೀಸಲಾತಿ ನಿಯಮಗಳು ಹೀಗಿವೆ..

  • ಹೊರಗುತ್ತಿಗೆ ಮೀಸಲಾತಿ ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ.
  • ಪ್ರತಿವರ್ಷ ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆಟಿಪಿಪಿ ಅಧಿನಿಯಮ 1999ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿ ಸಿಬ್ಬಂದಿಯನ್ನು ಪಡೆಯಲು ಷರತ್ತುಗಳನ್ನು ನಮೂದಿಸಬೇಕು.
  • ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇ.33ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳಬೇಕು.
  • ಟೆಂಡರ್ ಅಂಗೀಕರಿಸುವ ಪ್ರಾಧಿಕಾರ ಕಡ್ಡಾಯವಾಗಿ ಹೊರ ಸಂಪನ್ಮೂಲ ಏಜೆನ್ಸಿಯು ಅಂತಿಮಗೊಳಿಸಿದ ಸಿಬ್ಬಂದಿಯ ಪಟ್ಟಿ ಮೀಸಲಾತಿಯಂತೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಜಾತಿ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳನ್ನು ಹೊರ ಸಂಪನ್ಮೂಲ ಏಜೆನ್ಸಿ ಪಡೆದು ನಿರ್ವಹಿಸಬೇಕು. ಟೆಂಡರ್‌ ಅಂಗೀಕರಿಸುವ ಪ್ರಾಧಿಕಾರ ಈ ಬಗ್ಗೆ ಪರಿಶೀಲಿಸಿ ಕಾರ್ಯಾದೇಶವನ್ನು ನೀಡ0ಲು ಕ್ರಮವಹಿಸಬೇಕು. (ಸಿಂಧುತ್ವ ಪ್ರಮಾಣ ಪತ್ರದ ಅಗತ್ಯವಿರುವುದಿಲ್ಲ)

  • ಒಂದು ವೇಳೆ ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ/ ಅರ್ಧದಲ್ಲಿ ಬಿಟ್ಟಿದಲ್ಲಿ ಅಂತಹ ಖಾಲಿ ಉಳಿಯುವ ಸ್ಥಾನವನ್ನು ಭರ್ತಿ ಮಾಡಲು ಅದೇ ಪ್ರವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಒದಗಿಸುವ ಏಜೆನ್ಸಿ ಕ್ರಮ ಕೈಗೊಳ್ಳಬೇಕು.
  • ಯಾವುದೇ ಇಲಾಖೆ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸಬೇಕು.
  • ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಅಭ್ಯರ್ಥಿಯ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 60 ವರ್ಷಗಳಾಗಿರಬೇಕು.
  • ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗವಕಾಶಗಳನ್ನು ಒದಗಿಸುವ ದೃಷ್ಠಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುವುದರಿಂದ ಯಾವುದೇ ಕಾರಣಕ್ಕಾಗಿ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಲು ಪರಿಗಣಿಸುವಂತಿಲ್ಲ.

ಈ ಮೇಲಿನ ನಿಯಮಗಳು ಸರ್ಕಾರದ ಎಲ್ಲಾ ಇಲಾಖೆಗಳು, ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ಮಂಡಳಿಗಳು ಮತ್ತು ವಿಶ್ವವಿದ್ಯಾನಿಲಯಗಳಿಗೆ ಅನ್ವಯಿಸಲಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್ ಡಿ ಅವರು ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...