Homeಕರ್ನಾಟಕಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ

ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಅನುಸೂಚಿತ ಬುಡಕಟ್ಟು ಜನರಿಗೆ ಸಿಗುವ ಸವಲತ್ತುಗಳು ಇತರೆ ಅರಣ್ಯವಾಸಿಗಳಿಗೂ ಸಿಗುವಂತೆ ಮಾಡಲು ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಕೇಂದ್ರ ಸರ್ಕಾರವನ್ನು ಕೋರುವ ನಿರ್ಣಯವನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಂಡಿಸಿದ ನಿರ್ಣಯ ವಿಧಾನಮಂಡಲದ ಉಭಯ ಸದನಗಳಲ್ಲೂ ಗುರುವಾರ ಅಂಗೀಕಾರ ಪಡೆಯಿತು.

ಅನುಸೂಚಿತ ಬುಡಕಟ್ಟುಗಳು ಮತ್ತು ಪಾರಂಪರಿಕ ಅರಣ್ಯವಾಸಿಗಳ (ಅರಣ್ಯ ಹಕ್ಕುಗಳ ಮಾನ್ಯತೆ) ಅಧಿನಿಯಮ 2006ಕ್ಕೆ ತಿದ್ದುಪಡಿ ತರುವ ಮೂಲಕ ಸವಲತ್ತುಗಳನ್ನು ಇತರೆ ಅರಣ್ಯವಾಸಿಗಳಿಗೂ ದೊರಕಿಸಲು ಸಹಕರಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲು ನಿರ್ಣಯ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

2006ರಲ್ಲಿ ಜಾರಿಗೆ ತಂದು, 2008ರಲ್ಲಿ ನಿಯಮಗಳನ್ನು ರೂಪಿಸಿದ ಫಲವಾಗಿ 2005ರ ಡಿಸೆಂಬರ್ 13ಕ್ಕೂ ಮೊದಲು ಜೀವನೋಪಾಯಕ್ಕಾಗಿ ಅರಣ್ಯದಲ್ಲಿ ವಾಸಿಸುತ್ತಿದ್ದ ಅನುಸೂಚಿತ ಬುಡಕಟ್ಟು ಜನರಿಗೆ ಅರಣ್ಯ ಹಕ್ಕು ಲಭಿಸುತ್ತಿದೆ. ಆದರೆ, ಅರಣ್ಯ ಉತ್ಪನ್ನಗಳನ್ನೇ ನಂಬಿಕೊಂಡು ಹಲವು ತಲೆಮಾರುಗಳಿಂದ ಅರಣ್ಯದಲ್ಲಿ ಬದುಕು ಕಟ್ಟಿಕೊಂಡಿರುವ ಇತರ ಸಮುದಾಯದ ಜನರಿಗೆ ಅರಣ್ಯ ಕಾಯ್ದೆಯ ಫಲ ದೊರೆತಿಲ್ಲ. ಅದಕ್ಕೆ ಕಾಯ್ದೆಯಲ್ಲಿನ ಕೆಲ ನಿಯಮಗಳು ಅಡ್ಡಿಯಾಗಿವೆ. ಅರಣ್ಯವಾಸಿಗಳೆಂದು ಸಾಬೀತು ಮಾಡಲು 75 ವರ್ಷಗಳ ಕಾಲ ಅವರ ಪೂರ್ವಜರು ಅರಣ್ಯದಲ್ಲೇ ಇದ್ದರು ಎಂಬುವುದನ್ನು ಸಾಬೀತುಪಡಿಸುವುದು ಅಸಾಧ್ಯ ಎಂದು ಸಚಿವರು ವಿವರಿಸಿದ್ದಾರೆ.

ಅರಣ್ಯ ಹಕ್ಕು ಕಾಯ್ದೆಯ ಕೆಲ ನಿಯಮಗಳಿಂದಾಗಿ ರಾಜ್ಯದ ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡ ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಭೂಮಿ ಕಳೆದುಕೊಂಡ ಶರಾವತಿ ಮುಳುಗಡೆ ಪ್ರದೇಶದ ಸಂತ್ರಸ್ತರಿಗೆ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ‘ಒಂದು ದೇಶ ಒಂದು ಚುನಾವಣೆ, ನೀಟ್‌ ಪರೀಕ್ಷೆ’ ವಿರುದ್ದ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳ | ಆರ್‌ಎಸ್‌ಎಸ್‌ ನಾಯಕನ ಭೇಟಿಯನ್ನು ಒಪ್ಪಿಕೊಂಡ ಎಡಿಜಿಪಿ ಅಜಿತ್ ಕುಮಾರ್ : ವರದಿ

0
ಕೇರಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಎಂ.ಆರ್ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್‌ ನಾಯಕನನ್ನು ಭೇಟಿಯಾಗಿರುವುದು ನಿಜ ಎಂದು ಕೇರಳ ಪೊಲೀಸರ ವಿಶೇಷ ಘಟಕ ಖಚಿತಪಡಿಸಿರುವುದಾಗಿ ವರದಿಯಾಗಿದೆ. ಎಡಿಜಿಪಿ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್‌...