ಇದು ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಹೋರಾಟ. ಬಿಜೆಪಿ ವಿರುದ್ದ ಪ್ರತಿಭಟನೆ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕೇಂದ್ರ ಸರ್ಕಾರದ ಅನುದಾನ ಹಂಚಿಕೆ ತಾರತಮ್ಯ ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ‘ನನ್ನ ತೆರಿಗೆ, ನನ್ನ ಹಕ್ಕು’ ಎಂಬ ಘೋಷ ವಾಕ್ಯದಡಿ ನಡೆದ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಸಿಎಂ ಮಾತನಾಡಿದರು.
ಇದೊಂದು ಐತಿಹಾಸಿಕ ಪ್ರತಿಭಟನೆ. ಕೇಂದ್ರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದೇವೆ. ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ದ ಹೋರಾಡುತ್ತಿದ್ದೇವೆ. ನಾವು ಒಕ್ಕೂಟ ವ್ಯವಸ್ಥೆಯ ವಿರುದ್ದ ಇಲ್ಲ ಎಂದು ಸಿಎಂ ತಿಳಿಸಿದರು.
#WATCH | During their protest against the central government at Delhi's Jantar Mantar, Karnataka CM Siddaramaiah says "Karnataka is number two as far as tax collection is concerned, Maharashtra is number one. As a matter of fact, this year Karnataka is contributing more than Rs… pic.twitter.com/cASQk5TP8e
— ANI (@ANI) February 7, 2024
ಕಾನೂನಾತ್ಮಕವಾಗಿ ಅನುದಾನ ಹಂಚಿಕೆಯಾಗಬೇಕು. ನಮಗೆ ಕೊಡಬೇಕಿದ್ದ ತೆರಿಗೆ ಪಾಲು ಇಳಿಕೆ ಮಾಡಿದ್ದಾರೆ. ಮಾನದಂಡಗಳ ಪ್ರಕಾರ ಅನುದಾನ ನೀಡಿಲ್ಲ. ಬಡ ರಾಜ್ಯಗಳಿಗೆ ಕೊಡುವುದಕ್ಕೆ ತಕರಾರಿಲ್ಲ. ಆದರೆ, ಉತ್ತರದ ರಾಜ್ಯಗಳಿಗೆ, ವಿಶೇಷವಾಗಿ ಉತ್ತರ ಪ್ರದೇಶಕ್ಕೆ ಹೆಚ್ಚು ಅನುದಾನ ಕೊಟ್ಟಿದ್ದಾರೆ. ಹೆಚ್ಚು ತೆರಿಗೆ ಕಟ್ಟುವ ನಮಗೆ ಅನ್ಯಾಯ ಮಾಡಲಾಗಿದೆ. ‘ಹಾಲು ಕೊಡುವ ಹಸುವಿನ ಕೆಚ್ಚಲು ಕೊಯ್ಯಬಾರದು. ಚಿನ್ನದ ಮೊಟ್ಟೆ ಇಡುವ ಕೋಳಿ ಕೊಯ್ಯಬಾರದು’ ಎಂದರು.
ತೆರಿಗೆ ಸಂಗ್ರಹದಲ್ಲಿ ನಾವು ಎರಡನೇ ಸ್ಥಾನದಲ್ಲಿದ್ದೇವೆ. ಎನ್‌ಡಿಆರ್‌ಎಫ್ ಅನುದಾನ ಕೇಳಿದ್ದಕ್ಕೆ ಕೊಟ್ಟಿಲ್ಲ, ಕಾಯುತ್ತಿದ್ದೇವೆ. ಮಹದಾಯಿ ಯೋಜನೆಗೆ ಅನುಮತಿ ನೀಡಿಲ್ಲ. ಉತ್ತರದ ರಾಜ್ಯಗಳು ಜನಸಂಖ್ಯೆ ನಿಯಂತ್ರಣ ಮಾಡಿಲ್ಲ. ದಕ್ಷಿಣದವರು ಜನಸಂಖ್ಯೆ ನಿಯಂತ್ರಣ ಮಾಡಿದ್ದೇ ಶಾಪವಾಯ್ತಾ? ಎಂದು ಸಿಎಂ ಪ್ರಶ್ನಿಸಿದರು.
ಕರ್ನಾಟಕದಿಂದಲೇ ರಾಜ್ಯಸಭೆ ಸದಸ್ಯರಾಗಿರುವ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತರಾಮನ್ ವಿರುದ್ದ ಹರಿಹಾಯ್ದ ಸಿಎಂ, “ಅಮ್ಮ ನಮ್ಮ ದುಡ್ಡು ಕೊಡಮ್ಮ, ಯಾಕೆ ಸುಳ್ಳು ಹೇಳ್ತೀಯ ತಾಯಿ?” ಎಂದು ಕಾಳೆಲೆದರು.
ನಮ್ಮ ಪಾಲು ಕೇಳಲು ಇಲ್ಲಿಗೆ ಬಂದಿದ್ದೇವೆ : ಡಿಕೆಶಿ
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಿ, ಈ ದೇಶಕ್ಕೆ ಅತಿ ಹೆಚ್ಚು ಆದಾಯ ನೀಡುತ್ತಿರುವ ಎರಡನೇ ದೊಡ್ಡ ರಾಜ್ಯ ಕರ್ನಾಟಕ. ನಾವು ನಮ್ಮ ಹಕ್ಕುಗಳನ್ನು ಕೇಳುತ್ತಿದ್ದೇವೆ. ನಮ್ಮ ಪಾಲು ಕೇಳುತ್ತಿದ್ದೇವೆ. ನಾವೆಲ್ಲರೂ ಇಲ್ಲಿ ಕರ್ನಾಟಕದ ಜನರಿಗಾಗಿ ಹೋರಾಡುತ್ತಿದ್ದೇವೆ ಎಂದು ತೋರಿಸಲು ಬಂದಿದ್ದೇವೆ ಎಂದರು.
#WATCH | During their protest against the central government at Delhi's Jantar Mantar, Karnataka Deputy CM DK Shivakumar says "Karnataka is the second biggest state that is giving highest revenue to this country. We are asking for our rights, we are asking for our share…We have… pic.twitter.com/ZcsvVtzLIf
— ANI (@ANI) February 7, 2024
ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಿನ. ಈ ಹೋರಾಟ ಮುಂದಿನ ಪೀಳಿಗೆಗೆ ಒಂದು ಸಾಕ್ಷಿಯಾಗಲಿದೆ. ಇಲ್ಲಿ ನಾನು ಹಾಗೂ ಮುಖ್ಯಮಂತ್ರಿ ಮಾತ್ರ ಬಂದು ಕೂತಿಲ್ಲ. ನಮ್ಮ ರಾಜ್ಯದ ಜನತೆ ಆರಿಸಿರುವ 138 ಶಾಸಕರು, ಪರಿಷತ್ ಸದಸ್ಯರು ಇಲ್ಲಿಗೆ ಬಂದು ರಾಜ್ಯದ ಜನರ ಪರವಾಗಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ಜನರ ಬೆವರು, ತೆರಿಗೆ, ನಮ್ಮ ಹಕ್ಕು. ಕರ್ನಾಟಕಕ್ಕೆ ನ್ಯಾಯ ಸಿಗಬೇಕು, ನಮ್ಮ ಪಾಲಿನ ಹಣ ನಮಗೆ ಸಿಗಬೇಕು ಎಂದು ಈ ಹೋರಾಟ ಮಾಡುತ್ತಿದ್ದೇವೆ. ಜನರ ಋಣ ತೀರಿಸಲು, ಬಡವರಿಗೆ ನ್ಯಾಯ ಒದಗಿಸಲು, ಬರದಲ್ಲಿ ತತ್ತರಿಸಿರುವ ಜನರ ಹಸಿವು ನೀಗಿಸಲು ನಾವಿಲ್ಲಿ ಸೇರಿದ್ದೇವೆ ಎಂದು ತಿಳಿಸಿದರು.
ಇದನ್ನೂ ಓದಿ : ಕೇಂದ್ರದ ಅನುದಾನ ತಾರತಮ್ಯ ಖಂಡಿಸಿ ರಾಜ್ಯ ಸರ್ಕಾರದಿಂದ ‘ದೆಹಲಿ ಚಲೋ’: ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ


