Homeಮುಖಪುಟಕೇಂದ್ರದ ವಿರುದ್ದ 'ದೆಹಲಿ ಚಲೋ' : ರಾಜ್ಯ ಸರ್ಕಾರದಿಂದ 'ನನ್ನ ತೆರಿಗೆ ನನ್ನ ಹಕ್ಕು' ಹೋರಾಟ

ಕೇಂದ್ರದ ವಿರುದ್ದ ‘ದೆಹಲಿ ಚಲೋ’ : ರಾಜ್ಯ ಸರ್ಕಾರದಿಂದ ‘ನನ್ನ ತೆರಿಗೆ ನನ್ನ ಹಕ್ಕು’ ಹೋರಾಟ

- Advertisement -
- Advertisement -

ಇದು ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಹೋರಾಟ. ಬಿಜೆಪಿ ವಿರುದ್ದ ಪ್ರತಿಭಟನೆ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಸರ್ಕಾರದ ಅನುದಾನ ಹಂಚಿಕೆ ತಾರತಮ್ಯ ಖಂಡಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ‘ನನ್ನ ತೆರಿಗೆ, ನನ್ನ ಹಕ್ಕು’ ಎಂಬ ಘೋಷ ವಾಕ್ಯದಡಿ ನಡೆದ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಸಿಎಂ ಮಾತನಾಡಿದರು.

ಇದೊಂದು ಐತಿಹಾಸಿಕ ಪ್ರತಿಭಟನೆ. ಕೇಂದ್ರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದೇವೆ. ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ದ ಹೋರಾಡುತ್ತಿದ್ದೇವೆ. ನಾವು ಒಕ್ಕೂಟ ವ್ಯವಸ್ಥೆಯ ವಿರುದ್ದ ಇಲ್ಲ ಎಂದು ಸಿಎಂ ತಿಳಿಸಿದರು.

ಕಾನೂನಾತ್ಮಕವಾಗಿ ಅನುದಾನ ಹಂಚಿಕೆಯಾಗಬೇಕು. ನಮಗೆ ಕೊಡಬೇಕಿದ್ದ ತೆರಿಗೆ ಪಾಲು ಇಳಿಕೆ ಮಾಡಿದ್ದಾರೆ. ಮಾನದಂಡಗಳ ಪ್ರಕಾರ ಅನುದಾನ ನೀಡಿಲ್ಲ. ಬಡ ರಾಜ್ಯಗಳಿಗೆ ಕೊಡುವುದಕ್ಕೆ ತಕರಾರಿಲ್ಲ. ಆದರೆ, ಉತ್ತರದ ರಾಜ್ಯಗಳಿಗೆ, ವಿಶೇಷವಾಗಿ ಉತ್ತರ ಪ್ರದೇಶಕ್ಕೆ ಹೆಚ್ಚು ಅನುದಾನ ಕೊಟ್ಟಿದ್ದಾರೆ. ಹೆಚ್ಚು ತೆರಿಗೆ ಕಟ್ಟುವ ನಮಗೆ ಅನ್ಯಾಯ ಮಾಡಲಾಗಿದೆ. ‘ಹಾಲು ಕೊಡುವ ಹಸುವಿನ ಕೆಚ್ಚಲು ಕೊಯ್ಯಬಾರದು. ಚಿನ್ನದ ಮೊಟ್ಟೆ ಇಡುವ ಕೋಳಿ ಕೊಯ್ಯಬಾರದು’ ಎಂದರು.

ತೆರಿಗೆ ಸಂಗ್ರಹದಲ್ಲಿ ನಾವು ಎರಡನೇ ಸ್ಥಾನದಲ್ಲಿದ್ದೇವೆ. ಎನ್‌ಡಿಆರ್‌ಎಫ್‌ ಅನುದಾನ ಕೇಳಿದ್ದಕ್ಕೆ ಕೊಟ್ಟಿಲ್ಲ, ಕಾಯುತ್ತಿದ್ದೇವೆ. ಮಹದಾಯಿ ಯೋಜನೆಗೆ ಅನುಮತಿ ನೀಡಿಲ್ಲ. ಉತ್ತರದ ರಾಜ್ಯಗಳು ಜನಸಂಖ್ಯೆ ನಿಯಂತ್ರಣ ಮಾಡಿಲ್ಲ. ದಕ್ಷಿಣದವರು ಜನಸಂಖ್ಯೆ ನಿಯಂತ್ರಣ ಮಾಡಿದ್ದೇ ಶಾಪವಾಯ್ತಾ? ಎಂದು ಸಿಎಂ ಪ್ರಶ್ನಿಸಿದರು.

ಕರ್ನಾಟಕದಿಂದಲೇ ರಾಜ್ಯಸಭೆ ಸದಸ್ಯರಾಗಿರುವ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತರಾಮನ್ ವಿರುದ್ದ ಹರಿಹಾಯ್ದ ಸಿಎಂ, “ಅಮ್ಮ ನಮ್ಮ ದುಡ್ಡು ಕೊಡಮ್ಮ, ಯಾಕೆ ಸುಳ್ಳು ಹೇಳ್ತೀಯ ತಾಯಿ?” ಎಂದು ಕಾಳೆಲೆದರು.

ನಮ್ಮ ಪಾಲು ಕೇಳಲು ಇಲ್ಲಿಗೆ ಬಂದಿದ್ದೇವೆ : ಡಿಕೆಶಿ

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಿ, ಈ ದೇಶಕ್ಕೆ ಅತಿ ಹೆಚ್ಚು ಆದಾಯ ನೀಡುತ್ತಿರುವ ಎರಡನೇ ದೊಡ್ಡ ರಾಜ್ಯ ಕರ್ನಾಟಕ. ನಾವು ನಮ್ಮ ಹಕ್ಕುಗಳನ್ನು ಕೇಳುತ್ತಿದ್ದೇವೆ. ನಮ್ಮ ಪಾಲು ಕೇಳುತ್ತಿದ್ದೇವೆ. ನಾವೆಲ್ಲರೂ ಇಲ್ಲಿ ಕರ್ನಾಟಕದ ಜನರಿಗಾಗಿ ಹೋರಾಡುತ್ತಿದ್ದೇವೆ ಎಂದು ತೋರಿಸಲು ಬಂದಿದ್ದೇವೆ ಎಂದರು.

ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಿನ. ಈ ಹೋರಾಟ ಮುಂದಿನ ಪೀಳಿಗೆಗೆ ಒಂದು ಸಾಕ್ಷಿಯಾಗಲಿದೆ. ಇಲ್ಲಿ ನಾನು ಹಾಗೂ ಮುಖ್ಯಮಂತ್ರಿ ಮಾತ್ರ ಬಂದು ಕೂತಿಲ್ಲ. ನಮ್ಮ ರಾಜ್ಯದ ಜನತೆ ಆರಿಸಿರುವ 138 ಶಾಸಕರು, ಪರಿಷತ್ ಸದಸ್ಯರು ಇಲ್ಲಿಗೆ ಬಂದು ರಾಜ್ಯದ ಜನರ ಪರವಾಗಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ಜನರ ಬೆವರು, ತೆರಿಗೆ, ನಮ್ಮ ಹಕ್ಕು. ಕರ್ನಾಟಕಕ್ಕೆ ನ್ಯಾಯ ಸಿಗಬೇಕು, ನಮ್ಮ ಪಾಲಿನ ಹಣ ನಮಗೆ ಸಿಗಬೇಕು ಎಂದು ಈ ಹೋರಾಟ ಮಾಡುತ್ತಿದ್ದೇವೆ. ಜನರ ಋಣ ತೀರಿಸಲು, ಬಡವರಿಗೆ ನ್ಯಾಯ ಒದಗಿಸಲು, ಬರದಲ್ಲಿ ತತ್ತರಿಸಿರುವ ಜನರ ಹಸಿವು ನೀಗಿಸಲು ನಾವಿಲ್ಲಿ ಸೇರಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ : ಕೇಂದ್ರದ ಅನುದಾನ ತಾರತಮ್ಯ ಖಂಡಿಸಿ ರಾಜ್ಯ ಸರ್ಕಾರದಿಂದ ‘ದೆಹಲಿ ಚಲೋ’: ಜಂತರ್‌ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...