Homeಮುಖಪುಟಪ್ರಸಕ್ತ ಹಣಕಾಸು ವರ್ಷದಲ್ಲಿ 100 ಗ್ರಾಮ ನ್ಯಾಯಾಲಯ ಸ್ಥಾಪಿಸಲಾಗುವುದು: ಎಚ್.ಕೆ.ಪಾಟೀಲ್‌

ಪ್ರಸಕ್ತ ಹಣಕಾಸು ವರ್ಷದಲ್ಲಿ 100 ಗ್ರಾಮ ನ್ಯಾಯಾಲಯ ಸ್ಥಾಪಿಸಲಾಗುವುದು: ಎಚ್.ಕೆ.ಪಾಟೀಲ್‌

- Advertisement -
- Advertisement -

ಪ್ರಸಕ್ತ ಹಣಕಾಸು ವರ್ಷದ ಅಂತ್ಯದೊಳಗೆ 100 ಗ್ರಾಮ ನ್ಯಾಯಾಲಯಗಳನ್ನು ಸರ್ಕಾರ ಸ್ಥಾಪಿಸಲಿದೆ ಎಂದು ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್‌ ಹೇಳಿದ್ದಾರೆ.

ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೆ ಶನಿವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್‌, ಪ್ರಸಕ್ತ ಹಣಕಾಸು ವರ್ಷದ ಅಂತ್ಯದೊಳಗೆ 100 ಗ್ರಾಮ ನ್ಯಾಯಾಲಯಗಳನ್ನು ಸರ್ಕಾರ ಸ್ಥಾಪಿಸಲಿದೆ. ಇದಕ್ಕೆ 2008ರಲ್ಲಿಯೇ ಯೋಜನೆ ಸಿದ್ಧಪಡಿಸಲಾಗಿತ್ತು.

ಇಲ್ಲಿಯವರೆಗೆ ಕೇವಲ ಎರಡು ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. 15 ವರ್ಷಗಳಿಂದ ಪೂರ್ಣ ಪ್ರಮಾಣದ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲು ಸಾಧ್ಯವಾಗಿಲ್ಲ. ಗ್ರಾಮ ನ್ಯಾಯಾಲಯಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದೆ. ಗ್ರಾಮೀಣ ಭಾಗದ ಪ್ರಕರಣಗಳ ತ್ವರಿತ ವಿಲೇವಾರಿಗೆ ಈ ಕ್ರಮ ನೆರವಾಗಲಿದೆ ಎಂದು ಹೇಳಿದ್ದಾರೆ.

ಕಾನೂನು ಅನುಷ್ಠಾನ ವಿಳಂಬವಾದರೆ ಅದನ್ನು ಯಾರೂ ಪ್ರಶ್ನೆ ಮಾಡುತ್ತಿಲ್ಲ. ವಕೀಲರು ಹಾಗೂ‌ ಪತ್ರಕರ್ತರು ಈ ಕುರಿತು ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಬೇಕು. ನ್ಯಾಯಾಧೀಶರು ಕಕ್ಷಿದಾರರ ಗೌರವ ಕಾಪಾಡುವ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದ್ದಾರೆ.

ಗ್ರಾಮ ನ್ಯಾಯಾಲಯ ಸ್ಥಾಪನೆ ಬಗ್ಗೆ ವ್ಯತಿರಿಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸಿದ ಸಂಸದ ಸಂಗಣ್ಣ ಕರಡಿ ಈಗ ತಂತ್ರಜ್ಞಾನ ಸಾಕಷ್ಟು ಮುಂದುವರಿದಿದೆ. ತಾಲ್ಲೂಕು ಹಂತದಲ್ಲಿ ನ್ಯಾಯಾಲಯಗಳು ಇವೆ. ಆದ್ದರಿಂದ ಗ್ರಾಮ ನ್ಯಾಯಾಲಯಗಳ ಸ್ಥಾಪನೆ ಅಗತ್ಯವಿಲ್ಲ. ಈ ಕುರಿತು ಕಾನೂನು ಸಚಿವರು ಪರಿಶೀಲಿಸಬೇಕು ಎಂದು ಹೇಳಿದ್ದಾರೆ.

ಇದನ್ನು ಓದಿ: ಮಧ್ಯಪ್ರದೇಶ: ಪಕ್ಷದ ಅಭ್ಯರ್ಥಿಗಳ ವಿರುದ್ಧ ಸ್ಪರ್ಧೆ; 39 ನಾಯಕರು ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...