Homeಮುಖಪುಟಅಕ್ರಮ ಆಸ್ತಿ ಪ್ರಕರಣ: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ರಾಜ್ಯ ಸರ್ಕಾರ

ಅಕ್ರಮ ಆಸ್ತಿ ಪ್ರಕರಣ: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ರಾಜ್ಯ ಸರ್ಕಾರ

- Advertisement -
- Advertisement -

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯನ್ನು ಹಿಂಪಡೆಯುವ ಪ್ರಸ್ತಾವನೆಗೆ ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು ಈ ಬಗ್ಗೆ ಸಚಿವ ಹೆಚ್ ಕೆ ಪಾಟೀಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಡಿಕೆ ಶಿವಕುಮಾರ್ ಪ್ರಕರಣದ ಸಂಬಂಧ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಡ್ವೊಕೇಟ್ ಜನರರಲ್ ಆಗಿದ್ದ ಪ್ರಭುಲಿಂಗ ನಾವಡಗಿ ವರದಿ ಆಧರಿಸಿ ಹಾಲಿ ಅಡ್ವೊಕೇಟ್ ಜನರಲ್ ಅವರಿಂದ ಅಭಿಪ್ರಾಯ ಪಡೆಯಲಾಗಿತ್ತು. ಈ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. ಹಾಲಿ ಎಜಿ ಜನರಲ್ ಶಶಿಕಿರಣ್ ಶೆಟ್ಟಿ ಅಭಿಪ್ರಾಯ ಪರಿಗಣಿಸಿ, ಸರ್ಕಾರ ಅನುಮತಿ ವಾಪಸ್ ಪಡೆಯಲು ನಿರ್ಧರಿಸಿದೆ.

ಕೋರ್ಟ್‌ನಲ್ಲಿ ಸಿಬಿಐ ಪ್ರಕರಣದ ವಿಚಾರಣೆ ಬಾಕಿ ಇದೆ. ಹೀಗಾಗಿ ಕೇವಲ ತನಿಖೆಗೆ ಸಿಬಿಐಗೆ ನೀಡಿರುವ ಅನುಮತಿ ಮಾತ್ರ ಹಿಂಪಡೆಯುವುದಕ್ಕೆ ಸರ್ಕಾರಕ್ಕೆ ಸಾಧ್ಯತೆ ಇದೆ.

”ಕಳೆದ ಸರ್ಕಾರ (ಬಿಜೆಪಿ) ತೆಗೆದುಕೊಂಡ ತಪ್ಪು ನಿರ್ಧಾರವನ್ನು ಸಚಿವ ಸಂಪುಟವು ಬಹಳ ಎಚ್ಚರಿಕೆಯಿಂದ ಪರಿಗಣಿಸಿದೆ. ಕಳೆದ ಸರ್ಕಾರದ ಅಡ್ವೊಕೇಟ್ ಜನರಲ್ ಮತ್ತು ನಮ್ಮ ಅಡ್ವೊಕೇಟ್ ಜನರಲ್ ನೀಡಿದ ಅಭಿಪ್ರಾಯವನ್ನು ನಾವು ಪರಿಗಣಿಸಿದ್ದೇವೆ” ಎಂದು ಸಚಿವ ಹೆಚ್ ಕೆ ಪಾಟೀಲ್ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

”ಹಿಂದಿನ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಕಾನೂನು ಬದ್ಧವಾಗಿಲ್ಲ ಎಂಬ ನಿರ್ಧಾರಕ್ಕೆ ಸಚಿವ ಸಂಪುಟ ಬಂದಿದೆ… ಕಳೆದ ಸರ್ಕಾರ ಕೈಗೊಂಡ ನಿರ್ಧಾರ ಕಾನೂನು ಬದ್ಧವಾಗಿಲ್ಲ ಎಂಬುದು ನಮಗೆ ಗೊತ್ತಿದೆ” ಎಂದು ಅವರು ಹೇಳಿದರು.

ಆದಾಯ ಮೀರಿದ ಆಸ್ತಿಗೆ ಸಂಬಂಧಿಸಿದಂತೆ ಇದುವರೆಗೆ 577 ಪ್ರಕರಣಗಳು ದಾಖಲಾಗಿವೆ. ಆದರೆ, ಸದ್ಯಕ್ಕೆ ಒಂದೇ ಒಂದು ಪ್ರಕರಣವನ್ನು ಸಿಬಿಐ ತನಿಖೆ ನಡೆಸಿಲ್ಲ. ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ.

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಇದೇ ರೀತಿಯ ಆರೋಪಗಳನ್ನು ಎದುರಿಸಿದ್ದರು ಆದರೆ ಬಿಜೆಪಿ ಸರ್ಕಾರ ಅವರ ಪ್ರಕರಣವನ್ನು ಲೋಕಾಯುಕ್ತಕ್ಕೆ ವರ್ಗಾಯಿಸಲು ನಿರ್ಧರಿಸಿತ್ತು ಎಂದು ಶಿವಕುಮಾರ್ ಅವರ ಕಚೇರಿ ತಿಳಿಸಿದೆ.

2018ರಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ, ಆ ಬಳಿಕ ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 2019ರಲ್ಲಿ ಕೇಂದ್ರ ತನಿಖಾ ಸಂಸ್ಥೆಗೆ ಪ್ರಕರಣವನ್ನು ಹಸ್ತಾಂತರಿಸಲು ಒಪ್ಪಿಕೊಂಡರು. ಶಿವಕುಮಾರ್ ವಿರುದ್ಧ ಕೇಂದ್ರೀಯ ಸಂಸ್ಥೆ ತನಿಖೆ ನಡೆಸುತ್ತಿದೆ. ಇದಕ್ಕೂ ಮುನ್ನ ಆದಾಯ ತೆರಿಗೆ ಇಲಾಖೆ ಇವರ ವಿರುದ್ಧ ಶೋಧಕಾರ್ಯ ನಡೆಸಿತ್ತು.

ಶಿವಕುಮಾರ್ ಅವರು ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಿಸಲು ಸಿಬಿಐಗೆ ಹಿಂದಿನ ಸರ್ಕಾರ ನೀಡಿದ್ದ ಅನುಮತಿಯ ವಿರುದ್ಧ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ನವೆಂಬರ್ 29ಕ್ಕೆ ಮುಂದೂಡಿದೆ.

ಇದನ್ನೂ ಓದಿ: ರಾಹುಲ್ ಗಾಂಧಿ ಹೋರಾಟಗಾರ, ಆಯೋಗದ ನೋಟಿಸ್‌ಗೆ ಉತ್ತರ ನೀಡುತ್ತಾರೆ: ಸುಪ್ರಿಯಾ ಸುಳೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...