Homeಕರ್ನಾಟಕಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

’ರಾತ್ರಿ 7 ಗ್ರಾಮಗಳ ಮೇಲ್ಜಾತಿಯ ಸುಮಾರು 200 ರಿಂದ 300 ಮಂದಿ ಸೇರಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಸಭೆ ನಡೆಸಿದ್ದಾರೆ’

- Advertisement -
- Advertisement -

ಕಳೆದ 8 ತಿಂಗಳ ಹಿಂದೆ ಜಾತಿ ಕಾರಣಕ್ಕೆ ದಲಿತರಿಗೆ ಹೊಟೇಲ್‌ ಒಳಗೆ ಪ್ರವೇಶ ನೀಡದೇ ಹೊರ ಕಳುಹಿಸಿದ್ದ ಅದೇ ಗ್ರಾಮದಲ್ಲಿ ದೇವಾಲಯ ಪ್ರವೇಶಿಸುವ ಮೂಲಕ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರಿನ ದಲಿತರು ಹೊಸ ಇತಿಹಾಸ ಬರೆದಿದ್ದಾರೆ.

ಮೇಲ್ಜಾತಿ ಮತ್ತು ದಲಿತರ ಜೊತೆಗೆ ತಹಶೀಲ್ದಾರ್‌ ಮಾರುತಿ ಸಭೆ ನಡೆಸಿದ್ದಾರೆ. ಬಳಿಕ ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಭೀಮ್ ಆರ್ಮಿ ಸಂಘಟನೆ, ಮುಜರಾಯಿ ಇಲಾಖೆ ಸಮ್ಮುಖದಲ್ಲಿ ದಿಂಡಗೂರು ಗ್ರಾಮದ ದಲಿತರು ಗ್ರಾಮದ ದೇವಾಲಯಗಳಿಗೆ ಮೊದಲ ಬಾರಿಗೆ ಪ್ರವೇಶ ಪಡೆದಿದ್ದಾರೆ.

ಆದರೆ, ದಲಿತರ ದೇವಾಲಯ ಪ್ರವೇಶ ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥತಿಗೆ ಕಾರಣವಾಗಿದೆ. ಯಾವಾಗ ಏನು ಬೇಕಾದರೂ ನಡೆಯಬಹುದು, ಯಾವ ಘಟನೆ ಕೂಡ ನಡೆಯಬಹುದು ಎಂಬ ಭಯದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಭೀಮ್ ಆರ್ಮಿ ಸಂಘಟನೆಯ ನಟರಾಜ್ ದಿಂಡಗೂರು,  “ನಮಗೆ ಮೇಲ್ನೊಟಕ್ಕೆ, ಕಾನೂನು ರೀತಿ ಮಾತ್ರ ದೇವಾಲಯ ಪ್ರವೇಶ ದೊರಕಿದೆ. ದೇವಾಲಯ ಪ್ರವೇಶಕ್ಕೆ ಯಾವುದೇ ತಕರಾರು ಇಲ್ಲ ಎಂದ ಮೇಲ್ಜಾತಿಯವರು ಒಳಗೊಳಗೆ ಬೇರೆ ಕ್ರಮ ಕೈಗೊಳ್ಳಲು ತೊಡಗಿಕೊಂಡಿದ್ದಾರೆ. ರಾತ್ರಿ ಮೇಲ್ಜಾತಿಯವರ ಸ್ಥಳದಲ್ಲಿ ಸುತ್ತ 7 ಗ್ರಾಮಗಳ ಸುಮಾರು 200 ರಿಂದ 300 ಮಂದಿ ಸೇರಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಸಭೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಮಂಗಳವಾರ ಶಾಂತಿ ಸಭೆ ನಡೆಸುವ ಮುನ್ನವೇ ತಹಶೀಲ್ದಾರ್‌ ಮೇಲ್ಜಾತಿ ಸಮುದಾಯದ ಮುಖಂಡರ ಜೊತೆಗೆ ಸಭೆ ನಡೆಸಿ, ಸುಮ್ಮನೆ ದೇವಾಲಯ ಪ್ರವೇಶ ನಿರಾಕರಿಸಿ ಕೆಟ್ಟವರಾಗಬೇಡಿ. ಕಾನೂನಿನ ಪ್ರಕಾರ ಅವರು ದೇವಸ್ಥಾನ ಪ್ರವೇಶಿಸುತ್ತಾರೆ. ನೀವೂ ಒಪ್ಪದಿದ್ದರೂ ಅವರು ದೇವಾಲಯಕ್ಕೆ ನುಗ್ಗುತ್ತಾರೆ ಎಂದು ತಿಳಿಸಿ ಅವರನ್ನು ಒಪ್ಪಿಸಿದ್ದಾರೆ. ಇದರಿಂದ ಅವರು ಒಲ್ಲದ ಮನಸ್ಸಿನಿಂದ ಸಭೆಯಲ್ಲಿ ಯಾವುದೇ ತಕರಾರಿಲ್ಲ ಎಂದು ತಲೆಯಾಡಿಸಿದ್ದಾರೆ” ಎಂದು ನಟರಾಜ್ ದಿಂಡಗೂರು ಹೇಳಿದರು.

ದೇವಸ್ಥಾನ ಪ್ರವೇಶದ ನಂತರದ ಘಟನೆ ಬಗ್ಗೆ ಮಾತನಾಡಿರುವ ನಟರಾಜ್, “ಊರಿನಲ್ಲಿ ಈಗ ಪರಿಸ್ಥಿತಿ ಭೇರೆಯೇ ಇದೆ. ಊರಿನ ಮೇಲ್ಜಾತಿ ಸಮುದಾಯದ ಜನಪ್ರತಿನಿಧಿಗಳು ನಮ್ಮ ಜೊತೆಗೆ ಯಾವುದೇ ವ್ಯವಹಾರ, ಸಂಬಂಧ ಬೇಡ ಎಂದಿದ್ದಾರೆ. ಪರಿಸ್ಥಿತಿ ನೋಡಿದರೆ ಆತಂಕವಾಗುತ್ತಿದೆ. ಯಾವಾಗ ಏನಾದರೂ ಜರುಗಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, “ರಕ್ಷಣೆ ಬೇಕು ಎಂದು ಮನವಿ ಮಾಡಿದ್ದು ನಮ್ಮ ಸಮುದಾಯದವರು. ಪೊಲೀಸರು ನಮ್ಮ ಕೇರಿಗಳಲ್ಲಿ ಇರಬೇಕಿತ್ತು. ಆದರೆ ಕಳೆದೊಂದು ವಾರದಿಂದ ಅವರೆಲ್ಲಾ ಮೇಲ್ಜಾತಿಯವರ ಕೇರಿಗಳಲ್ಲಿ ನಿಂತಿದ್ದಾರೆ. ಇಲ್ಲಿ ಅವರು ಯಾರಿಗೆ ರಕ್ಷಣೆ ನೀಡುತ್ತಿದ್ದಾರೆ ಎಂಬುದೇ ಪ್ರಶ್ನೆಯಾಗಿದೆ” ಎಂದು ಪ್ರಶ್ನಿಸಿದ್ದಾರೆ.

ದೇವಾಲಯ ಪ್ರವೇಶದಿಂದ ಏನಾದರೂ ಬದಲಾವಣೆಯಾಗಿದೆ ಎಂಬುದಕ್ಕೆ, “ಇಷ್ಟು ದಿನ ನಮಗೆ ಅಲ್ಲಿಗೆ ಹೋಗಬೇಕು ಎಂಬುದು ಯಾವತ್ತು ಮನಸ್ಸಿಗೆ ಬಂದಿರಲಿಲ್ಲ. ನಮಗೆ ದೇವಸ್ಥಾನಕ್ಕೆ ಹೋಗುವುದು, ಪೂಜೆ ಮಾಡುವುದು, ಮೌಢ್ಯವನ್ನು ಮೆತ್ತಿಕೊಳ್ಳುವ ಮನಸ್ಥಿತಿ ಇರಲಿಲ್ಲ. ಅದರೆ, ಸಮಾನತೆ, ಅಸ್ಪೃಶ್ಯತೆ ನಿವಾರಣೆಗಾಗಿ ಈ ಕ್ರಮ ಅಗತ್ಯವಾಗಿತ್ತು. ಮೊದಲ ದೇವಾಲಯದ ಹೊರಗಡೆಯೇ ಪೂಜೆ ಮಾಡಿಕೊಳ್ಳುವುದು, ನಮ್ಮ ಹೆಣ್ಣು ಮಕ್ಕಳು  ಆರತಿ ತೆಗೆದುಕೊಂಡು ಹೋದರೆ ನಮ್ಮನ್ನು ಬೇರೆ ಗುಂಪು ಮಾಡುವುದು ಇದೆಲ್ಲ ನಡೆಯುತ್ತಿತ್ತು. ಆದರೆ, ಸಮುದಾಯದ ಹಿರಿಯರ ಆಸೆ ಇದಾಗಿತ್ತು. ಎಲ್ಲಾ ಸರಿ ಇದೆ ಅಂತಾ ಮೇಲ್ನೋಟಕ್ಕೆ ಅನಿಸುತ್ತಿದೆ. ಆದರೆ ಒಳಗಡೆ ಯಾವುದೂ ಸರಿಯಿಲ್ಲ” ಎಂದು ಹೇಳಿದ್ದಾರೆ.

ಘಟನೆಯ ಹಿನ್ನೆಲೆ: 

ಕಳೆದ 8 ತಿಂಗಳ ಹಿಂದೆ ರಂಗಭೂಮಿಯಲ್ಲಿ ಸಕ್ರಿಯರಾದ, ದಿಂಡಗೂರಿನ ಮಕ್ಕಳಿಗೆ ನಾಟಕಗಳನ್ನು ಕಲಿಸುತ್ತಿದ್ದ ನಿನಾಸಂ ಕಲಾವಿದ ಸಂತೋಷ್ ಎನ್ನುವವರು ದಿಂಡಗೂರಿನ ಹೋಟೆಲ್‌ಗೆ ತೆರಳಿದ್ದಾರೆ. ಆದರೆ, ಜಾತಿ ಕಾರಣಕ್ಕೆ ಅವರಿಗೆ ಹೊಟೇಲ್ ಪ್ರವೇಶ ನಿರಾಕರಿಸಲಾಗಿದೆ. ಇದರಿಂದ ಅವಮಾನಕ್ಕೆ ಒಳಗಾದ ಅವರು ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ.

ಅವರಿಗೆ ನ್ಯಾಯ ಸಿಗದ ಹಿನ್ನೆಲೆ ಭೀಮ್ ಆರ್ಮಿ ಸಂಘಟನೆ ಈ ಅಸ್ಪೃಶ್ಯತೆ ನಿವಾರಣೆ ಮಾಡಬೇಕು ಎನ್ನುವ ಕಾರಣಕ್ಕೆ ದೇವಾಲಯ ಪ್ರವೇಶಿಸಲು ನಿರ್ಧರಿಸಿದೆ. ಕಳೆದ ವಾರ ಭೀಮ್ ಆರ್ಮಿ ಸಂಘಟನೆಯ ಕಾರ್ಯಕರ್ತರು, ಹೊಟೇಲ್ ಪ್ರವೇಶ ನಿರಾಕರಣೆಯನ್ನು ಉಲ್ಲೇಖಿಸಿ,  ಅಸ್ಪೃಶ್ಯತೆ ನಿವಾರಣೆಗಾಗಿ ತಾವು ದೇವಾಲಯ ಪ್ರವೇಶಿಸುತ್ತಿರುವುದಾಗಿಯೂ ತಮಗೆ ರಕ್ಷಣೆ ನೀಡಬೇಕು ಎಂದು ತಹಶೀಲ್ದಾರ್‌, ಪೊಲೀಸ್ ಅಧಿಕಾರಿ, ಮುಜರಾಯಿ ಇಲಾಖೆ, ಸಮಾಜಕಲ್ಯಾಣ ಇಲಾಖೆಗೆ ಮನವಿ ಸಲ್ಲಿಸಿದ್ದರು.

ಇದಾಗಿ ಒಂದು ವಾರಕ್ಕೆ ಎಲ್ಲಾ ಅಧಿಕಾರಿಗಳು ಗ್ರಾಮಕ್ಕೆ ಶಾಂತಿಸಭೆ ಮಾಡಲು ಬಂದಿದ್ದರು. ಆದರೆ, ಮೇಲ್ಜಾತಿ ಜನರು ಯಾರು ಬರದ ಕಾರಣ ಸಭೆ ನಡೆದಿರಲಿಲ್ಲ. ಮತ್ತೆ ಮುಂದಿನ ವಾರ ಸಭೆ ನಡೆಸುವುದಾಗಿ ತಿಳಿಸಿದ್ದರು. ಇದರ ಪ್ರಕಾರ ಮಂಗಳವಾರ (ಸೆ.28) ರಂದು ಎರಡು ಸಮುದಾಯದ ಜನರ ನಡುವೆ ಶಾಂತಿಸಭೆ ನಡೆಸಿ, ಜಿಲ್ಲಾಡಳಿತ, ಪೊಲೀಸರ ಸಮ್ಮುಖದಲ್ಲಿ ದಲಿತರು ಗ್ರಾಮದ ದೇವಾಲಯಗಳ ಪ್ರವೇಶ ಮಾಡಿದ್ದಾರೆ.

ಗ್ರಾಮದೇವತೆ ಸತ್ಯಮ್ಮ, ಕೇಶವಸ್ವಾಮಿ ದೇವಾಲಯ, ಮಲ್ಲೇಶ್ವರ ದೇವಾಲಯ, ಬಸವಣ್ಣ ದೇವಾಲಯ ಸೇರಿದಂತೆ ಗ್ರಾಮದಲ್ಲಿನ ದೇವಾಲಯಗಳಿಗೆ ಪ್ರವೇಶಿಸಿ, ಪೂಜೆ ಸಲ್ಲಿಸಿದ್ದಾರೆ.

ಒಂದೆಡೆ ಮಗುವೊಂದು ಆಕಸ್ಮಿಕವಾಗಿ ದೇವಾಲಯ ಪ್ರವೇಶಿಸಿದಕ್ಕೆ ದಂಡ ಹಾಕಿದ ಘಟನೆಯಿಂದ ರಾಜ್ಯವೇ ತಲೆತಗ್ಗಿಸುವಂತಾಗಿದ್ದ ಕೆಲ ದಿನಗಳಲ್ಲೇ ದಲಿತರು ದೇವಾಲಯ ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದಾರೆ. ಆದರೆ, ಸ್ವಾತಂತ್ಯ್ರ ಬಂದು 75 ವರ್ಷಗಳ ನಂತರವೂ ಪೊಲೀಸರ ಭದ್ರತೆಯಲ್ಲಿ ದಲಿತರು ದೇವಾಲಯ ಪ್ರವೇಶಿಬೇಕಾಗಿರುವುದು ದುರಂತವೇ ಸರಿ.

ದಲಿತರು ಸಂವಿಧಾನತ್ಮಕವಾಗಿ ದೇವಾಲಯ ಪ್ರವೇಶಿಸಿದ್ದಾರೆ.. ಈಗ ಅವರಿಗೆ ರಕ್ಷಣೆ ನೀಡಿ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯುವ ಜವಾಬ್ದಾರಿ ತಾಲ್ಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆಯದ್ದಾಗಿದೆ. ಅಲ್ಲಿನ ಸವರ್ಣೀಯರು ಸಹ ಇದನ್ನು ಸಮಾನತೆಯ ನೆಲೆಯಲ್ಲಿ ನೋಡಬೇಕೆ ಹೊರತು ದ್ವೇಷದಿಂದಲ್ಲ.. ಈ ಊರು ದೇವಾಲಯ ಪ್ರವೇಶ ಮತ್ತು ಸಮಾನತೆಯ ವಿಚಾರದಲ್ಲಿ ರಾಜ್ಯಕ್ಕೆ ಮಾದರಿಯಾಗಬೇಕಿದೆ.

ವಿಡಿಯೋ ನೋಡಿ..


ಇದನ್ನೂ ಓದಿ: ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...