Homeಕರ್ನಾಟಕಹಾಸನ: ವರದಕ್ಷಿಣೆ ಕಿರುಕುಳಕ್ಕೆ ಮದುವೆಯಾದ ಮೂರೇ ವಾರಕ್ಕೆ ಯುವತಿ ಬಲಿ

ಹಾಸನ: ವರದಕ್ಷಿಣೆ ಕಿರುಕುಳಕ್ಕೆ ಮದುವೆಯಾದ ಮೂರೇ ವಾರಕ್ಕೆ ಯುವತಿ ಬಲಿ

- Advertisement -
- Advertisement -

ವರದಕ್ಷಿಣೆ ಈ ನಾಗರಿಕ ಸಮಾಜದ ಬಹುದೊಡ್ಡ ಕಪ್ಪುಚುಕ್ಕೆಯಾಗಿದೆ. ಜಗತ್ತು ಎಷ್ಟೇ ಮುಂದುವರೆದರೂ ಈ ಅನಿಷ್ಟ ಸಂಪ್ರದಾಯ ಇನ್ನೂ ಜೀವಂತವಾಗಿವೆ. ವರದಕ್ಷಿಣೆಯ ಸ್ವರೂಪ ದಿನದಿಂದ ದಿನಕ್ಕೆ ಬದಲಾಗುತ್ತಿದೆಯೇ ಹೊರತು. ಕೊನೆಗೊಳ್ಳುತ್ತಿಲ್ಲ. ವರದಕ್ಷಿಣೆ ಕಿರುಕುಳಕ್ಕೆ ಮಹಿಳೆಯರು ಬಲಿಯಾಗುತ್ತಲೇ ಇದ್ದಾರೆ. ಇದೇ ದೌರ್ಜನ್ಯದಿಂದಾಗಿ 22 ವರ್ಷದ ಯುವತಿಯೊಬ್ಬರು ಬಲಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದ ಸಲೀಂ ನಗರದಲ್ಲಿ ಫಿಜಾ ಖನಂ ಎಂಬ ಯುವತಿ ಮದುವೆಯಾದ ಮೂರೇ ವಾರದಲ್ಲಿ ಸಾವನ್ನಪ್ಪಿದ್ದಾರೆ. ಆಕೆಯ ಪೋಷಕರು ವರದಕ್ಷಿಣೆ ಕಿರುಕುಳ ನೀಡಿ ತಮ್ಮ ಮಗಳನ್ನು ಗಂಡನ ಮನೆಯವರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಹೊಳಲಗೋಡು ಗ್ರಾಮದ ಯುವತಿ ಫಿಜಾ ಖಾನಂ ಹಾಗೂ ಹಾಸನದ ಶಾಗಿಲ್ ಅಹಮದ್, ಇಬ್ಬರಿಗೂ ಡಿಸೆಂಬರ್ 2 ರಂದು ವಿವಾಹವಾಗಿತ್ತು. ಆದರೆ, ಮದುವೆಯಾದ 19ನೇ ದಿನಕ್ಕೆ ಫಿಜಾ ಖಾನಂ ಗಂಡನ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ವರದಕ್ಷಿಣೆ ಅನಿಷ್ಟ ಕೊನೆಗೊಳಿಸಲು ಕಾನೂನುಗಳಿದ್ದರೂ ಕೂಡ, ಜನರು ತಮ್ಮೊಳಗೆ ಬದಲಾಗಬೇಕು: ಸುಪ್ರೀಂಕೋರ್ಟ್

’ತಮ್ಮ ಮಗಳು ಸ್ನಾನಕ್ಕೆ ಹೋದಾಗ ಗ್ಯಾಸ್ ಗೀಸರ್ ಆನ್ ಮಾಡಿ, ಬಾಗಿಲು ಮುಚ್ಚಿ ಕೊಲೆ ಮಾಡಲಾಗಿದೆ’ ಎಂದು ಫಿಜಾ ಖಾನಂ ಪೋಷಕರು ಆರೋಪಿಸಿದ್ದಾರೆ. ಹಾಸನದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಿಜಾ ಖಾನಂ ಅವರು ಪತಿ ಶಾಗಿಲ್ ಅಹಮದ್ ಸೇರಿದಂತೆ ಆತನ ಸಹೋದರರು ಮತ್ತು ಶಾಗಿಲ್‌ನ ತಾಯಿಯ ವಿರುದ್ಧ ವರದಕ್ಷಿಣೆ ಕಿರುಕುಳ, ವರದಕ್ಷಿಣೆ ಸಾವುಗಳಿಗೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ನಡೆಯುತ್ತಿದೆ.

ವರದಕ್ಷಿಣೆ ಎಂಬ ಸಾಮಾಜಿಕ ಅನಿಷ್ಟ ಕೊನೆಗೊಳಿಸಲು ಕಾನೂನುಗಳು ಮುಖ್ಯವಾಗಿದ್ದರೂ, ಜನರು ಸಹ ಒಳಗಿನಿಂದ ಬದಲಾಗಬೇಕು ಮತ್ತು ಮಹಿಳೆಯರನ್ನು ಗೌರವದಿಂದ ನಡೆಸಿಕೊಳ್ಳುವುದನ್ನು ಕಲಿಯಬೇಕು ಎಂದು ಸುಪ್ರೀಂಕೋರ್ಟ್ ಡಿಸೆಂಬರ್ 6 ರಂದು ಹೇಳಿದೆ.

“ಕಾನೂನುಗಳು ಮುಖ್ಯ, ಆದರೆ ಬದಲಾವಣೆಯು ಜನರ ಒಳಗಿನಿಂದ ಬರಬೇಕು. ಮದುವೆಯ ಮೂಲಭೂತ ಸಾಮಾಜಿಕ ಮೌಲ್ಯದ ಬಗ್ಗೆ ತಿಳುವಳಿಕೆ ಇರಬೇಕು. ಒಂದು ಕುಟುಂಬಕ್ಕೆ ಬರುವ ಮಹಿಳೆಯನ್ನು ನಾವು ಹೇಗೆ ನಡೆಸಿಕೊಳ್ಳುತ್ತೇವೆ ಮತ್ತು ಮಹಿಳೆಯ ಸಾಮಾಜಿಕ ಪ್ರಾಮುಖ್ಯತೆಯನ್ನು ಹೇಗೆ ಪರಿಗಣಿಸುತ್ತೇವೆ ಎಂಬುದು ಕೂಡ ಮುಖ್ಯ” ಎಂದು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದರು.


ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...