Homeಮುಖಪುಟಪ್ರಭಾಕರ್‌ ಭಟ್‌ನ್ನು ಬಂಧಿಸಲ್ಲ, ಅವರ ಹೇಳಿಕೆ ಬಗ್ಗೆ ತನಿಖೆ ನಡೆಸಲಾಗುವುದು: ಹೈಕೋರ್ಟ್‌ಗೆ ತಿಳಿಸಿದ ಸರಕಾರ

ಪ್ರಭಾಕರ್‌ ಭಟ್‌ನ್ನು ಬಂಧಿಸಲ್ಲ, ಅವರ ಹೇಳಿಕೆ ಬಗ್ಗೆ ತನಿಖೆ ನಡೆಸಲಾಗುವುದು: ಹೈಕೋರ್ಟ್‌ಗೆ ತಿಳಿಸಿದ ಸರಕಾರ

- Advertisement -
- Advertisement -

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿದೆ. ಜಾಮೀನು ಅರ್ಜಿ ವಿಚಾರಣೆ ವೇಳೆ ಪ್ರಭಾಕರ್‌ ಭಟ್‌ ಹೇಳಿಕೆ ಬಗ್ಗೆ ತನಿಖೆ ನಡೆಸಲಾಗುವುದು, ಅವರನ್ನು ಬಂಧಿಸುವುದಿಲ್ಲ ಎಂದು ಸರಕಾರ ಹೈಕೋರ್ಟ್‌ಗೆ ಹೇಳಿದೆ.

ಡಿ.24ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮ ಜಯಂತಿ ಅಂಗವಾಗಿ ನಡೆದ ‘ಸಂಕೀರ್ತನಾ ಯಾತ್ರೆ’ಯಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಭಾಕರ ಭಟ್ ವಿರುದ್ದ ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್ ಚಿಕ್ಕನೇರಳೆ ಶ್ರೀರಂಗಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಪ್ರಭಾಕರ ಭಟ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

ಎಫ್ಐಆರ್ ದಾಖಲಾಗುತ್ತಿದ್ದಂತೆ, ಹೈಕೋರ್ಟ್ ನಲ್ಲಿ ಮೊಕದ್ದಮೆ ರದ್ದತಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ವೇಳೆ ಪ್ರಭಾಕರ್ ಭಟ್ ಪರ ವಕೀಲರು, ಇದು ರಾಜಕೀಯ ಪ್ರೇರಿತ ದೂರು. ಆರೋಪಿ ವಯೋ ವೃದ್ದರು. ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರನ್ನು ಬಂಧಿಸುವ ಸಾಧ್ಯತೆಯಿದೆ. ಹಾಗಾಗಿ ಎಫ್ಐಆರ್ ಗೆ ತಡೆ ನೀಡಬೇಕು ಎಂದು ವಾದ ಮಂಡಿಸಿದ್ದರು.

ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ದೂರುದಾರರ ಪರ ವಕೀಲ ಎಸ್ ಬಾಲನ್, ಆರೋಪಿ ಹೇಳಿಕೆಯನ್ನು ನ್ಯಾಯಾಲಯ ಗಮನಿಸಬೇಕು. ಮುಸ್ಲಿಂ ಮಹಿಳೆಯರಿಗೆ ಒಬ್ಬ ಗಂಡ ಅಲ್ಲ. ದಿನಕ್ಕೊಬ್ಬ ಗಂಡಂದಿರು ಎಂದಿದ್ದಾರೆ. ಇದು ಸಮಾಜದಲ್ಲಿ ಅಶಾಂತಿ ಹುಟ್ಟಿಸುತ್ತಿದೆ. ಎಲ್ಲಾ ಕಡೆ ಪ್ರತಿಭಟನೆಗಳು ನಡೆಯುತ್ತಿದೆ. ಆರೋಪಿ ಈ ಹಿಂದೆಯೂ ಇಂತಹ ಕೃತ್ಯ ಮಾಡಿದ್ದಾನೆ.  ಸುಪ್ರಿಂಕೋರ್ಟ್ ಈ ರೀತಿ ದ್ವೇಷಭಾಷಣ ಮಾಡುವವರ ವಿರುದ್ದ ಹಲವು ಜಡ್ಜ್ ಮೆಂಟ್ ಕೊಟ್ಟಿದೆ. ಈಗ ಆರೋಪಿ ಬಗ್ಗೆ ಹೆಚ್ಚಿನ ತನಿಖೆ ಆಗಬೇಕಿದೆ. ಪೊಲೀಸರು ಹಾಕಿರುವ ಎಲ್ಲಾ ಸೆಕ್ಷನ್‌ಗಳು ಸರಿಯಾಗಿವೆ. ಈ ಪ್ರಕರಣದ ಸಂಪೂರ್ಣ ತನಿಖೆ ನಡೆಯಬೇಕು. ಹಾಗಾಗಿ ಕಾನೂನು ಅದರ ಕೆಲಸ ಮಾಡಲಿ ಎಂದು ಹೇಳಿದ್ದಾರೆ.

ಸರಕಾರದ ಪರವಾಗಿ ಹಾಜರಿದ್ದ ವಕೀಲರು, ಕಲ್ಲಡ್ಕ ಪ್ರಭಾಕರ್‌ ಭಟ್‌ ಹೇಳಿಕೆಯ ಬಗ್ಗೆ ತನಿಖೆ ನಡೆಸಲಾಗುವುದು. ಈ ಪ್ರಕರಣದಲ್ಲಿ ನಾವು ಪ್ರಭಾಕರ ಭಟ್‌ಗೆ ಬಂಧಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.  ಈಗಾಗಿ ನ್ಯಾಯಾಧೀಶರು ಸರ್ಕಾರವೇ ಆರೋಪಿಯನ್ನು ಬಂಧಿಸಲ್ಲ ಎಂದಾದರೆ ತಡೆ ನೀಡುವ ಅಗತ್ಯ ಇಲ್ಲ ಎಂದು ಹೇಳಿದೆ.

ದೂರುದಾರರ ಪರ ವಕೀಲ ಬಾಲನ್ ಅವರು, ಆರೋಪಿಯನ್ನು ಬಂಧಿಸಿ ತನಿಖೆ ನಡೆಸುವ ಅಗತ್ಯ ಇದೆ. ಆರೋಪಿ ಕೋಮುಗಲಭೆ ಮಾಡುವ ಹುನ್ನಾರ ಹೊಂದಿದ್ದಾನೆ ಎಂದರು. ಆಗ ನ್ಯಾಯಮೂರ್ತಿ ರಾಜೇಶ್‌ ರೈ ಕೆ ಅವರ ನೇತೃತ್ವದ ರಜಾಕಾಲೀನ ಪೀಠ ಸರ್ಕಾರಕ್ಕೆ ಬಂಧನದ ಅಗತ್ಯ ಇಲ್ಲ ಎಂದ ಮೇಲೆ ಈ ವಿಚಾರದಲ್ಲಿ ಚರ್ಚೆ ಬೇಡ ಎಂದು ಹೇಳಿದೆ. ಮುಂದಿನ ವಿಚಾರಣೆಯನ್ನು ಜ.09, 2024ಕ್ಕೆ ಮುಂದೂಡಿದೆ.

ಪ್ರಭಾಕರ್‌ ಭಟ್‌ಗೆ ಮಧ್ಯಂತರ ಜಾಮೀನು ನೀಡಿರುವ ಬಗ್ಗೆ ವಕೀಲ ಮತ್ತು ಕರ್ನಾಟಕದ ಮಾಜಿ ಅಡ್ವೋಕೇಟ್ ಜನರಲ್ ಅರುಣಾ ಶ್ಯಾಮ್ ತಮ್ಮ ಸಾಮಾಜಿಕ ಮಾಧ್ಯಮದ ಮೂಲಕ ಖಚಿತಪಡಿಸಿದ್ದಾರೆ.

 

 

ಈ ಸಂಬಂಧ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಪತ್ರಕರ್ತ ನವೀನ್ ಸೂರಿಂಜೆ, “ಪ್ರಭಾಕರ ಭಟ್ಟರನ್ನು ಬಂಧಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ :ಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ‘ಬುರುಡೆ’ ಬಿಡ್ತಾರೆ: ಸಿಎಂ ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read