Homeಕರ್ನಾಟಕಹುಬ್ಬಳ್ಳಿ ಗಲಭೆ ಸೇರಿದಂತೆ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಹುಬ್ಬಳ್ಳಿ ಗಲಭೆ ಸೇರಿದಂತೆ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

- Advertisement -
- Advertisement -

ಹುಬ್ಬಳ್ಳಿ ಗಲಭೆ, ಹಾಲಿ ಕೇಂದ್ರ ಮತ್ತು ರಾಜ್ಯ ಸಚಿವರು, ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಕನ್ನಡಪರ ಹೋರಾಟಗಾರರು, ರೈತ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳಿಗೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್‌ ಗುರುವಾರ (ಮೇ.29) ರದ್ದುಪಡಿಸಿದೆ.

ಸರ್ಕಾರಿ ಅಭಿಯೋಜಕರಿಗೆ ಅಪರಾಧ ಪ್ರಕ್ರಿಯಾ ಸಂಹಿತೆ ಸೆಕ್ಷನ್‌ 321ರ ಅಡಿ ರಾಜ್ಯದ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ 43 ಪ್ರಕರಣಗಳನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರವು 2024ರ ಅಕ್ಟೋಬರ್‌ 10ರಂದು ಮಾಡಿರುವ ಆದೇಶ ಬದಿಗೆ ಸರಿಸಲು ಕೋರಿ ಬೆಂಗಳೂರಿನ ವಕೀಲ ಗಿರೀಶ್‌ ಭಾರದ್ವಾಜ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ವಿಭಾಗೀಯ ಪೀಠ ಪುರಸ್ಕರಿಸಿದೆ ಎಂದು barandbench.com ವರದಿ ಮಾಡಿದೆ.

“ಸರ್ಕಾರದ ಆದೇಶವನ್ನು ಬದಿಗೆ ಸರಿಸಲಾಗಿದೆ. ಆರಂಭದಿಂದಲೂ ಆದೇಶ ಅಸಿಂಧುವಾಗಿದೆ. ಕಾನೂನಿನ ಪರಿಣಾಮಗಳು ಜಾರಿಯಾಗಲಿವೆ” ಎಂದು ನ್ಯಾಯಾಲಯ ಹೇಳಿರುವುದಾಗಿ ವರದಿ ವಿವರಿಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲ ವೆಂಕಟೇಶ್‌ ದಳವಾಯಿ ಅವರು “ರಾಜ್ಯ ಸರ್ಕಾರವು ಸರ್ಕಾರಿ ಅಭಿಯೋಜಕರಿಗೆ ನಿರ್ದೇಶನ ನೀಡಲಾಗದು. ಸಿಆರ್‌ಪಿಸಿ ಸೆಕ್ಷನ್‌ 321ರ ಅಡಿ ಸರ್ಕಾರಿ ಅಭಿಯೋಜಕರಿಗೆ ಅಂತಿಮ ನಿರ್ಣಯ ತೆಗೆದುಕೊಳ್ಳುವ ಅಧಿಕಾರವಿದೆ. ಸರ್ಕಾರಿ ಅಭಿಯೋಜಕರ ಕಚೇರಿಯು ಅಂಚೆ ಕಚೇರಿಯ ರೀತಿ ನಡೆದುಕೊಳ್ಳಲಾಗದು ಎಂದು ಸುಪ್ರೀಂ ಕೋರ್ಟ್‌ ತೀರ್ಪೊಂದರಲ್ಲಿ ಹೇಳಿದೆ. ಪ್ರಕರಣ ಹಿಂಡೆಯುವಂತೆ ಅಭಿಯೋಜಕರಿಗೆ ಸರ್ಕಾರ ಒತ್ತಡ ಹಾಕಲಾಗದು. ಪ್ರಕರಣಗಳನ್ನು ಹಿಂಪಡೆಯಲು ಅರ್ಹವಾಗಿಲ್ಲ ಎಂದು ಕಾನೂನು ಮತ್ತು ಅಭಿಯೋಜನಾ ಇಲಾಖೆಯು ಟಿಪ್ಪಣಿಯಲ್ಲಿ ಹೇಳಿವೆ. ಅದಾಗ್ಯೂ, ಸರ್ಕಾರ ಆದೇಶ ಮಾಡಿದೆ” ಎಂದು ಹೇಳಿದ್ದರು.

“ಹಲವು ಆರೋಪಿಗಳ ಮೇಲೆ ದೊಂಬಿ, ಕೊಲೆ ಪ್ರಯತ್ನ, ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ ಮತ್ತು ಅತಿಕ್ರಮ ಪ್ರವೇಶದಂಥ ಗಂಭೀರ ಆರೋಪಗಳಿವೆ. ಸಾಮಾಜಿಕ ಮಾಧ್ಯಮದಲ್ಲಿನ ಪೋಸ್ಟ್‌ಗೆ ಆಕ್ಷೇಪಿಸಿ ಹುಬ್ಬಳ್ಳಿಯಲ್ಲಿ ಒಂದು ಕೋಮಿನವರು ಹಳೇಹುಬ್ಬಳ್ಳಿ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದ ಸಂಬಂಧ ದಾಖಲಾಗಿರುವ ಪ್ರಕರಣವೂ ಇದರಲ್ಲಿ ಸೇರಿದೆ” ಎಂದಿದ್ದರು.

ಯಾರದ್ದೆಲ್ಲ ಪ್ರಕರಣ ಹಿಂಪಡೆಯಲಾಗಿತ್ತು?

barandbench.com ವರದಿಯ ಪ್ರಕಾರ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್‌, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ, ವಿಧಾನಪರಿಷತ್‌ ಸದಸ್ಯ ಸಿ.ಟಿ ರವಿ, ನರಗುಂದದ ಬಿ.ಆರ್‌ ಯಾವಗಲ್‌, ಹಿರೇಕೆರೂರು ಶಾಸಕ ಯು. ಬಿ ಬಣಕಾರ್‌, ಕಾಂಗ್ರೆಸ್‌ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ ಗುತ್ತೇದಾರ, ಗುಜರಾತ್‌ ಶಾಸಕ ಜಿಗ್ನೇಶ್‌ ಮೇವಾನಿ, ಮಾಜಿ ಶಾಸಕರಾದ ದಾವಣಗೆರೆಯ ಎಸ್‌.ಎ ರವೀಂದ್ರನಾಥ್‌, ಬೆಳಗಾವಿಯ ಸಂಜಯ್‌ ಪಾಟೀಲ್, ಬಾಗಲಕೋಟೆಯ ಡಾ. ವೀರಣ್ಣ ಚರಂತಿಮಠ ಅವರ ವಿರುದ್ದ ಪ್ರಕರಣ ಹಿಂಪಡೆಯಲು ಸರ್ಕಾರ ಆದೇಶಿಸಿತ್ತು.

ಅಲ್ಲದೆ, ಹೊನ್ನಾಳಿಯ ಎಂ.ಪಿ ರೇಣುಕಾಚಾರ್ಯ, ಬೆಳಗಾವಿಯ ಅನಿಲ ಬೆನಕೆ, ಡಾ. ಎಸ್‌ ಸಿದ್ದಯ್ಯ, ಬೆಂಗಳೂರು ಗಾಮಾಂತರ ಜಿಲ್ಲೆಯ ಬಿ ಶಿವಣ್ಣ, ಭದ್ರಾವತಿಯ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಎಚ್‌. ಆರ್‌ ಬಸವರಾಜಪ್ಪ, ತುಮಕೂರಿನ ಯುವ ಕಾಂಗ್ರೆಸ್‌ ಅಧ್ಯಕ್ಷ ಶಶಿ ಹುಲಿಕುಂಟೆ, ಕಲಬುರಗಿ ಜಿಲ್ಲೆಯ ದರ್ಗಾ ಹಜರತ್‌ ಮಲಿಕುಲ್‌ ಮಶಾಲ್‌ಕಹ್‌ ಮಕ್ದೂಮ್‌ ಲಾಡಿ ಅನ್ಸಾರಿ (ಸುನ್ನಿ) ಅಧ್ಯಕ್ಷರು ಮತ್ತು ಕಾರ್ಯದರ್ಶಿ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ, ಅಖಿಲ ಕರ್ನಾಟಕ ಡಿ.ಕೆ ಶಿವಕುಮಾರ್‌ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಎಂ.ಎಸ್‌ ಅಂಗಡಿ, ಮೈಸೂರಿನ ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎನ್‌. ಭಾಸ್ಕರ್‌, ಭೀಮ್‌ ಆರ್ಮಿ ಜಿಲ್ಲಾ ಸಮಿತಿಯ ಅಧ್ಯಕ್ಷ ರಾಘು ಚಾಕ್ರಿ ಅವರ ವಿರುದ್ಧದ ಪ್ರಕರಣಗಳನ್ನೂ ಹಿಂಪಡೆಯಲು ಆದೇಶಿಸಲಾಗಿತ್ತು.

ಸೌಜನ್ಯ : barandbench.com

ಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...