Homeಕರ್ನಾಟಕಓಲಾ ಕ್ಯಾಬ್‌ನಲ್ಲಿ ಲೈಂಗಿಕ ಕಿರುಕುಳ ಪ್ರಕರಣ : ಸಂತ್ರಸ್ತೆಗೆ ಪರಿಹಾರ ಪಾವತಿಸುವ ಆದೇಶಕ್ಕೆ ಹೈಕೋರ್ಟ್ ತಡೆ

ಓಲಾ ಕ್ಯಾಬ್‌ನಲ್ಲಿ ಲೈಂಗಿಕ ಕಿರುಕುಳ ಪ್ರಕರಣ : ಸಂತ್ರಸ್ತೆಗೆ ಪರಿಹಾರ ಪಾವತಿಸುವ ಆದೇಶಕ್ಕೆ ಹೈಕೋರ್ಟ್ ತಡೆ

- Advertisement -
- Advertisement -

ಓಲಾ ಕ್ಯಾಬ್‌ನಲ್ಲಿ ಪ್ರಯಾಣಿಸುವ ವೇಳೆ ಚಾಲಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಯುವತಿಗೆ ಪರಿಹಾರ ರೂಪದಲ್ಲಿ 5 ಲಕ್ಷ ರೂಪಾಯಿ ಪಾವತಿಸುವಂತೆ ಓಲಾ ಕ್ಯಾಬ್‌ ಮಾತೃ ಸಂಸ್ಥೆ ಎಎನ್‌ಐ ಟೆಕ್ನಾಲಜೀಸ್ ಪ್ರೈವೆಟ್ ಲಿಮಿಟೆಡ್‌ಗೆ ಆದೇಶಿಸಿದ್ದ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶಕ್ಕೆ ರಜಾಕಾಲೀನ ವಿಭಾಗೀಯ ಪೀಠ ಶುಕ್ರವಾರ ತಡೆ ನೀಡಿದೆ.

ಎಎನ್‌ಐ ಟೆಕ್ನಾಲಜೀಸ್‌ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಎಸ್‌ ಆರ್‌ ಕೃಷ್ಣ ಕುಮಾರ್‌ ಮತ್ತು ಎಂ ಜಿ ಉಮಾ ಅವರ ವಿಭಾಗೀಯ ಪೀಠವು ನಡೆಸಿತು.

ಮೇಲ್ಮನವಿದಾರರ ಪರವಾಗಿ ವಾದಿಸಿದ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ ಅವರು “ಇದು 5 ಲಕ್ಷ ರೂ. ಪರಿಹಾರ ಪಾವತಿಸುವ ವಿಚಾರವಲ್ಲ. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ನಿಷೇಧ, ತಡೆ ಮತ್ತು ಪರಿಹಾರ) ಕಾಯ್ದೆ- 2013ರ ವ್ಯಾಖ್ಯಾನಕ್ಕೆ ಸಂಬಂಧಿಸಿದ ವಿಚಾರವಾಗಿದೆ. ನಾವು ಚಾಲಕರಿಗೆ ಉದ್ಯೋಗ ನೀಡಿಲ್ಲ. ಓಲಾ ಸೇವೆಯನ್ನು ಚಾಲಕರು ಬಳಸಿಕೊಳ್ಳುತ್ತಾರೆ. ಚಾಲಕರು ಸ್ವತಂತ್ರ ಗುತ್ತಿಗೆದಾರರಾಗಿದ್ದಾರೆ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಪ್ರಕರಣದ ವಿಚಾರಣೆ ಅಗತ್ಯವಿದೆ. ಹೀಗಾಗಿ, ಸದ್ಯಕ್ಕೆ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲಾಗಿದೆ. ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಅಕ್ಟೋಬರ್‌ 28ಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ಹೇಳಿದೆ.

ಸಂತ್ರಸ್ತೆ 5 ಲಕ್ಷ ರೂ. ಪರಿಹಾರ ಹಣ ಮಾತ್ರವಲ್ಲದೆ, ವ್ಯಾಜ್ಯ ವೆಚ್ಚವಾಗಿ ಹೆಚ್ಚುವರಿ 50 ಸಾವಿರ ರೂ. ಮೊತ್ತವನ್ನು ಕಂಪನಿ ಪಾವತಿಸಬೇಕು. ಇದಲ್ಲದೆ ಕರ್ನಾಟಕ ರಾಜ್ಯ ಸಾರಿಗೆ ಪ್ರಾಧಿಕಾರದ ಹೆಚ್ಚುವರಿ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಯವರು ವೈಯಕ್ತಿಕವಾಗಿ 1 ಲಕ್ಷ ರೂ. ಹಣವನ್ನು ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರಕ್ಕೆ ಪಾವತಿಸಬೇಕು. ಸಂತ್ರಸ್ತೆ ನೀಡಿದ ದೂರಿನ ಕುರಿತು ಕಂಪನಿಯ ಆಂತರಿಕ ದೂರುಗಳ ಸಮಿತಿ ವಿಚಾರಣೆ ನಡೆಸಬೇಕು. ಆ ವಿಚಾರಣಾ ಪ್ರಕ್ರಿಯೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸಬೇಕು. ಬೆಂಗಳೂರು ನಗರ ಜಿಲ್ಲಾಧಿಕಾರಿ ಸಮಿತಿಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಆದೇಶಿಸಿತ್ತು.

ಪ್ರಕರಣದ ಹಿನ್ನೆಲೆ : 2019ರಲ್ಲಿ ಓಲಾ ಕ್ಯಾಬ್‌ನಲ್ಲಿ ಪ್ರಯಾಣಿಸುವಾಗ ಚಾಲಕನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದು, ಚಾಲಕನ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ಸಂತ್ರಸ್ತೆಯು ಎಎನ್‌ಐ ಟೆಕ್ನಾಲಜೀಸ್‌ಗೆ ದೂರು ನೀಡಿದ್ದರು. ಆಂತರಿಕ ದೂರುಗಳ ಸಮಿತಿಯು ತಮ್ಮ ದೂರನ್ನು ಪರಿಗಣಿಸಿ ಅದರ ಬಗ್ಗೆ ವಿಚಾರಣೆ ನಡೆಸುವ ಅಧಿಕಾರ ಹೊಂದಿಲ್ಲ ಎಂದು ಕಂಪನಿ ಸಂತ್ರಸ್ತೆಗೆ ತಿಳಿಸಿತ್ತು. ಇದನ್ನು ಪ್ರಶ್ನಿಸಿ ಸಂತ್ರಸ್ತೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಸೌಜನ್ಯ : ಬಾರ್ & ಬೆಂಚ್ 

ಇದನ್ನೂ ಓದಿ : ಸಚಿವ ಸಂಪುಟದಲ್ಲಿ ಚರ್ಚಿಸಿ ಒಳ ಮೀಸಲಾತಿ ಜಾರಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...