Homeಕರ್ನಾಟಕʼಒಂದೇ ದೇಶ, ಒಂದೇ ಭಾಷೆʼ ಎಂಬ ಕರಾಳ ನೀತಿಯ ಮೂಲಕ ಹಿಂದಿ ಹೇರಿಕೆ: ಎಚ್.ಡಿ.ಕುಮಾರಸ್ವಾಮಿ

ʼಒಂದೇ ದೇಶ, ಒಂದೇ ಭಾಷೆʼ ಎಂಬ ಕರಾಳ ನೀತಿಯ ಮೂಲಕ ಹಿಂದಿ ಹೇರಿಕೆ: ಎಚ್.ಡಿ.ಕುಮಾರಸ್ವಾಮಿ

- Advertisement -
- Advertisement -

ʼಒಂದೇ ದೇಶ, ಒಂದೇ ಭಾಷೆʼ ಎನ್ನುವ ಕರಾಳ ನೀತಿಯ ಮೂಲಕ ಒಕ್ಕೂಟ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ. ಆಕಾಶವಾಣಿ ಮತ್ತು ದೂರದರ್ಶನದ ಪ್ರಾದೇಶಿಕ ಕೇಂದ್ರಗಳಿಗೆ ಬೀಗ ಜಡಿಯುವ ಹೇಯ ಕೃತ್ಯಕ್ಕೆ ಕೈಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕೆಯೊಂದರ ವರದಿ ಹಂಚಿಕೊಂಡಿರುವ ಅವರ ಸರಣಿ ಟ್ವೀಟ್‌ಗಳ ಮೂಲಕ ಒಕ್ಕೂಟ ಸರ್ಕಾರದ ಕ್ರಮಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ.

“ʼಒಂದೇ ದೇಶ, ಒಂದೇ ಭಾಷೆʼ ಎನ್ನುವ ಕರಾಳ ನೀತಿಯ ಮೂಲಕ ಒಕ್ಕೂಟ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿರುವ ಕೇಂದ್ರದ ನರೇಂದ್ರ ಮೋದಿ ಸರಕಾರವು ಈಗ ನಮ್ಮ ನಾಡಿನ ಗ್ರಾಮೀಣ, ಜಾನಪದ, ಸಾಂಸ್ಕೃತಿಕ ಸೊಗಡಿನ ದನಿಯಾಗಿರುವ ಆಕಾಶವಾಣಿ ಮತ್ತು ದೂರದರ್ಶನದ ಪ್ರಾದೇಶಿಕ ಕೇಂದ್ರಗಳಿಗೆ ಬೀಗ ಜಡಿಯುವ ಹೇಯ ಕೃತ್ಯಕ್ಕೆ ಕೈಹಾಕಿರುವುದು ಖಂಡನೀಯ” ಎಂದಿದ್ದಾರೆ.

ಇದನ್ನೂ ಓದಿ: ‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

ಪತ್ರಿಕೆಯೊಂದರಲ್ಲಿ ಪ್ರಕಟವಾಗಿರುವ ವರದಿ ಹಂಚಿಕೊಂಡಿರುವ ಅವರು, “ಪತ್ರಿಕೆಯಲ್ಲಿ ಪ್ರಕಟವಾಗಿರುವ ವರ ಮತ್ತು ಸಂಪಾದಕೀಯ ಅತ್ಯಂತ ಕಳವಳಕಾರಿ. ವಿವಿಧತೆಯಲ್ಲಿ ಏಕತೆಯನ್ನು ಮೈದುಂಬಿಕೊಂಡು ಜಗತ್ತಿಗೆ ʼಬಹುತ್ವತೆಯ ಆದರ್ಶʼ ಆಗಿರುವ ಭಾರತದ ಪ್ರಾದೇಶಿಕ ವೈವಿಧ್ಯಮಯ ಅನನ್ಯ ಸಾಂಸ್ಕೃತಿಕ, ಜಾನಪದ ಸಂಪತ್ತಿಗೆ ಕೇಂದ್ರ ಸರಕಾರ ಕೊಳ್ಳಿ ಇಡಲು ಹೊರಟಿದೆ” ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
 “ಈಗಾಗಲೇ ಡಿಡಿ, ಆಕಾಶವಾಣಿಯ ಒಂದೊಂದೇ ಪ್ರಾದೇಶಿಕ ಕಾರ್ಯಕ್ರಮ ಸ್ಥಗಿತಗೊಳಿಸಿದ ನಂತರ ಪ್ರಾದೇಶಿಕ ಪ್ರಸಾರ ಕೇಂದ್ರಗಳನ್ನೂ ಮುಚ್ಚುವ ಹುನ್ನಾರ ನಡೆಸಿದೆ. ಅಕ್ಟೋಬರ್‌ 31ರಿಂದ ಕಲಬುರಗಿ ಪ್ರಾದೇಶಿಕ ಕೇಂದ್ರಕ್ಕೂ ಬೀಗ ಜಡಿಯಲು ಪ್ರಸಾರ ಭಾರತಿ ಹೊರಟಿದೆ. ಇದು ಕನ್ನಡ ವಿರೋಧಿ ನಡೆ, ಪ್ರಾದೇಶಿಕ ಭಾಷೆಗಳಿಗೆ ಚರಮಗೀತೆ ಹಾಡುವ ದಮನ ನೀತಿ” ಎಂದು ಕಿಡಿಕಾರಿದ್ದಾರೆ.
“ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ! ಇಂಗ್ಲೀಷ್ʼಗೆ ದ್ವಿತೀಯ ಸ್ಥಾನ! ಕನ್ನಡಕ್ಕೆ ಮೂರನೇ ಸ್ಥಾನ!! ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ” ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ!- ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೀಟ್ ಕೃಪಾಂಕ ರದ್ದು ಹಗರಣ ಮುಚ್ಚಿ ಹಾಕುವ ಪ್ರಯತ್ನ : ಎಂ.ಕೆ ಸ್ಟಾಲಿನ್

0
ನೀಟ್ ವಿದ್ಯಾರ್ಥಿಗಳ ಕೃಪಾಂಕ ರದ್ದುಗೊಳಿಸಿ ಮರು ಪರೀಕ್ಷೆಗೆ ಮುಂದಾಗಿರುವುದು ಹಗರಣವನ್ನು ಮುಚ್ಚಿ ಹಾಕುವ ಪ್ರಯತ್ನ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಹಗರಣದ ಆರೋಪ ಕೇಳಿ ಬಂದ ಬೆನ್ನಲ್ಲೇ 1,563...