Homeಮುಖಪುಟನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

- Advertisement -
- Advertisement -

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ ಸಾರ್ವಜನಿಕರಿಗೆ 10 ಸಾವಿರದಿಂದ 50 ಸಾವಿರ ರೂಪಾಯಿಗಳವರೆಗೆ ನಗದು ಬಹುಮಾನ ನೀಡುವುದಾಗಿ ಆರೋಗ್ಯ ಇಲಾಖೆ ಅಧಿಕೃತವಾಗಿ ಘೋಷಿಸಿದೆ.

ನಕಲಿ ಔಷಧಗಳ ಜಾಲವನ್ನು ತಳಮಟ್ಟದಿಂದಲೇ ಕಿತ್ತು ಹಾಕಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. ಸಾರ್ವಜನಿಕರು ತಮ್ಮ ಸುತ್ತಮುತ್ತ ಅನುಮಾನಾಸ್ಪದ ರೀತಿಯಲ್ಲಿ ನಡೆಯುತ್ತಿರುವ ಔಷಧ ತಯಾರಿಕೆ, ನಕಲಿ ಮೆಡಿಕಲ್ ಸ್ಟೋರ್‌ಗಳು ಅಥವಾ ಯಾವುದೇ ರೀತಿಯ ಔಷಧ ದಂಧೆಯ ಬಗ್ಗೆ ಮಾಹಿತಿ ಇದ್ದರೆ ತಕ್ಷಣವೇ ರಾಜ್ಯ ಔಷಧ ನಿಯಂತ್ರಣ ಮಂಡಳಿಯ ಸಹಾಯವಾಣಿ ಅಥವಾ ಇಲಾಖೆಯ ಅಧಿಕೃತ ಪೋರ್ಟಲ್‌ಗೆ ದೂರು ನೀಡಬಹುದಾಗಿದೆ.

ಸಾರ್ವಜನಿಕರಿಂದ ಲಭ್ಯವಾಗುವ ಸುಳಿವು ಆಧರಿಸಿ ಔಷಧ ನಿಯಂತ್ರಣ ಅಧಿಕಾರಿಗಳು ತಕ್ಷಣ ಕ್ಷಿಪ್ರ ಪರಿಶೀಲನೆ ಹಾಗೂ ದಾಳಿ ನಡೆಸಲಿದ್ದಾರೆ. ತನಿಖೆಯಲ್ಲಿ ನಕಲಿ ಔಷಧ ತಯಾರಿಕೆ ಅಥವಾ ಮಾರಾಟ ಸಾಬೀತಾದರೆ ಸಂಬಂಧಪಟ್ಟ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ನಕಲಿ ಔಷಧ ಜಾಲದ ಕುರಿತು ಸುಳಿವು ನೀಡುವ ಸಾರ್ವಜನಿಕರ ವಿವರ ಹಾಗೂ ಮಾಹಿತಿಯನ್ನು ಸಂಪೂರ್ಣ ಗೌಪ್ಯವಾಗಿಡಲಾಗುವುದು. ಹೀಗಾಗಿ ಸಾರ್ವಜನಿಕರು ಯಾವುದೇ ಭಯವಿಲ್ಲದೆ ಧೈರ್ಯವಾಗಿ ಅಧಿಕಾರಿಗಳಿಗೆ ಮಾಹಿತಿ ನೀಡಬಹುದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚೆಗೆ ಬಿಡದಿಯಲ್ಲಿ ಪತ್ತೆಯಾದ ನಕಲಿ ಔಷಧ ತಯಾರಿಕಾ ದಂಧೆಯ ತನಿಖೆ ವೇಳೆ ಈ ಜಾಲವು ಮಹಾರಾಷ್ಟ್ರ, ಮುಂಬೈ, ಹಿಮಾಚಲ ಪ್ರದೇಶ ಸೇರಿದಂತೆ ದೇಶದ ಹಲವು ರಾಜ್ಯಗಳಿಗೆ ಹರಡಿರುವ ಅಂತರರಾಜ್ಯ ದಂಧೆ ಎಂಬುದು ಬೆಳಕಿಗೆ ಬಂದಿದೆ. ವಿಶೇಷವಾಗಿ ಕ್ಯಾನ್ಸರ್, ಹೃದಯಸಂಬಂಧಿ ಕಾಯಿಲೆ ಹಾಗೂ ದುಬಾರಿ ಬೆಲೆಯ ಜೀವರಕ್ಷಕ ಔಷಧಗಳನ್ನೇ ಗುರಿಯಾಗಿಸಿಕೊಂಡು ಈ ನಕಲಿ ಜಾಲ ಸಕ್ರಿಯವಾಗಿತ್ತು.

ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ವಿವಿಧ ರಾಜ್ಯಗಳ ಡ್ರಗ್‌ ಕಂಟ್ರೋಲರ್ ಮತ್ತು ರಾಜ್ಯ ಪರವಾನಗಿ ಸಮಿತಿಗಳು ಈಗಾಗಲೇ ಅಲರ್ಟ್‌ ಆಗಿದ್ದು, ರೋಗಿಗಳ ಜೀವದ ಜೊತೆ ಚೆಲ್ಲಾಟವಾಡುವ ಈ ಜಾಲವನ್ನು ಸಂಪೂರ್ಣವಾಗಿ ಮಟ್ಟಹಾಕಲು ಎಲ್ಲರೂ ಜಾಗೃತರಾಗಿರಬೇಕು ಹಾಗೂ ಅನುಮಾನಾಸ್ಪದ ಔಷಧಗಳು ಕಂಡುಬಂದರೆ ತಕ್ಷಣ ವರದಿ ಮಾಡಬೇಕು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...

‘ನಾವು Gen Z’ ಎಂಬುದು ‘ನನ್ನಪ್ಪ ಯಾರು ಗೊತ್ತಾ?’ ಎಂಬಂತಾಗಬಾರದು: ಒಮರ್ ಅಬ್ದುಲ್ಲಾ

ಸಣ್ಣಪುಟ್ಟ ಅಸಮಾಧಾನ ಅಥವಾ ಭಿನ್ನಾಪ್ರಾಯಗಳು ಎದುರಾದಾಗಲೆಲ್ಲ 'ನಾವು Gen Z' (ಜೆನ್ ಝೀ) ಎಂದು ಹೇಳಿಕೊಳ್ಳುವುದು, 'ನನ್ನಪ್ಪ ಯಾರು ಗೊತ್ತಾ?' (ಜಾಂತೇ ನಹೀನ್ ಹೋ, ಮೇರಾ ಬಾಪ್ ಕೌನ್ ಹೈ) ಎಂಬ ಹಳೆಯ...

ಪಶ್ಚಿಮ ಬಂಗಾಳ | ಬಾರ್ ಕೌನ್ಸಿಲ್ ಚುನಾವಣೆಯಲ್ಲಿ ಟಿಎಂಸಿಗೆ ಭರ್ಜರಿ ಗೆಲುವು

ವಿಧಾನಸಭಾ ಚುನಾವಣೆ ನಂತರ ಪಕ್ಷದಲ್ಲಿ ಉಂಟಾದ ಬಂಡಾಯ, ಪಕ್ಷಾಂತರಗಳು, ಕಾನೂನು ಪ್ರಕರಣಗಳು ಮತ್ತು ರಾಜಕೀಯ ಆರೋಪಗಳಿಂದ ಸಾಲು ಸಾಲು ಹಿನ್ನಡೆಗಳನ್ನು ಎದುರಿಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಕೊನೆಗೂ...

ವಂದೇ ಮಾತರಂ ವಿವಾದ: ಕಾಂಗ್ರೆಸ್ ಪಕ್ಷವನ್ನು ‘ನ್ಯೂ ​​ಮುಸ್ಲಿಂ ಲೀಗ್’ ಎಂದು ಕರೆದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್

ತಮ್ಮ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ನಿರ್ಧರಿಸಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್, "ಮತಗಳಿಗಾಗಿ ವಿರೋಧ ಪಕ್ಷವು ಹೊಸ ಮುಸ್ಲಿಂ ಲೀಗ್...

ದೆಹಲಿ: ಪಟ್ಟಿಯಿಂದ ಹೊರಗುಳಿದಿರುವ 47.7 ಲಕ್ಷ ಮತದಾರರ ಹೆಸರುಗಳನ್ನು ಪ್ರಕಟಿಸಿ, ಕರಡು ಪಟ್ಟಿಗೆ ಮುನ್ನ ತಿದ್ದುಪಡಿಗೆ ಅವಕಾಶ ನೀಡಿ: ಮತದಾರರ ಅಧಿಕಾರ ಮಂಚ್ ಸೂಚನೆ

ದೆಹಲಿ: ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ "ಸಂಗ್ರಹಿಸಲು ಸಾಧ್ಯವಾಗದವರು" ಎಂದು ಗುರುತಿಸಿ ಹೊರಗಿಡಲಾಗಿರುವ ಬರೋಬ್ಬರಿ 47.7 ಲಕ್ಷ ಮತದಾರರ ಮತಗಟ್ಟೆವಾರಿನ ಪಟ್ಟಿಯನ್ನು ತಕ್ಷಣವೇ...

ದ್ವೇಷ ಭಾಷಣ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಜಾಮೀನು ರಹಿತ ವಾರಂಟ್

ದ್ವೇಷ ಭಾಷಣಕ್ಕೆ (Hate Speech) ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೆ ಸಮನ್ಸ್ ನೀಡಿದ್ದರೂ ನ್ಯಾಯಾಲಯಕ್ಕೆ ಗೈರುಹಾಜರಾದ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪಶ್ಚಿಮ ಬಂಗಾಳದ ಕೃಷ್ಣನಗರ ನ್ಯಾಯಾಲಯವು...

ಬಿಹಾರ| ಉಪ್ಪಿನ ಬದಲು ಡಿಟರ್ಜೆಂಟ್ ಬಳಸಿ ಅಡುಗೆ; ಊಟ ಸೇವಿಸಿದ 34 ಶಾಲಾ ಮಕ್ಕಳು ಅಸ್ವಸ್ಥ

ಬಿಹಾರದ ನಳಂದ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ನಂತರ 34 ಮಕ್ಕಳು ಅಸ್ವಸ್ಥರಾಗಿದ್ದಾರೆ. ಅಡುಗೆಯವರು ಉಪ್ಪಿನ ಬದಲಿಗೆ ಕಣ್ತಪ್ಪಿನಿಂದ ಡಿಟರ್ಜೆಂಟ್ ಪುಡಿಯನ್ನು ಬೆರೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಗಸ್ಟ್ 18 ರ ಮಂಗಳವಾರ ಪಾರ್ಸಾ ಪ್ರಾಥಮಿಕ...

ಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು

ಸಾಲದ ಸುಳಿಗೆ ಸಿಲುಕಿ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ಬೆಳಗಾವಿ ನಗರದ ಮಂಗಾಯಿ ನಗರದ 4ನೇ ಕ್ರಾಸ್‌ನಲ್ಲಿ ಸಂಭವಿಸಿದೆ. ಮೃತರನ್ನು ವಿಠ್ಠಲ ಲಿಂಗಪ್ಪ ಲೋಕರಿ ಎಂದು...